ಈ ವರ್ಷದ ಅಂತ್ಯದಲ್ಲಿ ತೆಲಂಗಾಣ, ಮಧ್ಯಪ್ರದೇಶ, ರಾಜಸ್ಥಾನ ಹಾಗೂ ಛತ್ತೀಸ್ಗಡ ಈ ನಾಲ್ಕು ರಾಜ್ಯಗಳು ವಿಧಾನಸಭಾ ಚುನಾವಣೆ ಎದುರಿಸಲಿದೆ. ಮುಂದಿನ ವರ್ಷ ಲೋಕಸಭೆ ಚುನಾವಣೆಯಲ್ಲಿ ಈ ಚುನಾವಣೆಗಳು ಪ್ರಮುಖ ಪಾತ್ರ ನಿರ್ಬಹಿಸಲಿದೆ ಎಂದು ಹೇಳಲಾಗುತ್ತಿದ್ದು, ನಾಲ್ಕು ರಾಜ್ಯಗಳಲ್ಲಿ ಕಾಂಗ್ರೆಸ್ ಪಾರುಪತ್ಯವಿದೆ ಎಂದು ಸಮೀಕ್ಷೆಗಳು ಹೊರಬೀಳುತ್ತಿದೆ. ಈ ಸಮೀಕ್ಷೆಯಿಂದಾಗಿ ಈಗ ಬಿಜೆಪಿ ಮತ್ತು ಇತರೆ ಸ್ಥಳೀಯ ಪಕ್ಷಗಳಿಗಳು ತಲೆಕೆಡಿಸಿಕೊಳ್ಳುವಂತೆ ಮಾಡಿದೆ.
ಆಡಳಿತ ವಿರೋಧಿ ಅಲೆ, ಭ್ರಷ್ಟಾಚಾರ ಇನ್ನಿತರೆ ಕಾರಣಗಳಿಂದ ಬಿಜೆಪಿ ಕರ್ನಾಟಕದಲ್ಲಿ ತನ್ನ ಅಧಿಕಾರ ಕಳೆದುಕೊಂಡಿದೆ. ಕರ್ನಾಟಕ ಚುನಾವಣೆ ಫಲಿತಾಂಶಗಳು ದೇಶದಲ್ಲಿ ಭಾರೀ ಸಂಚಲನ ಸೃಷ್ಟಿ ಮಾಡಿದೆ. ಈ ಫಲಿತಾಂಶಗಳು ಆಡಳಿತಾರೂಢ ಬಿಜೆಪಿಗೆ ಆಘಾತ ನೀಡುವ ಮೂಲಕ ಕಾಂಗ್ರೆಸ್ಗೆ ಹೊಸ ಹುರುಪನ್ನು ತಂದಿದಂತು ಸತ್ಯ. ಈಗ ತೆಲಂಗಾಣದಲ್ಲಿ ಸತತ ಎರಡು ಬಾರಿ ಸರ್ಕಾರ ರಚಿಸಿರುವ ಚಂದ್ರಶೇಖರ್ ರಾವ್ ಅವರ ಬಿಆರ್ಎಸ್ ಪಕ್ಷವು ಆಡಳಿತ ವಿರೋಧಿ ಅಲೆಯನ್ನು ಎದುರಿಸುತ್ತಿದೆ. ಚುನಾವಣಾ ಪೂರ್ವ ಸಮೀಕ್ಷೆಗಳ ಪ್ರಕಾರ, ತೆಲಂಗಾಣದಲ್ಲಿಯೂ ಕಾಂಗ್ರೆಸ್ ಪರ ಅಲೆ ಇದೆ. ಇದೇ ಬಂಡವಾಳ ಮಾಡಿಕೊಂಡ ಕಾಂಗ್ರೆಸ್ ಅಲ್ಲಿಯೂ ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿದೆ. ಈ ಮೂಲಕ ಅಧಿಕಾರಕ್ಕೆ ಬರುತ್ತಾರ ಅನ್ನೊದು ಡಿಸೆಂಬರ್ ನಲ್ಲಿ ತಿಳಿಯಬೇಕಿದೆ.
ರಾಜಸ್ಥಾನದ ಬಿಜೆಪಿಯಲ್ಲಿ ಆಂತರಿಕ ಕಲಹ ಜೋರಾಗಿ ಸದ್ದು ಮಾಡುತ್ತಿದೆ. ಮಾಜಿ ಸಿಎಂ ವಸುಂದರಾ ರಾಜೇ ಹಾಗೂ ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ನಡುವೆ ಮುಖ್ಯಮಂತ್ರಿ ಸ್ಥಾನಕ್ಕಾಗಿ ಪೈಪೋಟಿ ನಡೆದಿದೆ. ಇವರಿಬ್ಬರ ನಡುವಿನ ಅಸಮಾಧಾನ ಬಹಿರಂಗ ವೇದಿಕೆಗಳಲ್ಲೇ ವ್ಯಕ್ತವಾಗಿರುವುದು ಕೇಸರಿ ಪಾಳಯದಲ್ಲಿ ತಲ್ಲಣ ಸೃಷ್ಟಿಸಿದೆ. ಇದಲ್ಲದೇ ಬಹುತೇಕ ಚುನಾವಣಾ ಪೂರ್ವ ಸಮೀಕ್ಷೆಗಳು ಕಾಂಗ್ರೆಸ್ ಗೆಲ್ಲವು ಸೂಚನೆ ನೀಡಿದ್ದು ಕಾಂಗ್ರೆಸ್ ಗೆ ಹೊಸ ಹುಮ್ಮಸ್ಸು ಬಂದಿದೆ. ಸಿಎಂ ಅಶೋಕ್ ಗೆಹಲೋಟ್ ಹಾಗೂ ಸಚಿನ್ ಪೈಲಟ್ ನಡುವೆ ಭಿನ್ನಾಭಿಪ್ರಾಯಗಳಿದ್ದರೂ ಅದನ್ನು ಶಮನ ಮಾಡುವಲ್ಲಿ ಕಾಂಗ್ರೆಸ್ ಹೈಕಮಾಂಡ್ ಯಶಸ್ವಿಯಾಗಿದೆ. ಇಲ್ಲಿಯೂ ಕೂಡ ಗ್ಯಾರಂಟಿ ಯೋಜನೆಗಳು ಘೋಷಣೆಯಾಗಿದ್ದು ಚುನಾವಣೆ ಏನಾಗುತ್ತದೆ ಕಾದು ನೋಡಬೇಕಿದೆ.
ಛತ್ತೀಸ್ಗಢದ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರ ಆಡಳಿತಕ್ಕೆ ಜನರು ಮನ್ನಣೆ ನೀಡಿದ್ದಾರೆಂದು ಸಮೀಕ್ಷೆಗಳಿಂದ ತಿಳಿದುಬಂದಿದೆ. ಈ ರಾಜ್ಯದಲ್ಲಿ ಮಹಿಳೆಯರು ಹಾಗೂ ರೈತರನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್ ಗ್ಯಾರಂಟಿಗಳನ್ನು ಘೋಷಣೆ ಮಾಡಿದೆ. ಇಲ್ಲಿಯ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿವೆ ಎಂದು ಬಹುತೇಕ ಸಮೀಕ್ಷೆಗಳು ಹೇಳಿವೆ. ಇಲ್ಲಿಯೂ ಮೋದಿ ಅವರನ್ನೇ ಬಿಜೆಪಿ ನೆಚ್ಚಿಕೊಂಡಿದೆ. ಕರ್ನಾಟಕದ ಬಿಜೆಪಿ ಯ ಪರಿಸ್ಥಿತಿ ಆಗಬಹುದು ಎನ್ನಲಾಗಿದೆ.
ಎರಡು ದಶಕಗಳ ಕಾಲ ಮಧ್ಯಪ್ರದೇಶ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಿರುವ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರ ಆಡಳಿತ ಈ ವರ್ಷ ಅಂತ್ಯವಾಗುವ ಸಾಧ್ಯತೆಗಳು ಜಾಸ್ತಿ ಇದೆ ಎಂದು ಸಮೀಕ್ಷೆಗಳು ಹೇಳುತ್ತಿವೆ. ಆಡಳಿತ ವಿರೋಧಿ ಅಲೆ ಜೊತೆಗೆ ಇಲ್ಲಿ ಮೋದಿ ಹೆಸರಿನಲ್ಲಿ ಗೆಲ್ಲುತ್ತಾ ಬಂದಿದ್ದಾರೆ ಆದರೆ ಈ ಬಾರಿ ಅದು ವರ್ಕ್ ಆಗಲ್ಲ ಅನ್ನೊ ಲೆಕ್ಕಾಚಾರವನ್ನು ಸಮೀಕ್ಷೆಗಳು ಹೇಳುತ್ತಿವೆ. ಇಲ್ಲಿಯೂ ಕಾಂಗ್ರೆಸ್ ತನ್ನ ಗ್ಯಾರಂಟಿಯನ್ನು ಘೋಷಣೆ ಮಾಡಿದ್ದು ಗೆದ್ದು ಅಧಿಕಾರ ಹಿಡಿಯಲಿದೆಯೇ ನೋಡಬೇಕು.