ರಾಜ್ಯಾದ್ಯಂತ ಸುರಿಯುತ್ತಿರುವ ಭಾರೀ ಮಳೆ ಮುಂದಿನ ನಾಲ್ಕು ದಿನಗಳ ಕಾಲ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದಲ್ಲಿ ಕಳೆದ ಒಂದು ವಾರದಿಂದ ಭಾರೀ ಮಳೆಯಾಗುತ್ತಿದ್ದು, ಹಲವೆಡೆ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದ್ದು, ಮಲೆನಾಡು ಭಾಗದ ಹಲವು ಪ್ರದೇಶಗಳಲ್ಲಿ ಭೂಕುಸಿತಗಳು ಸಂಭವಿಸಿವೆ.
ಹವಾಮಾನ ಇಲಾಖೆ ಪ್ರಕಾರ ಒಡಿಶಾ ಮತ್ತು ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ರಾಜ್ಯದಲ್ಲಿ 4 ದಿನ ಮಳೆಯಾಗಲಿದ್ದು, ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡದಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.
ಬೆಳಗಾವಿ, ಬೀದರ್, ಧಾರವಾಡ, ಹಾವೇರಿ, ಹಾಸನ, ಚಿಕ್ಕಮಗಳೂರು, ಕೊಡುಗು, ಕಲಬುರಗಿ, ಶಿವಮೊಗ್ಗ ಜಿಲ್ಲೆಗಳಲ್ಲಿ ಆರೇಂಜ್ ಅಲರ್ಟ್ ಘೋಷಿಸಲಾಗಿದೆ.
ಉಳಿದಂತೆ ಯಾದಗಿರಿ, ವಿಜಯಪುರ, ಬಾಗಲಕೋಟೆ, ದಾವಣಗೆರೆ ಹಾಗೂ ಮೈಸೂರು ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ.