ಮಹಾರಾಷ್ಟ್ರದ ಮುಂಬೈನಲ್ಲಿ ನಿತ್ಯ ಉಂಟಾಗುತ್ತಿರುವ ಟ್ರಾಫಿಕ್ ಸಮಸ್ಯೆಯಿಂದಾಗಿ ಶೇ. 3 ರಷ್ಟು ವಿಚ್ಚೇದನ ಪ್ರಕರಣಗಳು ಹೆಚ್ಚಾಗಿದೆ ಎಂದು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಪತ್ನಿ ಅಮೃತಾ ಫಡ್ನವೀಸ್ ಹೇಳಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಶಿವಸೇನಾ ನಾಯಕಿ ಪ್ರಿಯಾಂಕ ಚರ್ತುವೇದಿ, ʼಈ ದಿನದ ಜೋಕ್ ಎಂದು ಅಮೃತಾ ಹೇಳಿಕೆಯನ್ನು ಟೀಕಿಸಿದ್ದಾರೆ. ಅಮೃತಾ ಹೇಳಿಕೆ ಈಗ ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್ ಆಗುತ್ತಿದೆ.
ಮುಂಬೈನಲ್ಲಿ ಹದಗೆಟ್ಟಿರುವ ರಸ್ತೆ ಮತ್ತು ರಸ್ತೆ ಗುಂಡಿಗಳ ಕುರಿತು ಸುದ್ದಿಗಾರರೊಂದಿಗೆ ಮಾತನಾಡುವ ವೇಳೆ, ಮುಂಬೈನಲ್ಲಿ 3% ವಿಚ್ಚೇದನಗಳು ಹೆಚ್ಚಾಗಿವೆ. ಜನರು ಹೆಚ್ಚಾಗಿ ಟ್ರಾಫಿಕ್ ಜಾಮ್ ನಿಂದ ಕುಟುಂಬಕ್ಕೆ ಅಗತ್ಯ ಸಮಯ ನೀಡಲಾಗದೆ ಸಂಸಾರದಲ್ಲಿ ಬಿರುಕು ಮೂಡುತ್ತಿವೆ ಎಂದು ಹೇಳಿದ್ದಾರೆ.
ಮುಂದುವರೆದು, ನಾನು ಮಾಜಿ ಮುಖ್ಯಮಂತ್ರಿ ಪತ್ನಿ ಎಂಬ ಅಂಶವನ್ನ ಬದಿಗಿಟ್ಟು ನಾನು ಈ ನಾಡಿನ ಒಬ್ಬ ಸಾಮಾನ್ಯ ಮಹಿಳೆಯಾಗಿ ಮಾತನಾಡುತ್ತಿದ್ದೇನೆ. ನಗರದಲ್ಲಿ ಉದ್ಬವಿಸಿರುವ ರಸ್ತೆಗಳ ಸಮಸ್ಯೆಯಿಂದ ನನ್ನ ಸಮೇತ ಜನರು ಎಷ್ಟೋ ತೊಂದರೆ ಅನುಭವಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.






