• Home
  • About Us
  • ಕರ್ನಾಟಕ
Saturday, January 17, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಕುಸುಮ್‌- ಸಿ ಯೋಜನೆಯಡಿ 43 ಮೆ.ವ್ಯಾ. ಸೋಲಾರ್ ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್

ಪ್ರತಿಧ್ವನಿ by ಪ್ರತಿಧ್ವನಿ
January 24, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ, ಸರ್ಕಾರಿ ಗೆಜೆಟ್
0
Share on WhatsAppShare on FacebookShare on Telegram
  • ಜೆಸ್ಕಾಂನಲ್ಲಿ ಜನ ಪ್ರತಿನಿಧಿಗಳ, ಇಂಧನ ಇಲಾಖೆ ಅಧಿಕಾರಿಗಳೊಂದಿಗೆ ಸಭೆ
  • ಅಫಜಲಪೂರ ಪಟ್ಟಣಕ್ಕೆ ಹೊಸದಾಗಿ 220 ಕೆ.ವಿ. ಸಬ್ ಸ್ಟೇಷನ್ ಮಂಜೂರು

ಕಲಬುರಗಿ, ಜ. 24, 2025: ರೈತರ ಕೃಷ ಪಂಪ್ ಸೆಟ್ ಗಳಿಗೆ ವಿದ್ಯುತ್ ಸಮಸ್ಯೆಯಾಗದಂತೆ ಜೆಸ್ಕಾಂ ವ್ಯಾಪ್ತಿಯ ಕಲಬುರಗಿ, ರಾಯಚೂರು, ಕೊಪ್ಪಳ ಹಾಗೂ ವಿಜಯನಗರ ಜಿಲ್ಲೆಯ 10 ವಿದ್ಯುತ್ ಉಪ ವಿತರಣಾ ಕೇಂದ್ರದ 5 ಕಿ.ಮೀ. ವ್ಯಾಪ್ತಿಯಲ್ಲಿ ಕುಸುಮ್- ಸಿ ಯೋಜನೆಯಡಿ ಫೀಡರ್ ಸೋಲರೈಸೇಷನ್ ಮೂಲಕ 43 ಮೆಗಾ ವ್ಯಾಟ್ ಸೋಲಾರ್ ವಿದ್ಯುತ್ ಉತ್ಪಾದಿಸಲಾಗುವುದು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.

ADVERTISEMENT

ಇಂಧನ ಇಲಾಖೆಗೆ ಸಂಬಂಧಿಸಿದಂತೆ ಇಲ್ಲಿನ ಜೆಸ್ಕಾಂ ಕೇಂದ್ರ ಕಾರ್ಯಾಲಯದಲ್ಲಿ ಜಿಲ್ಲೆಯ ಜನಪ್ರತಿನಿಧಿಗಳು, ಜೆಸ್ಕಾಂ ಮತ್ತು ಕೆಪಿಟಿಸಿಎಲ್ ಅಧಿಕಾರಿಗಳೊಂದಿಗಿನ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಕಲಬುರಗಿ ಜಿಲ್ಲೆಯ ಹಡಗಿಲ್ ಹಾರುತಿ, ವಿ.ಕೆ.ಸಲಗರ್ ಹಾಗೂ ಗೊಬ್ಬೂರ ಸಬ್ ಸ್ಟೇಷನ್ ವ್ಯಾಪ್ತಿಯಲ್ಲಿ ಫೀಡರ್ ಸೋಲರೈಸೇಷನ್ ಮಾಡಲಾಗುತ್ತಿದೆ. ಖಾಸಗಿ ಕಂಪನಿಗಳೇ ಸೋಲಾರ್ ಘಟಕ ಸ್ಥಾಪಿಸಿ ವಿದ್ಯುತ್ ಪೂರೈಸಲಿದ್ದು, ಸರ್ಕಾರದಿಂದ ಪ್ರತಿ ಯೂನಿಟ್ ವಿದ್ಯುತ್ತಿಗೆ 2.95 ರೂ. ನಿಂದ ಗರಿಷ್ಠ 3.17 ರೂ.ವರೆಗೆ ಖಾಸಗಿಯವರಿಗೆ ಪಾತಿಸಲಾಗುವುದು. ಈ ವಿದ್ಯುತ್ತನ್ನು ಪಕ್ಕದ ಫೀಡರ್ ಗೆ ರವಾನಿಸಿ ಸುತ್ತಮುತ್ತಲಿನ 5 ಕಿ.ಮೀ. ವ್ಯಾಪ್ತಿಯ 4,456 ರೈತರ ಪಂಪ್ ಸೆಟ್‌ಗಳಿಗೆ ಪೂರೈಸಲಾಗುತ್ತದೆ ಎಂದು ವಿವರಿಸಿದರು.

