ಇಂಗ್ಲೆಂಡ್ ವಿರುದ್ಧದ 2ನೇ ಟಿ-20 ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡ ರನ್ ಚೇಸ್ ಮಾಡಲು ನಿರ್ಧರಿಸಿದೆ.
ಲಾರ್ಡ್ಸ್ ಮೈದಾನದಲ್ಲಿ ಗುರುವಾರ ನಡೆಯುತ್ತಿರುವ 2ನೇ ಟಿ-20 ಪಂದ್ಯದಲ್ಲಿ ಟಾಸ್ ಗೆದ್ದ ನಾಯಕ ರೋಹಿತ್ ಶರ್ಮ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದ್ದು, ಆತಿಥೇಯ ತಂಡವನ್ನು ಮೊದಲು ಬ್ಯಾಟ್ ಮಾಡಲು ಆಮಂತ್ರಿಸಿದರು.
ಗಾಯಗೊಂಡಿದ್ದ ವಿರಾಟ್ ಕೊಹ್ಲಿ ಈ ಪಂದ್ಯಕ್ಕೆ ಮರಳಿದ್ದಾರೆ. ಕೊಹ್ಲಿ ಬದಲು ಸ್ಥಾನ ಪಡೆದಿದ್ದ ಶ್ರೇಯಸ್ ಅಯ್ಯರ್ ಜಾಗ ಬಿಟ್ಟುಕೊಟ್ಟಿದ್ದಾರೆ.
![](https://pratidhvani.com/wp-content/uploads/2022/07/Rohit-Sharma-VS-Virat-Kohli.jpg)
ತೊಡೆ ಸಂಧು ನೋವು ಕಾಣಿಸಿಕೊಂಡಿದ್ದರಿಂದ ಕೊಹ್ಲಿ ಮೊದಲ ಪಂದ್ಯದಿಂದ ಹೊರಗುಳಿದಿದ್ದರು. ಈ ಪಂದ್ಯವನ್ನು ಭಾರತ 10 ವಿಕೆಟ್ ಗಳ ಭಾರೀ ಅಂತರದಿಂದ ಗೆಲುವು ಸಾಧಿಸಿತ್ತು.
ಇಂಗ್ಲೆಂಡ್ ತಂಡದಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ. ಮೊದಲ ಪಂದ್ಯದಲ್ಲಿ ಬ್ಯಾಟ್ಸ್ ಮನ್ ಗಳ ವೈಫಲ್ಯದಿಂದ 110 ರನ್ ಗಳಿಗೆ ತಂಡ ಆಲೌಟಾಗಿತ್ತು.