ರಾಜ್ಯದಲ್ಲಿ ಪಂಚಮಸಾಲಿ ಸಮುದಾಯದ ಮೀಸಲಾತಿ ಕಿಚ್ಚು ಇನ್ನಷ್ಟು ಹೆಚ್ಚಾಗೋ ಸಾಧ್ಯತೆಗಳಿದೆ. ಈ ಬಾರಿ ಸಿಎಂ ಸಿದ್ದರಾಮಯ್ಯ ಸ್ವಕ್ಷೇತ್ರದಿಂದಲೇ ಹೋರಾಟಕ್ಕೆ ಮುಂದಾಗ್ತಾರಾ ಬಸವಜಯ ಮೃತ್ಯುಂಜಯ ಸ್ವಾಮೀಜಿ..? ಎಂಬ ಪ್ರಶ್ನೆ ಎದುರಾಗಿದೆ. ಪಂಚಮಸಾಲಿ 2A ಮೀಸಲಾತಿ ಹೋರಾಟಗಾರರ ಮೇಲೆ ಲಾಠಿ ಚಾರ್ಜ್ ಮಾಡಿದ ಅಪಮಾನಕ್ಕೆ ಪ್ರತೀಕಾರದ ಹೋರಾಟಕ್ಕೆ ಬಸವಜಯ ಮೃತ್ಯುಂಜಯ ಸ್ವಾಮೀಜಿ ಮುಂದಾಗಿದ್ದಾರೆ ಎನ್ನಲಾಗಿದೆ.

ರಾಜ್ಯದ 224 ವಿಧಾನಸಭೆಗಳ 18,000 ಹಳ್ಳಿಗಳ ಮನೆಮನೆಗೆ ತೆರಳಲು ನಿರ್ಧಾರ ಮಾಡಿದ್ದು,ಲಾಠಿ ಚಾರ್ಜ್ ಮಾಡಿಸಿಕೊಂಡವರನ್ನ ವೇದಿಕೆ ಕರೆದು ಸನ್ಮಾನಿಸಿ ಪಂಚಮಸಾಲಿ ವೀರರು ಎಂದು ಸ್ವಾಮೀಜಿ ಘೋಷಿಸಿದ್ದಾರೆ.ಆ ಮೂಲಕ ಮತ್ತೆ ಪಂಚಮಸಾಲಿ 2ಎ ಮೀಸಲಾತಿ ಹೋರಾಟ ಮುನ್ನೆಲೆಗೆ ಬಂದಿದೆ.
ಇನ್ನು ಸಿಎಂ ಸಿದ್ದರಾಮಯ್ಯ ಕ್ಷೇತ್ರ ವರುಣಾದಿಂದಲೇ ಮನೆ ಮನೆ ಜಾಗೃತಿ ಹೋರಾಟಕ್ಕೆ ನಿರ್ಧರಿಸೋ ಸ್ವಾಮಿಜಿ ನಿರ್ಧರಿಸುವ ಸಾಧ್ಯತೆಯಿದೆ.ಮಕರ ಸಂಕ್ರಾಂತಿ ದಿನ ಕೂಡಲ ಸಂಗಮದಲ್ಲಿ ನಡೆದ ಸಭೆಯಲ್ಲಿ ಪ್ರತಿಜ್ಞಾ ವಿಧಿ ಅಭಿಯಾನ ಪಂಚಮಸಾಲಿ ಸಮುದಾಯ ಕೈಗೊಂಡಿದೆ.

ಹೀಗಾಗಿ ಮೀಸಲಾತಿಗಾಗಿ ಮತ್ತೊಂದು ಸುತ್ತಿನ ಹೋರಾಟಕ್ಕೆ ಪಂಚಮಸಾಲಿ ಸಮುದಾಯ ಅಣಿಯಾದಂತೆ ಕಾಣುತ್ತಿದೆ.ಈ ಬಾರಿ ಸಿಎಂ ಕ್ಷೇತ್ರ ವರುಣಾದಿಂದ ಹೋರಾಟಕ್ಕೆ ಸಜ್ಜಾಗೋ ಸಾಧ್ಯತೆಗಳು ದಟ್ಟವಾಗಿದೆ.ಇನ್ಮುಂದೆ ಸಿಎಂ ಬಳಿ ಮೀಸಲಾತಿ ಕೇಳಲು ಹೋಗಲ್ಲ, ಬದಲಾಗಿ ಜನರ ಮನೆಮನೆಗೆ ತೆರಳಿ ಜಾಗೃತಿ ಮಾಡ್ತೇವೆ ಎಂದು ಸ್ವಾಮೀಜಿ ಹೇಳಿದ್ದಾರೆ.