ಕುಸುಮ್-ಸಿ ಅಡಿ ಸಾವಿರ ಮೆ.ವ್ಯಾ. ವಿದ್ಯುತ್:
ರಾಜ್ಯಾದ್ಯಂತ ಕುಸುಮ್- ಸಿ ಯೋಜನೆಯಡಿ ಎರಡು ಹಂತಗಳಲ್ಲಿ 400 ಸಬ್ ಸ್ಟೇಷನ್ ವ್ಯಾಪ್ತಿಯಲ್ಲಿ 3,000 ಮೆಗಾ ವ್ಯಾಟ್ ಸೋಲಾರ್ ವಿದ್ಯುತ್ ಉತ್ಪಾದನೆಗೆ ಯೋಜನೆ ಹಾಕಿಕೊಂಡಿದ್ದು, 1 ಮೆಗಾ ವ್ಯಾಟ್ ಘಟಕಕ್ಕೆ 4 ಎಕರೆ ಜಮೀನು ಅವಶ್ಯಕತೆ ಇದೆ. ಇದಕ್ಕಾಗಿ ಸರ್ಕಾರಿ ಜಮೀನು ಉಚಿತವಾಗಿ ಪಡೆಯಲು ಸಚಿವ ಸಂಪುಟ ಒಪ್ಪಿಗೆ ನೀಡಿದ್ದು, ಸರ್ಕಾರಿ ಜಮೀನು ಇಲ್ಲದಿದ್ದಲ್ಲಿ ಖಾಸಗಿ ಜಮೀನು ಲೀಸ್ ಪಡೆದು ಯೋಜನೆ ಆರಂಭಿಸಲಾಗುತ್ತಿದೆ ಎಂದರು.

ಕರ್ನಾಟಕವು ಈ ಹಿಂದೆ ಸಾಕಷ್ಟು ವಿದ್ಯುತ್ ಸಮಸ್ಯೆ ಎದುರಿಸುತ್ತಿತ್ತು. ಕೆದ ಬಾರಿ ಬೇಸಿಗೆಯಲ್ಲೂ ೀವ್ರವಿದ್ಯುತ್ ಅಭಾವ ಸೃಷ್ಟಿಯಾಗಿತ್ತು. ಆ ವೇಳೆ ಪಂಜಾಬ್ ಮತ್ತು ಉತ್ತರಪ್ರದೇಶ ರಾಜ್ಯದಿಂದ ವಿನಿಮಯ ಆಧಾರದಲ್ಲಿ ವಿದ್ಯುತ್ ಪಡೆದು ರೈತರು ಸೇರಿದಂತೆ ರಾಜ್ಯದ ಜನರಿಗೆ ಸಮರ್ಪಕ ವಿದ್ಯುತ್ ಪೂರೈಸಲಾಗಿದೆ. ಈ ಬಾರಿ ಳೆ ಉತ್ತಮವಾಗಿ ಬಂದು ಜಲಾಶಯಗಳಲ್ಲಿ ಸಾಕಷ್ಟು ನೀರು ಸಂಗ್ರಹವಾಗಿದ್ದು, ಬೇಡಿಕೆಗೆ ತಕ್ಕಂತೆ ವಿದ್ಯುತ್ ಪೂರೈಕೆಗೆ ಯಾವುದೇ ಸಮಸ್ಯೆ ಇಲ್ಲ ಎಂದು ತಿಳಿಸಿದರು.

