ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಬಹುಕೋಟಿ ಹಗರಣದ ಅಕ್ರಮ ವರ್ಗಾವಣೆ ಕೇಸ್ ಸಂಬಂಧ SIT ಯಿಂದ ಹೈದರಾಬಾದ್‌ನ (Hydrabad) ಫಸ್ಟ್ ಫೈನಾನ್ಸ್ ಸಹಕಾರಿ ಬ್ಯಾಂಕ್ (First dinance bank) ನಲ್ಲಿದ್ದ 45 ಕೋಟಿ (45 Crores) ರೂಪಾಯಿ ಸೀಜ್ ಮಾಡಲಾಗಿದೆ.
ಬಂಧಿತ ಆರೋಪಿ ಸತ್ಯನಾರಾಯಣ್ (Sathya narayan) ಒಡೆತನದ ಫಸ್ಟ್ ಫೈನಾನ್ಸ್ ಸಹಕಾರಿ ಬ್ಯಾಂಕ್, ಇದೇ ಬ್ಯಾಂಕ್ ಖಾತೆಗೆ ನಿಗಮದಿಂದ 94.73 ಕೋಟಿ ರೂಪಾಯಿ ವರ್ಗಾವಣೆಯಾಗಿತ್ತು. ಬ್ಯಾಂಕ್‌ನ 18 ನಕಲಿ ಖಾತೆಗಳಿಗೆ ವರ್ಗಾವಣೆಯಾಗಿದ್ದ 94.73 ಕೋಟಿ ರೂಪಾಯಿ ಪೈಕಿ ಬಹುಪಾಲು ಹಣ ಡ್ರಾ ಆಗಿದೆ.
ಇನ್ನುಳಿದ ಹಣ ಎಲ್ಲಿಗೆ ಹೋಗಿದೆ ಎಂಬುದರ ಕುರಿತು SIT ತನಿಖೆ ಮುಂದುವರಿಸಿದೆ. ಸದ್ಯ ಈ ಪ್ರಕರಣದಲ್ಲಿ ಬಂಧಿಸಿರುವ ಐವರನ್ನು SIT ಕಸ್ಟಡಿಗೆ ಪಡೆದು ವಿಚಾರಣೆ ನಡೆಸಲಿದೆ.