ಮಂಗಳೂರಿನ ಖಾಸಗಿ ಕಾಲೇಜೊಂದರ ವಿದ್ಯಾರ್ಥಿನಿಯರು ಹಾಸ್ಟೇಲ್ ನಿಂದ ಪರಾರಿಯಾಗಿದ್ದೂ, ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ನಗರದ ಪ್ರತಿಷ್ಠಿತ ಖಾಸಗಿ ಕಾಲೇಜಿನ ಪಿಯುಸಿ ವಿದ್ಯಾರ್ಥಿನಿಯರಾದ ಯಶಸ್ವಿನಿ, ದಕ್ಷತಾ, ಸಿಂಚನಾ ಹಾಸ್ಟೇಲ್ ನ ಕಿಟಕಿಯನ್ನು ರಾಡ್ ನಿಂದ ಮುರಿದು ಪರಾರಿಯಾಗಿದ್ದಾರೆ.
ಹಾಸ್ಟೆಲ್ನಲ್ಲಿ ಇದ್ದು ವ್ಯಾಸಂಗ ಮಾಡುತ್ತಿದ್ದ ಈ ಮೂವರು ವಿದ್ಯಾರ್ಥಿನಿಯರು ಬುಉಧವಾರ ಮುಂಜಾನೆ 3 ಗಂಟೆ ಸುಮಾರಿಗೆ ನಾವು ಹೋಗುತ್ತಿದ್ದೇವೆ, ಕ್ಷಮಿಸಿ ಎಂದು ಪತ್ರ ಬರೆದಿಟ್ಟು ಹಾಸ್ಟೆಲ್ನ ಕಿಟಕಿಯ ರಾಡ್ ಮುರಿದು ಪರಾರಿಯಾಗಿದ್ದಾರೆ.
ಪರಾರಿಯಾದ ವಿದ್ಯಾರ್ಥಿನಿಯರಲ್ಲಿ ಯಶಸ್ವಿನಿ ಮತ್ತು ದಕ್ಷತಾ ಬೆಂಗಳೂರು ನಿವಾಸಿಗಳಾಗಿದ್ದು, ಸಿಂಚನಾ ಚಿತ್ರದುರ್ಗ ಮೂಲದ ವಿದ್ಯಾರ್ಥಿನಿ. ಮುಂಜಾನೆ 3 ಗಂಟೆ ವೇಳೆಗೆ ಕಿಟಕಿ ರಾಡ್ ಮುರಿದು ಹೊರಬಂದು ದಾರಿಯಲ್ಲಿ ಬ್ಯಾಗ್ನೊಂದಿಗೆ ಹೋಗುತ್ತಿರುವ ಸಿಸಿಟಿವಿ ವೀಡಿಯೋ ಹರಿದಾಡುತ್ತಿದೆ.