ಟ್ರಾನ್ಸ್ ಫಾರ್ಮರ್ ಗಳ ದುರಸ್ತಿ, ಅಥವಾ ಬದಲಾವಣೆಗೆ ತುರ್ತು ಕ್ರಮ ಕೈಗೊಳ್ಳಬೇಕು. ವಿದ್ಯುತ್ ತಂತಿ, ಕಂಬಗಳ ದುರಸ್ತಿ ಸೇರಿದಂತೆ ವಿದ್ಯುತ್ ಪೂರೈಕೆಯಲ್ಲಿ ಆಗುವ ಸಮಸ್ಯೆಗಳಿಗೆ ತಕ್ಷಣವೇ ಸ್ಪಂದಿಸಿ ಬಗೆಹರಿಸಬೇಕು. ಸ್ಥಳೀಯ ಜನಪ್ರತಿನಿಧಿಗಳನ್ನು ಭೇಟಿಯಾಗಿ ಅವರ ವ್ಯಾಪ್ತಿಯಲ್ಲಿರುವ ಸಮಸ್ಯೆಗಳ ಕುರಿತು ಚರ್ಚಿಸಿ ಅವುಗಳನ್ನು ಬಗೆಹರಿಸಬೇಕು. ವಿದ್ಯುತ್ ಪೂರೈಕೆಗೆ ಯಾವುದೇ ಸಮಸ್ಯೆಗಳಿದ್ದಲ್ಲಿ ಅವುಗಳನ್ನು ಜಪ್ರತಿನಿಧಿಗಳ ಗಮನಕ್ಕೆ ತಂದು ಅವರ ಮೂಲಕ ಬಗೆಹರಿಸಿಕೊಳ್ಳಬೇಕು”, ಎಂದು ಇಲಾಖೆ ಅಧಿಕಾರಿಗಳು ಸೂಚಿಸಿದರು.

ಶಾಸಕ ಅಲ್ಲಮಪ್ರಭು ಪಾಟೀಲ ಮಾತನಾಡಿ, ದಕ್ಷಿಣ ವಿಧಾನಸಭಾ ಕ್ಷೇತ್ರದ ಕಲಬುರಗಿ ನಗರದಲ್ಲಿ ಹೆಚ್ಚುವರಿ ಸಬ್ ಸ್ಟೇಷನ್ ಜತೆಗೆ ಪಟ್ಟಣ ಹೋಬಳಿಯಲ್ಲಿ ಒಂದು ವಿದ್ಯುತ್ ಸಬ್ ಸ್ಟೇಷನ್ ಮಂಜೂರು ಮಾಡಬೇಕಿದೆ. ಕಲಬುರಗಿ ನಗರದ ಸೂಪರ್ ಮಾರ್ಕೆಟ್ ಪ್ರದೇಶದಲ್ಲಿ ವಿದ್ಯುತ್ ಲೈನ್ ತಲೆ ಮೇಲೆ ನೇತಾಡುತ್ತಿದ್ದು, ಅಲ್ಲಿ ಭೂಗತ ಕೇಬಲ್ (ಅಂಡರ್ ಗ್ರೌಂಡ್) ಅಳವಡಿಸಬೇಕೆಂದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ಕೆ.ಜೆ.ಜಾರ್ಜ್, ಜನನಿಬಿಡಿತ ಪ್ರದೇಶ ಆಗಿರುವುದರಿಂದ ಭೂಗತ ಕೇಬಲ್ ಅಳವಡಿಸುವಂತೆ ಜೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ರವೀಂದ್ರ ಅವರಿಗೆ ಸೂಚಿಸಿದರು.

ಶಾಸಕ ಬಸವರಾಜ ಮತ್ತಿಮೂಡ ಮಾತನಾಡಿ ಕ್ಷೇತ್ರದ ಹರಕಂಚಿ, ಶ್ರೀಚಂದ ಸೇರಿದಂತೆ ಹಲವೆಡೆ ಟಿ.ಸಿ. ಕೆಟ್ಟಲ್ಲಿ ಎರಡು ತಿಂಗಳಾದರೂ ಬದಲಾಯಿಸುತ್ತಿಲ್ಲ. ರೈತರ ಸಮಸ್ಯೆಗೆ ಜೆಸ್ಕಾಂ ತ್ವರಿತಗತಿಯಲ್ಲಿ ಸ್ಪಂದಿಸಬೇಕು. ಕಮಲಾಪೂರ, ನರೋಣಾ 33 ಕೆ.ವಿ. ಸ್ಟೇಷನ್‌ಗಳನ್ನು 110 ಕೆ.ವಿ.ಗೆ ಮೇಲ್ದರ್ಜೇಗೇರಿಸಬೇಕೆಂದರು. ಇದಕ್ಕೆ ಪ್ರತಿಕ್ರಿಯಿಸಿದ ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕ ಪಂಕಜ್ ಕುಮಾರ್ ಪಾಂಡೆ, ಕಮಲಾಪೂರ ತಾಲೂಕು ಕೇಂದ್ರವಾಗಿರುವುದರಿಂದ ವಿದ್ಯುತ್ ಲೋಡ್ ಪರಿಗಣಿಸಿ ಸ್ಟೇಷನ್ ಗಳನ್ನು ಉನ್ನತಿಕರೀಸಲಾಗುವುದು ಎಂದರು.

