ಬೆಂಗಳೂರು: ರಾಜ್ಯದಲ್ಲಿ ಮೀಸಲಾತಿ ರಾಜಕೀಯ ಮುಂದುವರೆದಿದ್ದು ಇಂದು ಪಂಚಮಸಾಲಿ ಸಮುದಾಯದ ಮುಖಂಡರು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರನ್ನ ಭೇಟಿಮಾಡಿ ಮನವಿ ಸಲ್ಲಿಸಿದರು. ಪಂಚಮಸಾಲಿ ಸಮುದಾಯವನ್ನು ರಾಜ್ಯ 2ಎ ಪಟ್ಟಿಗೆ ಸೇರಿಸುವ ವಿಚಾರವಾಗಿ ಶ್ರೀ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಪಂಚಮಸಾಲಿ ಶಾಸಕರ ನಿಯೋಗವು ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿದರು.


ಕುಮಾರಕೃಪಾ ಅತಿಥಿ ಗೃಹದಲ್ಲಿ ನಿಯೋಗವು ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿ ತಮ್ಮ ಮನವಿ ಸಲ್ಲಿಸಿತು. ಪಂಚಮಸಾಲಿ ಸಮುದಾಯವನ್ನು ರಾಜ್ಯ 2ಎ ಪಟ್ಟಿಗೆ ಹಾಗೂ ಕೇಂದ್ರ ಸರ್ಕಾರದ ಒಬಿಸಿ ಮೀಸಲಾತಿಗೆ ಸೇರಿಸಲು ನಿಯೋಗ ಮನವಿ ಮಾಡಿದೆ. ಶೈಕ್ಷಣಿಕವಾಗಿ ಹಾಗೂ ಸಾಮಾಜಿಕವಾಗಿ ಹಿಂದುಳಿದ ಪಂಚಮಸಾಲಿ ಸಮುದಾಯವನ್ನು ಹಿಂದುಳಿದ ವರ್ಗಗಳ ಪಟ್ಟಿಗೆ ಸೇರಿಸಬೇಕು. ಇದರಿಂದ ಸಮುದಾಯ ಮುಖ್ಯವಾಹಿನಿಗೆ ಬರಲು ಅನುಕೂಲವಾಗುತ್ತದೆ ಎಂದು ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದ್ಧಾರೆ.

ನಿಯೋಗದಲ್ಲಿ ಮಹಿಳಾ ಹಾಗೂ ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಶಾಸಕರಾದ ವಿನಯ್ ಕುಲಕರ್ಣಿ, ವಿಜಯಾನಂದ ಕಾಶಪ್ಪನವರ್, ವೀಣಾ ಕಾಶಪ್ಪನವರ್, ಪ್ರಸಾದ್ ಅಬ್ಬಯ್ಯ ಹಾಗೂ ಸಮುದಾಯದ ಮುಖಂಡರು ಉಪಸ್ಥಿತರಿದ್ದರು.






