ನಾಳೆ (ಮಾ.೧) ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆ (2nd puc exams) ಆರಂಭವಾಗಲಿದೆ. ಮಾರ್ಚ್ 1ರಿಂದ 20ರವರೆಗೆ ನಡೆಯಲಿರೋ ಪರೀಕ್ಷೆ ಅವಧಿಯಲ್ಲಿ, ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ಪಾಲಿಸಬೇಕಾದ ಕೆಲವು ಸೂಚನೆಗಳನ್ನ ನೀಡಲಾಗಿದೆ.

ಪರೀಕ್ಷೆಯ ಸಮಯದಲ್ಲಿ ಪರೀಕ್ಷಾ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳಿಗೆ ಮೊಬೈಲ್ (Mobile), ಸ್ಮಾಟ್ ವಾಚ್ (Smart watch) ಎಲೆಕ್ಟ್ರಾನಿಕ್ ಸಾಮಾಗ್ರಿಗಳನ್ನು (Electronic gadgets) ಒಯ್ಯುವುದು ಮತ್ತು ಬಳಸುವುದನ್ನು ಸಂಪೂರ್ಣವಾಗಿ ನಿಷೇಧ ಮಾಡಲಾಗಿದೆ. ಮುಖ್ಯ ಅಧೀಕ್ಷಕರು ಕೂಡ ಕ್ಯಾಮೆರಾ ಹೊಂದಿರದ ಸಾಮಾನ್ಯ ಮೊಬೈಲ್ ಮಾತ್ರ ಇರಿಸಿಕೊಳ್ಳಲು ಅವಕಾಶ ನೀಡಲಾಗಿದೆ.

ಪರೀಕ್ಷೆ ಮುಗಿಯುವ ವರೆಗೆ ಪರೀಕ್ಷಾ ಕೇಂದ್ರಗಳ 200 ಮೀಟರ್ ವ್ಯಾಪ್ತಿಯಲ್ಲಿರುವ ಜೆರಾಕ್ಸ್ ಅಂಗಡಿಗಳು ಕಾರ್ಯನಿರ್ವಹಿಸುವುದು ಸೇರಿದಂತೆ ಅನೇಕ ನಿರ್ಬಂಧಗಳನ್ನು ವಿಧಿಸಲಾಗಿದೆ. ಹೀಗಾಗಿ ಈ ಎಲ್ಲಾ ಅಂಸಹಗಳನ್ನು ಮನಗಂಡು ವಿದ್ಯಾರ್ಥಿಗಳು ಯಾವುದೇ ತೊಂದರೆ ಆಗದ ರೀತಿಯಲ್ಲಿ ಪರೀಕ್ಷೆಗಳಿಗೆ ಹಾರಾಜಗಳು ತಿಳಿಸಲಾಗಿದೆ.