• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, February 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

390 ಕೋಟಿ ರೂ. ಹೂಡಿಕೆಯ ಐಬಿಸಿ ಗಿಗಾ ಫ್ಯಾಕ್ಟರಿಗೆ ಶಂಕುಸ್ಥಾಪನೆ

ಪ್ರತಿಧ್ವನಿ by ಪ್ರತಿಧ್ವನಿ
January 15, 2025
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ
0
Share on WhatsAppShare on FacebookShare on Telegram

9 ತಿಂಗಳಲ್ಲಿ ಬ್ಯಾಟರಿ ಉತ್ಪಾದನೆ ಆರಂಭ, ಶೇ.20ರಷ್ಟು ರಫ್ತು: ಎಂ ಬಿ ಪಾಟೀಲ

ADVERTISEMENT

ಬೆಂಗಳೂರು: ವಿದ್ಯುತ್ ಚಾಲಿತ ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳಿಗೆ ಬೇಕಾಗುವ ಲೀಥಿಯಂ-ಅಯಾನ್ ಬ್ಯಾಟರಿಗಳನ್ನು ತಯಾರಿಸುವ ಇಂಟರ್ ನ್ಯಾಷನಲ್ ಬ್ಯಾಟರಿ ಕಂಪನಿಯ (ಐಬಿಸಿ) ಗಿಗಾ ಫ್ಯಾಕ್ಟರಿಯ ಸ್ಥಳೀಯ ಘಟಕಕ್ಕೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಬುಧವಾರ ಶಂಕುಸ್ಥಾಪನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಕಂಪನಿಯು ತಯಾರಿಸುವ ಬ್ಯಾಟರಿಗಳ ಪ್ರದರ್ಶನವನ್ನು ಕೂಡ ಏರ್ಪಡಿಸಲಾಗಿತ್ತು.

Siddaramaiah: KPCC ಅಧ್ಯಕ್ಷರ ಬದಲಾವಣೆ ಹೈಕಮಾಂಡ್‌ಗೆ ಬಿಟ್ಟಿದ್ದು ಸಿಎಂ ಸಿದ್ದರಾಮಯ್ಯ..! #satishjarkiholi

ಮಹಾನಗರ ಗ್ಯಾಸ್ ಲಿಮಿಟೆಡ್ ಜತೆ ಸೇರಿ ಐಬಿಸಿ ಈ ಕಾರ್ಖಾನೆಯನ್ನು ಸ್ಥಾಪಿಸುತ್ತಿದೆ.

ಈ ಸಂದರ್ಭದಲ್ಲಿ ಮಾತನಾಡಿದ ಅವರು, `ದೇವನಹಳ್ಳಿಯ ಕೆಐಎಡಿಬಿ ಐಟಿಐಆರ್ ಕೈಗಾರಿಕಾ ಪ್ರದೇಶದಲ್ಲಿ ಅಸ್ತಿತ್ವಕ್ಕೆ ಬರಲಿರುವ ಈ ಉತ್ಪಾದನಾ ಘಟಕಕ್ಕೆ ಕಂಪನಿಯು ಮೊದಲ ಹಂತದಲ್ಲಿ 390 ಕೋಟಿ ರೂ. ಹೂಡಿಕೆ ಮಾಡಲಿದ್ದು, 300 ನೇರ ಉದ್ಯೋಗಗಳು ಸೃಷ್ಟಿಯಾಗಲಿವೆ. ಇಲ್ಲಿ ಉತ್ಪಾದಿಸಲಾಗುವ ಬ್ಯಾಟರಿಗಳ ಪೈಕಿ ಶೇಕಡ 20ರಷ್ಟನ್ನು ಅಮೆರಿಕ ಮತ್ತು ಯೂರೋಪಿನ ದೇಶಗಳಿಗೆ ರಫ್ತು ಮಾಡಲಾಗುವುದು’ ಎಂದಿದ್ದಾರೆ.