ಅಫಜಲಪೂರ ಶಾಸಕ ಎಂ.ವೈ.ಪಾಟೀಲ ಮಾತನಾಡಿ, ಕ್ಷೇತ್ರದ ಶಿವೂರ, ನಂದರ್ಗಾ, ಘೋಳನೂರ, ಅತನುರ, ಬಳ್ಳೂರ್ಗಿ 33.ಕೆ.ವಿ. ವಿದ್ಯುತ್ ಉಪ ವಿತರಣಾ ಕೇಂದ್ರಗಳನ್ನು 110 ಕೆ.ವಿ.ಗೆ ಉನ್ನತಿಕರಿಸುವಂತೆ ಕೋರಿದರು. ಈ ವೇಳೆ ಮಾತನಾಡಿದ ಪಂಕಜ್ ಕುಮಾರ್ ಪಾಂಡೆ, ಅಫಜಲಪೂರ ಪಟ್ಟಣಕ್ಕೆ ಹೊಸದಾಗಿ 220 ಕೆ.ವಿ. ಸಬ್ ಸ್ಟೇಷನ್ ಮಂಜೂರು ಮಾಡಲಾಗಿದೆ. ಉಳಿದ ಪ್ರಸ್ತಾವನೆ ಪರಿಶೀಲಿಸಲಾಗುವುದು ಎಂದು ತಿಳಿಸಿದರು.

ವಿದ್ಯುತ್ ಅಪಘಾತಕ್ಕೆ ಒಳಗಾದವರಿಗೆ ಗರಿಷ್ಠ ಪರಿಹಾರ:
ಕಲಬುರಗಿ ನಗರದ ಮೋಹನ್ ಲಾಡ್ಜ್ ಬಳಿ ಇತ್ತೀಚೆಗೆ ವಿದ್ಯುತ್ ಅವಘಡದಿಂದ ಎರಡು ಕಾಲು ಕಳೆದುಕೊಂಡು ನಗರದ ಯುನೈಟೆಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಂತ್ರಸ್ತ ಮಹಿಳೆಗೆ ಜೆಸ್ಕಾಂ 1 ಲಕ್ಷ ರೂ. ಪರಿಹಾರ ನೀಡಿದೆ. ಇಬ್ಬರು ಬುದ್ದಿ ಮಾಂದ್ಯ ಮಕ್ಕಳನ್ನು ಹೊಂದಿರುವ ಸಂತ್ರಸ್ತೆಯ ಇದುವರೆಗಿನ ಆಸ್ಪತ್ರೆ ವೆಚ್ಚ 12 ಲಕ್ಷ ರೂ. ಆಗಿದ್ದು, ಚಿಕಿತ್ಸೆ ಮುಂದುವರಿದಿದೆ. ಆಸ್ಪತ್ರೆ ವೆಚ್ಚವನ್ನು ಜೆಸ್ಕಾಂನಿಂದ ಭರಿಸುವುದರ ಜತೆಗೆ ಕುಟುಂಬಕ್ಕೆ ಎಲ್ಲಾ ರೀತಿಯ ಪರಿಹಾರ ಒದಗಿಸಬೇಕು ಎಂದು ಶಾಸಕ ಅಲ್ಲಮಪ್ರಭು ಪಾಟೀಲ ಮನವಿ ಮಾಡಿದಾಗ ಸ್ಪಂದಿಸಿದ ಸಚಿವ ಕೆ.ಜೆ.ಜಾರ್ಜ್, ಜೆಸ್ಕಾಂನಿಂದ ಗರಿಷ್ಠ ಪರಿಹಾರ ಒದಗಿಸುವ ಭರವಸೆ ನೀಡಿದರು.

ಸಭೆಯಲ್ಲಿ ಜೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ರವೀಂದ್ರ ಕರಲಿಂಗಣ್ಣವರ, ಮುಖ್ಯ ಇಂಜಿನಿಯರ್ (ಕಾರ್ಯಾಚರಣೆ) ಆರ್.ವೆಂಕಟೇಶ ಪ್ರಸಾದ್, ಕಲಬುರಗಿ ವಲಯದ ಮುಖ್ಯ ಇಂಜಿನಿಯರ್ ವೆಂಕಟೇಶ ಹಾಲ್ವಿ, ಮುಖ್ಯ ಆರ್ಥಿಕ ಅಧಿಕಾರಿ ಮುರಳೀಧರ ನಾಯಕ್, ಕಲಬುರಗಿ ಮತ್ತು ಯಾದಗಿರಿ ಅಧೀಕ್ಷಕ ಅಭಿಯಂತರ ಖಂಡೆಪ್ಪ ಸೋನಾವಣೆ ಸೇರಿದಂತೆ ಜೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ಗಳು ಹಾಗೂ ಕೆಪಿಟಿಸಿಎಲ್ ಅಧಿಕಾರಿಗಳು ಸೇರಿದಂತೆ ಇತರರು ಪಾಲ್ಗೊಂಡಿದ್ದರು.

