ಉತ್ತರ ಕನ್ನಡ ಜಿಲ್ಲೆಯಲ್ಲಿ ಸತತವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಮನೆಯೊಂದರ ಮೇಲೆ ಗುಡ್ಡ ಕುಸಿದಿದ್ದರಿಂದ ನಾಲ್ವರು ಮೃತಪಟ್ಟಿದ್ದು, ಮೂವರ ಶವ ಪತ್ತೆಯಾಗಿರುವ ಘಟನೆ ಭಟ್ಕಳದಲ್ಲಿ ಸಂಭವಿಸಿದೆ.
ಮುಟ್ಟಳ್ಳಿ ನಿವಾಸಿಗಳಾದ ಲಕ್ಷ್ಮೀ ನಾರಾಯಯಣ ನಾಯ್ಕ (48), ಅವರ ಪುತ್ರಿ ಲಕ್ಷ್ಮೀ ನಾಯ್ಕ (33) ಹಾಗೂ ಸಹೋದರಿಯ ಮಗ ಪ್ರವೀಣ್ ನಾಯ್ಕ (20) ಅವರ ಮೃತ ದೇಹವನ್ನು ಹೊರಗೆ ತೆಗೆಯಾಲಿದ್ದು, ಪುತ್ರ ಅನಂತ ನಾಯ್ಕ (32) ಶವಕ್ಕಾಗಿ ಶೋಧಕಾರ್ಯ ನಡೆಸಲಾಗುತ್ತಿದೆ.
ಘಟನಾ ಸ್ಥಳಕ್ಕೆ ಶಾಸಕ ಸುನೀಲ್ ನಾಯ್ಕ್ ಮತ್ತು ಜಿಲ್ಲಾಧಿಕಾರಿ ಮುಲ್ಲೇ ಮುಹಿಲನ್ ಭೇಟಿ ನೀಡಿದ್ದು, ಘಟನೆ ಸಂಬಂಧ ತನಿಖೆ ನಡೆಸುತ್ತಿದ್ದಾರೆ. ಅಲ್ಲದೇ ಅನಂತ ನಾಯ್ಕ ಅವರ ಶೋಧ ಕಾರ್ಯ ತೀವ್ರಗತಿಯಲ್ಲಿ ನಡೆಯುತ್ತಿದೆ.
ಇದೇ ವೇಳೆ ಹೂ ಕೀಳಲು ಹೋಗಿದ್ದ ರೈತನೊಬ್ಬರ ನದಿ ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ ಎನ್ನಲಾಗಿದ್ದು ಅವರ ಪತ್ತೆಗೆ ಶೋಧ ಕಾರ್ಯ ನಡೆದಿದೆ.
ಧಾರಾಕಾರ ಮಳೆಯಿಂದಾಗಿ ಉತ್ತರ ಕನ್ನಡ ಜಿಲ್ಲೆಯ ಕೆಲ ಪ್ರದೇಶಗಳು ಸಂಪೂರ್ಣ ಮುಳುಗಡೆಯಾಗಿದ್ದು, ಹಲವೆಡೆ ಗುಡ್ಡ ಕುಸಿತಗೊಂಡಿದೆ. ಜಿಲ್ಲೆಯ ಭಟ್ಕಳ ತಾಲೂಕಿನ ಗ್ರಾಮದಲ್ಲಿ ಲಕ್ಷ್ಮಿ ನಾಯ್ಕ್ ಅವರ ಮನೆಯ ಮೇಲೆ ಗುಡ್ಡ ಕುಸಿತಗೊಂಡಿದ್ದು, ಮನೆಯೊಳಗೆ ನಾಲ್ವರು ಸಿಲುಕಿಕೊಂಡಿದ್ದರು. ಇದೀಗ ಮೂವರ ಶವವನ್ನು ರಕ್ಷಣಾ ಸಿಬ್ಬಂದಿ ಹೊರ ತೆಗೆದಿದ್ದು, ಮತ್ತೊಬ್ಬರಿಗಾಗಿ ಶೋಧ ಕಾರ್ಯ ಮುಂದುವರೆದಿದೆ.