ನಮ್ಮ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಐಬಿಸಿ ಘಟಕಕ್ಕೆ 10 ಎಕರೆ ಜಾಗ ಕೊಟ್ಟಿದ್ದು, ಫಾಕ್ಸ್-ಕಾನ್ ಸಂಸ್ಥೆಯ ಸಮೀಪದಲ್ಲೇ ಇದು ಅಸ್ತಿತ್ವಕ್ಕೆ ಬರಲಿದೆ. ಮುಂದಿನ ಒಂಬತ್ತು ತಿಂಗಳಲ್ಲಿ ಈ ಘಟಕವು ಕಾರ್ಯಾಚರಣೆ ಆರಂಭಿಸಲಿದ್ದು, ಇಲ್ಲೇ ಬ್ಯಾಟರಿಗಳನ್ನು ತಯಾರಿಸಿ, ಇಲ್ಲಿಂದಲೇ ದೇಶ-ವಿದೇಶಗಳಿಗೂ ಕಳಿಸಿ ಕೊಡಲಿದೆ ಎಂದು ಅವರು ಮಾಹಿತಿ ನೀಡಿದರು.

ಸದ್ಯಕ್ಕೆ ಐಬಿಸಿ ಕಂಪನಿಯು ದಕ್ಷಿಣ ಕೊರಿಯಾದಲ್ಲಿ ಸೆಲ್ಸ್ ಉತ್ಪಾದಿಸಿ, ಅವುಗಳನ್ನು ಇಲ್ಲಿಗೆ ತಂದು ಪೂರ್ಣ ಪ್ರಮಾಣದ ಬ್ಯಾಟರಿಗಳನ್ನು ತಯಾರಿಸುತ್ತಿದೆ. ಈ ಘಟಕ ಕಾರ್ಯಾರಂಭ ಆದ ನಂತರ ಇಲ್ಲೇ ಸೆಲ್ ಗಳ ಉತ್ಪಾದನೆ ಕೂಡ ಆಗಲಿದೆ. ಇದು ದೇಶದಲ್ಲೇ ಮೊದಲ ಸೆಲ್ ಉತ್ಪಾದನಾ ಘಟಕವಾಗಲಿದೆ. ಮುಂಬರುವ ದಿನಗಳಲ್ಲಿ ದ್ವಿಚಕ್ರ, ತ್ರಿಚಕ್ರ ವಾಹನಗಳ ಜತೆಗೆ ಉಳಿದ ವಾಹನಗಳಿಗೂ ಇದು ಬ್ಯಾಟರಿ ಪೂರೈಸಲಿದೆ ಎಂದು ಅವರು ವಿವರಿಸಿದರು.

ಭಾರತದಲ್ಲಿ ಶಿಕ್ಷಣ ಹಾಗೂ ಅಮೆರಿಕದ ಸಿಲಿಕಾನ್ ವ್ಯಾಲಿಯಲ್ಲಿ ತರಬೇತಿ ಪಡೆದ ಯುವ ಉದ್ಯಮಿಗಳು ಐಬಿಸಿ ಕಂಪನಿ ಸ್ಥಾಪಿಸಿ, ಬ್ಯಾಟರಿಗಳ ವಿನ್ಯಾಸ, ಉತ್ಪಾದನೆಗೆ ಆದ್ಯತೆ ಕೊಟ್ಟಿದ್ದಾರೆ. ಹಾಗೆಯೇ ಭಾರತದ ಅಗತ್ಯಕ್ಕೆ ಹೊಂದುವ ಹಾಗೆ ವಿನ್ಯಾಸ ಮಾಡಿರುವುದು ಮೆಚ್ಚುವಂತಹದ್ದು ಎಂದು ಸಚಿವರು ಶ್ಲಾಘಿಸಿದರು

ಇದು ಭಾರತದಲ್ಲಿ ಇಂತಹ ಪ್ರಪ್ರಥಮ ಯೋಜನೆಯಾಗಿದೆ. ಇಲ್ಲಿ ರೆಟ್ರೋಫಿಟ್ ಬ್ಯಾಟರಿಗಳನ್ನು ಕೂಡ ತಯಾರಿಸಲಾಗುವುದು. ಇದರಿಂದ ರಾಜ್ಯದ ಆರ್ಥಿಕತೆಗೆ ಹೊಸ ಬಲ ಬರಲಿದ್ದು, ಚೀನಾದ ಮೇಲಿನ ಅವಲಂಬನೆ ಕಡಿಮೆಯಾಗಲಿದೆ ಎಂದು ಅವರು ವಿವರಿಸಿದ್ದಾರೆ.

