ಪಶ್ಚಿಮ ಬಂಗಾಳದ ಮಾಜಿ ಸಚಿವ ಪಾರ್ಥ ಚಟರ್ಜಿಗೆ ಸೇರಿದ 4 ಐಷಾರಾಮಿ ಕಾರುಗಳು ನಾಪತ್ತೆಯಾಗಿದ್ದು, ಈ ಕಾರುಗಳ ಪತ್ತೆಗೆ ಇಡಿ ಬಲೆ ಬೀಸಿದೆ.
ಶಿಕ್ಷಕರ ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದ ಮೇಲೆ ತನಿಖೆ ಕೈಗೆತ್ತಿಕೊಂಡಿರುವ ಜಾರಿ ನಿರ್ದೇಶನಾಲಯ ಪಾರ್ಥ ಚಟರ್ಜಿ ಅವರ ಆಪ್ತೆ ಅರ್ಪಿತಾ ಚಟರ್ಜಿ ನಿವಾಸದ ಮೇಲೆ ದಾಳಿ ಮಾಡಿದಾಗ 50 ಕೋಟಿ ರೂ. ನಗದು ಹಾಗೂ 5 ಕೆಜಿ ಚಿನ್ನಭಾರಣ ಪತ್ತೆಯಾಗಿತ್ತು.

ದಾಳಿಯ ವೇಳೆ ಪಾರ್ಥ ಚಟರ್ಜಿಗೆ ಸೇರಿದ್ದು ಎನ್ನಲಾದ 4 ಐಷಾರಾಮಿ ಕಾರುಗಳು ನಾಪತ್ತೆಯಾಗಿದ್ದು, ಈ ಕಾರುಗಳ ಪತ್ತೆಗೆ ಕ್ರಮ ಕೈಗೊಳ್ಳಲಾಗಿದೆ.










