ಪದವಿ ಪೂರ್ವ ಶಿಕ್ಷಣ ಇಲಾಖೆಯು 2022ನೇ ಸಾಲಿನಲ್ಲಿ ನಡೆಯಲಿರುವ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ದಿನಾಂಕ, ಅರ್ಜಿ ಸಲ್ಲಿಸುವ ದಿನಾಂಕ, ಅರ್ಜಿ ಕೊನೆಯ ದಿನ, ಶುಲ್ಕದ ಬಗ್ಗೆ ಸಂಪೂರ್ಣ ಮಾಹಿತಿಯ ಸುತ್ತೋಲೆಯನ್ನು ಬಿಡುಗಡೆ ಮಾಡಿದೆ.
ಪುನರಾವರ್ತಿತ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸುವ ಕುರಿತು ಪದವಿ ಪೂರ್ವ ಶಿಕ್ಷಣ ಇಲಾಖೆ ಹೊರಡಿಸಿರುವ ಸುತ್ತೋಲೆಯಲ್ಲಿ, 2022ನೇ ಸಾಲಿನಲ್ಲಿ ನಡೆಯಲಿರುವ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗೆ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ದಿನಾಂಕವನ್ನು ನಿಗದಿಪಡಿಸಲಾಗಿದೆ. ಎಲ್ಲಾ ಕಾಲೇಜಿನ ಪ್ರಾಂಶುಪಾಲರುಗಳು ಈ ಸುತ್ತೋಲೆಯನ್ನು ಕಡ್ಡಾಯವಾಗಿ ಸೂಚನಾ ಫಲಕದಲ್ಲಿ ಪ್ರಕಟಿಸುವಂತೆ ಪಿಯು ಬೋರ್ಡ್ ಆದೇಶಿಸಿದೆ.
ಏಪ್ರಿಲ್/ಮೇ 2022 ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಹಾಗೂ ಹಿಂದಿನ ಸಾಲಿನ ಪರೀಕ್ಷೆಗಳಲ್ಲಿ ಅನುತ್ತೀರ್ಣರಾಗಿರುವ ವಿದ್ಯಾರ್ಥಿಗಳಿಂದ ಮೂಲ ಅನುತ್ತೀರ್ಣ ಅಥವಾ ಹಿಂದಿನ ಎಂ.ಸಿ.ಎ ಗಳ ಆಧಾರದ ಮೇಲೆ ಪರೀಕ್ಷಾ ಶುಲ್ಕಗಳನ್ನು ಸ್ವೀಕರಿಸಿ ಇಲಾಖೆ ಸ್ಯಾಟ್ಸ್ ತಂತ್ರಾಂಶದಲ್ಲಿ ವಿದ್ಯಾರ್ಥಿಗಳ ಮಾಹಿತಿಯನ್ನು ಭರ್ತಿ ಮಾಡುವಂತೆ ತಿಳಿಸಿದೆ.