ನಾವು ಸುಸ್ಥಿರ, ತಂತ್ರಜ್ಞಾನಾಧಾರಿತ ಮತ್ತು ಎಲ್ಲರನ್ನೂ ಒಳಗೊಳ್ಳುವಂತಹ ಆರ್ಥಿಕತೆಯನ್ನು ಕಟ್ಟುವ ಗುರಿ ಇಟ್ಟುಕೊಂಡಿದ್ದೇವೆ. ಇನ್ನೊಂದೆಡೆಯಲ್ಲಿ, ಹಸಿರು ಇಂಧನ ಬಳಕೆಗೆ ಉತ್ತೇಜನ ಕೊಡುತ್ತಿದ್ದೇವೆ. ಐಬಿಸಿ ಗಿಗಾ ಫ್ಯಾಕ್ಟರಿಯು ಈ ಪರಿವರ್ತನೆಯ ಮೈಲುಗಲ್ಲಾಗಿದೆ. ಇದರಿಂದಾಗಿ ರಾಜ್ಯವು ಇಂಧನ ಕ್ಷೇತ್ರದ ಸಂಶೋಧನೆಯಲ್ಲಿ ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಳ್ಳಲು ಸಾಧ್ಯವಾಗಲಿದೆ ಎಂದು ಅವರು ತಿಳಿಸಿದ್ದಾರೆ.

ಕಾರ್ಯಕ್ರಮದಲ್ಲಿ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆಯ ಆಯುಕ್ತೆ ಗುಂಜನ್ ಕೃಷ್ಣ, ಐಬಿಸಿ ಸಿಇಒ ಪ್ರಿಯದರ್ಶಿ ಪಾಂಡಾ, ಸಿಎಸ್ಒ ಸುಂದರ್ ರಾಮಮೂರ್ತಿ, ಕುನಾಲ್ ಜೈನ್, ಜಾಸ್ ಟೆಕ್ ಅಧ್ಯಕ್ಷ ಜೇಸನ್ ಚುಂಗ್, ಉಪಾಧ್ಯಕ್ಷ ಡ್ಯಾನಿ ಚುಂಗ್, ಮಹಾನಗರ್ ಗ್ಯಾಸ್ ಲಿಮಿಟೆಡ್ ವ್ಯವಸ್ಥಾಪಕ ನಿರ್ದೇಶಕ ಆಶು ಸಿಂಘಾಲ್, ಡೆಪ್ಯುಟಿ ಎಂಡಿ ಸಂಜಯ್ ಶೇಂದೆ ಉಪಸ್ಥಿತರಿದ್ದರು.

Tags: DevanahalliGiga factoryGunjan KrishnaKunal JainLithium batteryM B PatilPriyadarshi
Previous Post

ಹಿರಿಯ ನಟ..ಹಾಸ್ಯ ಕಲಾವಿದ.. ಸರಿಗಮ ವಿಜಿ ಇನ್ನಿಲ್ಲ ! ಅನಾರೋಗ್ಯದಿಂದ ಇಹಲೋಕ ತ್ಯಜಿಸಿದ ವಿಜಿ ! 

Next Post

‘ಬಲರಾಮನ ದಿನಗಳು’ ಚಿತ್ರದಲ್ಲಿ ಬಹುಭಾಷಾ ನಟ ಅತುಲ್ ಕುಲಕರ್ಣಿ.‌ .

