ಜಮ್ಮು ಕಾಶ್ಮೀರದಲ್ಲಿ ಸೋಮವಾರ ನಡೆದ ಎರಡು ಪ್ರತ್ಯೇಕ ಎನ್ಕೌಂಟರ್ಗಳಲ್ಲಿ ಭದ್ರತಾ ಪಡೆಗಳು ಮೂವರು ಉಗ್ರರನ್ನು ಹೊಡೆದುರುಳಿಸುವಲ್ಲಿ ಯಶಸ್ವಿಯಾಗಿವೆ.
ಇದರಿಂದ ಕಳೆದ 24 ಘಂಟೆಗಳಲ್ಲಿ ನಡೆದ ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ಒಟ್ಟು 7 ಉಗ್ರರು ಹತರಾಗಿದ್ದಾರೆ ಎಂದು ಜಮ್ಮು ಕಾಶ್ಮೀರ ಪೊಲೀಸರು ತಿಳಿಸಿದ್ದಾರೆ.

ಉತ್ತರ ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಸೋಮವಾರ ನಡೆದ ಕಾರ್ಯಾಚರಣೆಯಲ್ಲಿ ಇಬ್ಬರು ತೀವ್ರವಾದಿಗಳನ್ನು ಹೊಡೆದುರುಳಿಸಲಾಗಿದೆ. ಪುಲ್ವಾಮ ಜಿಲ್ಲೆಯಲ್ಲಿ ನಡೆದ ಮತ್ತೊಂದು ಎನ್ಕೌಂಟರ್ನಲ್ಲಿ ಅಪರಿಚಿತ ಉಗ್ರನನ್ನು ಹತ್ಯೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.
ಉಗ್ರರು ಪುಲ್ವಾದ ಚತ್ಪೊರಾದಲ್ಲಿ ಅಡಗಿರುವ ಕಚಿತ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ನಡೆಸಿದ ಶೋಧ ಕಾರ್ಯಾಚರಣೆಯಲ್ಲಿ ಉಗ್ರರು ಹಾಗು ಭದ್ರತಾ ಪಡೆಗಳ ನಡುವೆ ನಡೆದ ಭೀಕರ ಗುಂಡಿನ ಚಕಮಕಿಯಲ್ಲಿ ಮೂವರು ಉಗ್ರು ಹತರಾಗಿದ್ದಾರೆ ಎಂದು ವರದಿಯಾಗಿದೆ.