Tags: Allama Prabhu PatilBasavaraj MattimudaEnergy Minister KJ Georgehdk meets kj georgeK J GeorgeKalaburgiKJ Georgekj george congresskj george interviewkj george latest newskj george ministerkj george newskj george speechKoppalaKusum Cminister kj georgepower minister kj georgepower supplyprotest against kj georgeraichuruSchemesolar powerTransformersvijayanagar
Previous Post

ರಕ್ತದಾನ ಮಾಡಿ ಜನರ ಜೀವ ಉಳಿಸುವುದು ಪುಣ್ಯದ ಕೆಲಸ : ಬಸವರಾಜ ಬೊಮ್ಮಾಯಿ

Next Post

ಅಭಿದ್ ಮುಷ್ತಾಕ್‌ನ ಅದ್ಭುತ ಕ್ಯಾಚ್ – ರೋಹಿತ್ ಶರ್ಮಾಗೆ ಒತ್ತಾಯಿತ ನಿವೃತ್ತಿಯ ಚರ್ಚೆ!

Related Posts

25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್
ಇದೀಗ

25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್

by ಪ್ರತಿಧ್ವನಿ
January 17, 2026
0

ಬೆಂಗಳೂರು: ಅಬಕಾರಿ ಲೈಸೆನ್ಸ್ ನೀಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಅಬಕಾರಿ ಡಿಸಿ, ಸೂಪರಿಂಟೆಂಡೆಂಟ್, ಡ್ರೈವರ್ ಲೋಕಾಯುಕ್ತ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ. ಲಕ್ಷ್ಮಿ ನಾರಾಯಣ್ ಎಂಬುವರು ತಮ್ಮ ಮಗನಿಗಾಗಿ ಬಾರ್...

Read moreDetails
BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

January 17, 2026
Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

January 17, 2026
BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

January 17, 2026
ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್

ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್

January 17, 2026
Next Post
ಅಭಿದ್ ಮುಷ್ತಾಕ್‌ನ ಅದ್ಭುತ ಕ್ಯಾಚ್ – ರೋಹಿತ್ ಶರ್ಮಾಗೆ ಒತ್ತಾಯಿತ ನಿವೃತ್ತಿಯ ಚರ್ಚೆ!

ಅಭಿದ್ ಮುಷ್ತಾಕ್‌ನ ಅದ್ಭುತ ಕ್ಯಾಚ್ – ರೋಹಿತ್ ಶರ್ಮಾಗೆ ಒತ್ತಾಯಿತ ನಿವೃತ್ತಿಯ ಚರ್ಚೆ!

Recent News

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ
Top Story

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

by ಪ್ರತಿಧ್ವನಿ
January 17, 2026
Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ
Top Story

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

by ಪ್ರತಿಧ್ವನಿ
January 17, 2026
BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?
Top Story

BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

by ಪ್ರತಿಧ್ವನಿ
January 17, 2026
ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್
Top Story

ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್

by ಪ್ರತಿಧ್ವನಿ
January 17, 2026
Mangaluru: ʼವಾಟ್ಸಾಪ್ ಯೂನಿವರ್ಸಿಟಿʼ ಸುಳ್ಳು ಸುದ್ದಿಗೆ ಹಿರಿಯರೇ ಬಲಿ: ಮಂಗಳೂರಿನಲ್ಲಿ ಆಗಿದ್ದೇನು..?
Top Story

Mangaluru: ʼವಾಟ್ಸಾಪ್ ಯೂನಿವರ್ಸಿಟಿʼ ಸುಳ್ಳು ಸುದ್ದಿಗೆ ಹಿರಿಯರೇ ಬಲಿ: ಮಂಗಳೂರಿನಲ್ಲಿ ಆಗಿದ್ದೇನು..?

by ಪ್ರತಿಧ್ವನಿ
January 17, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್

25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್

January 17, 2026
BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

January 17, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada