ಸೌದಿ ಅರೇಬಿಯಾದಲ್ಲಿ ಇಂದು ಬೆಳ್ಳಂಬೆಳಗ್ಗೆಯೇ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 42 ಮಂದಿ ಭಾರತೀಯರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ಮೆಕ್ಕಾದಿಂದ ಮದೀನಕ್ಕೆ ಹೋಗುವಾಗ ಸೌದಿ ಅರೇಬಿಯಾದ ಮುಫರಿಹತ್ ಬಳಿ, ಭಾರತೀಯ ಕಾಲಮಾನ ಬೆಳಗಿನ ಜಾವ 1.30 ರ ಸುಮಾರಿಗೆ ಬಸ್ ಅಪಘಾತಕ್ಕೀಡಾಗಿ ಏಕಾಏಕಿ ಬೆಂಕಿ ಹೊತ್ತಿಕೊಂಡಿದೆ. ನೋಡನೋಡುತ್ತಿದ್ದಂತೆ ಬೆಂಕಿಯ ಜ್ವಾಲೆ ಎಲ್ಲೆಡೆ ವ್ಯಾಪಿಸಿದ್ದು, ನಿದ್ದೆಯಲ್ಲಿದ್ದ 42 ಮಂದಿ ಭಾರತೀಯರು ಸಜೀವ ದಹನವಾಗಿದ್ದಾರೆ ಎಂದು ವರದಿ ತಿಳಿಸಿದೆ.

ಈ ದುರ್ಘಟನೆಯಲ್ಲಿ ಸಾವನ್ನಪ್ಪಿದವರೆಲ್ಲರೂ ತೆಲಂಗಾಣ ಮೂಲದವರು ಎನ್ನುವ ಮಾಹಿತಿ ಲಭ್ಯವಾಗಿದ್ದು, ಕೂಡಲೇ ರಿಯಾದ್‌ನ ಭಾರತೀಯ ರಾಯಭಾರ ಕಚೇರಿಗೆ ಸಂಪರ್ಕಿಸುವಂತೆ ತೆಲಂಗಾಣ ಸರ್ಕಾರ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿಕೊಂಡಿದೆ.













