ಮಹಾಮಾರಿಗೆ ಇಂದು ಒಟ್ಟು 5ಜನ ಬಲಿಯಾಗಿದ್ದು ಇದರಿಂದ, ರಾಜ್ಯದಲ್ಲಿ ಒಟ್ಟಾರೆ ಸೋಂಕಿತರ ಸಾವಿನ ಸಂಖ್ಯೆ 37,886ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಟ್ವೀಟ್ ಮಾಡಲಾಗಿದೆ.
ಬೆಂಗಳೂರಿನಲ್ಲಿ ಇಂದು 140 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದ್ದು 3ಜನರು ಸೋಂಕಿಗೆ ಬಲಿಯಾಗಿದ್ದಾರೆ. ಇದರಿಂದ, ನಗರದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 12,47,970ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಇಂದು 603ಜನ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರಿಂದ ರಾಜ್ಯದಲ್ಲಿ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 29,30,867ಕ್ಕೆ ಏರಿಕೆಯಾಗಿದೆ. 11,408 ಸೋಂಕಿತರಿಗೆ ನಿಗದಿತ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.











