ನವದೆಹಲಿ : ಕೇಂದ್ರ ಚುನಾವಣಾ ಆಯೋಗವು ಮೂರನೇ ಹಂತದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಯ ವೇಳಾಪಟ್ಟಿಯನ್ನು ಗುರುವಾರ ಪ್ರಕಟಿಸಿದೆ. ಈ ಪ್ರಕ್ರಿಯೆಯು ಮೇ 20ರಿಂದ ಪ್ರಾರಂಭವಾಗಲಿದ್ದು, ಕರ್ನಾಟಕ ಸೇರಿದಂತೆ 16 ರಾಜ್ಯಗಳು ಮತ್ತು ಮೂರು ಕೇಂದ್ರಾಡಳಿತ ಪ್ರದೇಶಗಳಲ್ಲಿ (UTs) ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯೋಗದ ಮುಖ್ಯಸ್ಥ ಜ್ಞಾನೇಶ್ ಕುಮಾರ್ ತಿಳಿಸಿದ್ದಾರೆ.

ಇಂದು ಸುದ್ದಿಗೋಷ್ಠಿ ನಡೆಸಿದ ಅವರು, ಭಾರತದ ಚುನಾವಣಾ ಆಯೋಗ (ECI) ಗುರುವಾರ 16 ರಾಜ್ಯಗಳು ಮತ್ತು ಮೂರು ಕೇಂದ್ರಾಡಳಿತ ಪ್ರದೇಶಗಳಲ್ಲಿ ಹಂತ ಹಂತವಾಗಿ ಮತದಾರರ ಪಟ್ಟಿಗಳ ನಿಖರತೆ ಮತ್ತು ಪಾರದರ್ಶಕತೆಯನ್ನು ಬಲಪಡಿಸುವ ಗುರಿಯನ್ನು ಹೊಂದಿದೆ. ಪ್ರಮುಖವಾಗಿ ರಾಷ್ಟ್ರವ್ಯಾಪಿ ಈ ಪ್ರಕ್ರಿಯೆಯು ನಡೆಯುತ್ತಿದೆ ಎಂದು ಹೇಳಿದ್ದಾರೆ.
ಸದ್ಯ ನಡೆಯುತ್ತಿರುವ ಜನಗಣತಿ ಮನೆ-ಮನೆ ಗಣತಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಸಿಬ್ಬಂದಿಗಳ ಲಭ್ಯತೆಯನ್ನು ಗಮನದಲ್ಲಿಟ್ಟುಕೊಂಡು ಎಸ್‌ಐಆರ್ ಹಂತ-3ರ ವೇಳಾಪಟ್ಟಿಯನ್ನು ಅಂತಿಮಗೊಳಿಸಲಾಗಿದೆ. ಹಂತದಲ್ಲಿ ಹಿಮಾಚಲ ಪ್ರದೇಶ, ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್ ಹೊರತುಪಡಿಸಿ ಇಡೀ ದೇಶವನ್ನು ಪರಿಣಾಮಕಾರಿಯಾಗಿ ಪರಿಷ್ಕರಣೆ ಕಾರ್ಯ ನಡೆಯಲಿದೆ ಎಂದು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ : ದಿಢೀರ್ ಗಾಳಿ-ಮಳೆಗೆ ಸಂಬರಗಿ ತತ್ತರ ; ಮನೆಗಳ ಮೇಲ್ಛಾವಣಿ ಹಾರಿ, ಬೆಳೆಗಳಿಗೆ ಹಾನಿ
ಎರಡನೇ ಹಂತದ ಜನಗಣತಿ ಪೂರ್ಣಗೊಂಡ ನಂತರ ಹಾಗೂ ದೇಶದ ತುದಿ ಮತ್ತು ಹಿಮದಿಂದ ಆವೃತವಾದ ಪ್ರದೇಶಗಳಲ್ಲಿನ ಹವಾಮಾನ ಆಧರಿಸಿ ಈ ಮೂರು ಪ್ರದೇಶಗಳ ವೇಳಾಪಟ್ಟಿಯನ್ನು ನಂತರದ ಹಂತದಲ್ಲಿ ಘೋಷಿಸಲಾಗುವುದು ಎಂದು ಹೇಳಿದ್ದಾರೆ
ಆದರೆ ಈ ಹಂತದಲ್ಲಿ ಮತದಾರರ ಪಟ್ಟಿಯ ಶುದ್ಧೀಕರಣದ ಗುರಿಯನ್ನು ಹೊಂದಿರುವ SIR ಪ್ರಕ್ರಿಯೆಯು, ಕರ್ನಾಟಕ, ಒಡಿಶಾ, ಮಿಜೋರಾಂ, ಮಣಿಪುರ, ಸಿಕ್ಕೀಂ, ಉತ್ತರಾಖಂಡ, ಆಂಧ್ರಪ್ರದೇಶ, ಅರುಣಾಚಲ ಪ್ರದೇಶ, ಹರಿಯಾಣ, ಚಂಡೀಗಢ, ತೆಲಂಗಾಣ, ಪಂಜಾಬ್, ಮೇಘಾಲಯ, ಮಹಾರಾಷ್ಟ್ರ, ಜಾರ್ಖಂಡ್, ದೆಹಲಿ, ನಾಗಾಲ್ಯಾಂಡ್ ಮತ್ತು ತ್ರಿಪುರದಲ್ಲಿ ನಡೆಯಲಿದೆ ಎಂದು ತಿಳಿಸಿದ್ದಾರೆ.
ಎಲ್ಲಾ ರಾಜ್ಯಗಳ ಮತದಾರರು ವಿಶೇಷ ಸಮಗ್ರ ಪರಿಷ್ಕರಣೆ (SIR)3ನೇ ಹಂತದಲ್ಲಿ ಉತ್ಸಾಹದಿಂದ ಭಾಗವಹಿಸಿ, ಎಣಿಕೆ ನಮೂನೆಗಳನ್ನು ಭರ್ತಿ ಮಾಡಬೇಕು. ಅರ್ಹ ಮತದಾರರು ಮಾತ್ರ ಮತದಾರರ ಪಟ್ಟಿಯಲ್ಲಿ ಇರಬೇಕು, ಯಾವುದೇ ಅನರ್ಹ ಹೆಸರುಗಳನ್ನು ಸೇರಿಸಬಾರದೆಂಬ ಗುರಿಯೊಂದಿಗೆ ಈ ಪರಿಷ್ಕರಣೆ ನಡೆಸಲಾಗುತ್ತಿದೆ ಎಂದು ಜ್ಞಾನೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.






