ದೇಶದಲ್ಲಿ ಕಳೆದ 24 ಗಂಟೆಯಲ್ಲಿ 3230 ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, 32 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.
ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಂಗಳವಾರ ನೀಡಿದ ಮಾಹಿತಿ ಪ್ರಕಾರ ಒಟ್ಟಾರೆ ಸೋಂಕಿತರ ಸಂಖ್ಯೆ 44,575,473ಕ್ಕೆ ಏರಿಕೆಯಾದರೆ, ಸಾವಿನ ಸಂಖ್ಯೆ 5,28,562ಕ್ಕೆ ಜಿಗಿತ ಕಂಡಿದೆ.
ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 4,255 ಸೋಂಕಿತರು ಚೇತರಿಸಿಕೊಂಡಿದ್ದು, ಆ ಮೂಲಕ ದೇಶದಲ್ಲಿನ ಒಟ್ಟಾರೆ ಚೇತರಿಸಿಕೊಂಡವರ ಸಂಖ್ಯೆ 4,40,04,553ಕ್ಕೆ ಏರಿಕೆಯಾಗಿದೆ. ಪ್ರಸ್ತುತ ದೇಶದಲ್ಲಿ 42,358 ಸಕ್ರಿಯ ಪ್ರಕರಣಗಳಿವೆ. ರಾಷ್ಟ್ರೀಯ ಕೋವಿಡ್ ಚೇತರಿಕೆ ದರ ಶೇ 98.72ರಷ್ಟಿದೆ ಎಂದು ಸಚಿವಾಲಯ ತಿಳಿಸಿದೆ
ದೈನಂದಿನ ಪಾಸಿಟಿವಿಟಿ ದರ ಶೇ1.18ರಷ್ಟಿದ್ದರೆ, ವಾರದ ಪಾಸಿಟಿವಿಟಿ ದರ ಶೇ 1.58ರಷ್ಟಿದೆ. ದೇಶದಾದ್ಯಂತ ನಡೆಯುತ್ತಿರುವ ಕೋವಿಡ್-19 ಲಸಿಕಾ ಅಭಿಯಾನದ ಅಡಿಯಲ್ಲಿ 217.82 ಕೋಟಿ ಕೋವಿಡ್ ವಿರುದ್ದದ ಲಸಿಕಾ ಡೋಸ್ಗಳನ್ನು ವಿತರಿಸಲಾಗಿದೆ.