ಇಂಗ್ಲೆಂಡ್ ವಿರುದ್ಧದ ಎರಡನೇ ಟಿ-20 ಪಂದ್ಯದಲ್ಲಿ ಟಾಸ್ ಸೋತರೂ ಭಾರತ ತಂಡ ಮೊದಲು ಬ್ಯಾಟ್ ಮಾಡುವ ಅವಕಾಶ ಪಡೆದಿದೆ.
ಬರ್ಮಿಂಗ್ ಹ್ಯಾಂ ನಲ್ಲಿ ಶನಿವಾರ ನಡೆದ ಪಂದ್ಯದಲ್ಲಿ ಭಾರತ ತಂಡದಲ್ಲಿ 4 ಬದಲಾವಣೆ ಮಾಡಲಾಗಿದ್ದು, ಮಾಜಿ ನಾಯಕ ವಿರಾಟ್ ಕೊಹ್ಲಿ, ರಿಷಭ್ ಪಂತ್, ಜಸ್ ಪ್ರೀತ್ ಬುಮ್ರಾ ಮತ್ತು ರವೀಂದ್ರ ಜಡೇಜಾ ಸ್ಥಾನ ಪಡೆದಿದ್ದಾರೆ.

ನಾಯಕ ರೋಹಿತ್ ಶರ್ಮ ಜೊತೆ ರಿಷಭ್ ಪಂತ್ ಆರಂಭಿಕನಾಗಿ ಕಣಕ್ಕಿಳಿದಿದ್ದಾರೆ. ಕೊಹ್ಲಿಗಾಗಿ ಇಶಾನ್ ಕಿಶನ್ ಸ್ಥಾನ ಬಿಟ್ಟುಕೊಟ್ಟಿದ್ದಾರೆ. ಭುವನೇಶ್ವರ್ ಕುಮಾರ್, ಅರ್ಷದೀಪ್ ಸಿಂಗ್, ದೀಪಕ್ ಹೂಡಾ ತಂಡದಿಂದ ಹೊರಬಿದ್ದಿದ್ದಾರೆ.