ಸಾರಿಗೆ ಇಲಾಖೆ ಕಳೆದ ನಾಲ್ಕು ದಿನಗಳಲ್ಲಿ ವಾಣಿಜ್ಯ ವಾಹನಗಳಾಗಿ (ಬೈಕ್ ಟ್ಯಾಕ್ಸಿಗಳು) ಕಾರ್ಯನಿರ್ವಹಿಸುತ್ತಿದ್ದ 250 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದೆ. ಮುಂದಿನ ದಿನಗಳಲ್ಲಿ ಕಾರ್ಯಾಚರಣೆಯನ್ನು ಮುಂದುವರಿಸಲಾಗುವುದು ಎಂದು ಆರ್ ಟಿ ಒ ಅಧಿಕಾರಿಗಳು ತಿಳಿಸಿದ್ದಾರೆ.
ಶುಕ್ರವಾರ ಕೋರಮಂಗಲದ ಪ್ರಾದೇಶಿಕ ಸಾರಿಗೆ ಕಚೇರಿಯ ಅಧಿಕಾರಿಗಳು ಹಾಗೂ ಇತರರು ವಾಹನಗಳ ತಪಾಸಣೆ ನಡೆಸಿ ವಾಣಿಜ್ಯ ಉದ್ದೇಶಕ್ಕಾಗಿ ನಡೆಸುತ್ತಿದ್ದ 130ಕ್ಕೂ ಹೆಚ್ಚು ಬೈಕ್ಗಳನ್ನು ವಶಪಡಿಸಿಕೊಂಡಿದ್ದಾರೆ.
ನಗರದಲ್ಲಿ ವರ್ಷಗಳಿಂದ ಬೈಕ್ ಟ್ಯಾಕ್ಸಿಗಳು Rapido ಅನ್ನೊ ಆ್ಯಪ್ ಮೂಲಕ ಕಾರ್ಯನಿರ್ವಹಿಸುತ್ತಿದೆ. ದ್ವಿಚಕ್ರ ವಾಹನಗಳನ್ನು ಟ್ಯಾಕ್ಸಿಗಳಾಗಿ ಬಳಸುವುದು ಕಾನೂನಿನ ಬಾಯಿರ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮೋಟಾರು ವಾಹನ ಕಾಯ್ದೆಯನ್ನು ಉಲ್ಲಂಘಿಸಿ ಟ್ಯಾಕ್ಸಿಗಳಾಗಿ ಕಾರ್ಯನಿರ್ವಹಿಸುತ್ತಿದ್ದ ಬಿಳಿ ಬೋರ್ಡ್ ಹೊಂದಿರುವ 130 ದ್ವಿಚಕ್ರ ವಾಹನಗಳನ್ನು ನಾವು ವಶಪಡಿಸಿಕೊಂಡಿದ್ದೇವೆ ಮತ್ತು ಅವರ ವಿರುದ್ಧ ಪ್ರಕರಣಗಳನ್ನು ದಾಖಲಿಸಿದ್ದೇವೆ. ಅಂತಹ ವಾಹನಗಳಲ್ಲಿ ಪ್ರಯಾಣಿಸುವುದು ಸುರಕ್ಷಿತವಲ್ಲ ಎಂದು ಪ್ರಯಾಣಿಕರು ಅರಿತುಕೊಳ್ಳುವುದು ಮುಖ್ಯವಾಗಿದೆ ಎಂದು ಸಾರಿಗೆ ಹೆಚ್ಚುವರಿ ಆಯುಕ್ತ (ಜಾರಿ) ಎಲ್ ನರೇಂದ್ರ ಹೋಳ್ಕರ್ ಅವರು ಡಿಹೆಚ್ಗೆ ತಿಳಿಸಿದ್ದಾರೆ. ಆದರೆ ಎಲೆಕ್ಟ್ರಿಕ್ ವಾಹನಗಳಿಗೆ ಮಾತ್ರ ಬೈಕ್ ಟ್ಯಾಕ್ಸಿಗಳನ್ನಾಗಿ ಬಳಕೆ ಮಾಡಲು ಸರ್ಕಾರ ಅನುಮತಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಈ ಮಧ್ಯೆ, ಕಳೆದ ಹಲವು ತಿಂಗಳಿನಿಂದ ಬೈಕ್ ಟ್ಯಾಕ್ಸಿಗಳ ಕಾರ್ಯಾಚರಣೆಯನ್ನು ವಿರೋಧಿಸುತ್ತಿರುವ ಆಟೋ ರಿಕ್ಷಾ ಮತ್ತು ಟ್ಯಾಕ್ಸಿ ಚಾಲಕರು ಶನಿವಾರ ಪ್ರತಿಭಟನೆ ನಡೆಸಿದರು.
ಶುಕ್ರವಾರ 300ಕ್ಕೂ ಹೆಚ್ಚು ಬೈಕ್ ಟ್ಯಾಕ್ಸಿಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಶಾಂತಿ ಆಟೋ ಮತ್ತು ಟ್ಯಾಕ್ಸಿ ಚಾಲಕರ ಸಂಘದ ರಾಜ್ಯಾಧ್ಯಕ್ಷ ರಘು ನಾರಾಯಣ ಗೌಡ ತಿಳಿಸಿದ್ದಾರೆ. ಉಳಿದವರ ವಿರುದ್ಧವೂ ಪ್ರಕರಣಗಳನ್ನು ದಾಖಲಿಸಲಾಗುತ್ತದೆ ಎಂದು ನಾವು ಭಾವಿಸುತ್ತೇವೆ. ಮತ್ತು ‘ಬೈಕ್ಗಳನ್ನು ಟ್ಯಾಕ್ಸಿಗಳಂತೆ ಅಕ್ರಮವಾಗಿ ಓಡಿಸುವುದನ್ನು’ ಕೊನೆಗಾಣಿಸುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದೇವೆ ಎಂದು ಹೇಳಿದರು.