Related Posts

ಸರ್ಕಾರಿ ಗೌರವಕ್ಕೆ ತಗುಲಿದ ಖರ್ಚು ವೆಚ್ಚ ಕೇಳಿತಾ ಸಿದ್ದು ಸರ್ಕಾರ..? : ಆರ್‌.ಅಶೋಕ್‌ ಆರೋಪವೇನು..?
Top Story

ಸರ್ಕಾರಿ ಗೌರವಕ್ಕೆ ತಗುಲಿದ ಖರ್ಚು ವೆಚ್ಚ ಕೇಳಿತಾ ಸಿದ್ದು ಸರ್ಕಾರ..? : ಆರ್‌.ಅಶೋಕ್‌ ಆರೋಪವೇನು..?

by ಪ್ರತಿಧ್ವನಿ
February 14, 2026
0

ಬೆಂಗಳೂರು : ಇತ್ತೀಚೆಗೆ ನಿಧನರಾದ ಹಿರಿಯ ಪತ್ರಕರ್ತರು, ವಿಧಾನ ಪರಿಷತ್ ಮಾಜಿ ಸದಸ್ಯರಾದ ಶ್ರೀ ರಾಮಯ್ಯನವರ ಅಂತ್ಯಸಂಸ್ಕಾರವನ್ನ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸುವುದಾಗಿ ಘೋಷಣೆ ಮಾಡಿದ್ದ ಸಿಎಂ...

Read moreDetails
Supreme Court: ಸುಪ್ರೀಂ ಕೋರ್ಟ್‌ನಲ್ಲಿ ಬಸನಗೌಡ ಪಾಟೀಲ್ ಯತ್ನಾಳ್‌ಗೆ ಭರ್ಜರಿ ಜಯ..!

Supreme Court: ಸುಪ್ರೀಂ ಕೋರ್ಟ್‌ನಲ್ಲಿ ಬಸನಗೌಡ ಪಾಟೀಲ್ ಯತ್ನಾಳ್‌ಗೆ ಭರ್ಜರಿ ಜಯ..!

February 14, 2026
Shakti Scheme: ಶಕ್ತಿ ಯೋಜನೆ ದುರ್ಬಳಕೆಗೆ ಸರ್ಕಾರದ ಬ್ರೇಕ್‌: ಇನ್ಮುಂದೆ ಹೊಸ ರೂಲ್ಸ್‌..!

Shakti Scheme: ಶಕ್ತಿ ಯೋಜನೆ ದುರ್ಬಳಕೆಗೆ ಸರ್ಕಾರದ ಬ್ರೇಕ್‌: ಇನ್ಮುಂದೆ ಹೊಸ ರೂಲ್ಸ್‌..!

February 14, 2026
ಯುವತಿ ಜೊತೆ ಮೋದಿ ಫೋಟೋ ವೈರಲ್‌ : ಎಪ್ಸ್ಟೀನ್‌ ಭೇಟಿಯಾಗಿದ್ರಾ? ನಮೋ ಅಸಲಿತ್ತೇನು..?

ಯುವತಿ ಜೊತೆ ಮೋದಿ ಫೋಟೋ ವೈರಲ್‌ : ಎಪ್ಸ್ಟೀನ್‌ ಭೇಟಿಯಾಗಿದ್ರಾ? ನಮೋ ಅಸಲಿತ್ತೇನು..?

February 14, 2026
ವಾಗ್ವಾದದ ಮಧ್ಯೆ ಕುಸಿದು ಬಿದ್ರಾ ಜೋ ಸೈಮನ್? ಫಿಲಂ ಚೇಂಬರ್ ಸಭೆಯಲ್ಲಿ ಆಗಿದ್ದೇನು..?

ವಾಗ್ವಾದದ ಮಧ್ಯೆ ಕುಸಿದು ಬಿದ್ರಾ ಜೋ ಸೈಮನ್? ಫಿಲಂ ಚೇಂಬರ್ ಸಭೆಯಲ್ಲಿ ಆಗಿದ್ದೇನು..?

February 14, 2026
Next Post

'ಬಲರಾಮನ ದಿನಗಳು’ ಚಿತ್ರದಲ್ಲಿ ಬಹುಭಾಷಾ ನಟ ಅತುಲ್ ಕುಲಕರ್ಣಿ.‌ .

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada