• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಶಾಲೆಗಳಲ್ಲಿ ಕನ್ನಡ ಕಡ್ಡಾಯ ಪ್ರಶ್ನಿಸಿ 4ನೇ ತರಗತಿ ವಿದ್ಯಾರ್ಥಿ ಮನವಿ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

Any Mind by Any Mind
September 24, 2021
in ಕರ್ನಾಟಕ
0
ಶಾಲೆಗಳಲ್ಲಿ ಕನ್ನಡ ಕಡ್ಡಾಯ ಪ್ರಶ್ನಿಸಿ 4ನೇ ತರಗತಿ ವಿದ್ಯಾರ್ಥಿ ಮನವಿ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್
Share on WhatsAppShare on FacebookShare on Telegram

ರಾಜ್ಯದ ಎಲ್ಲಾ ಶಾಲೆಗಳಲ್ಲೂ ಕನ್ನಡವನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯನ್ನಾಗಿ ಕಲಿಸುವುದನ್ನು ಕಡ್ಡಾಯಗೊಳಿಸಿರುವ ರಾಜ್ಯ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ 4ನೇ ತರಗತಿ ವಿದ್ಯಾರ್ಥಿಯೊಬ್ಬ ಕರ್ನಾಟಕ ಹೈಕೋರ್ಟ್‌ನಲ್ಲಿ ಮನವಿ ಸಲ್ಲಿಸಿದ್ದಾನೆ.

ADVERTISEMENT

ಕನ್ನಡ ಭಾಷಾ ಕಲಿಕಾ ಕಾಯ್ದೆ-2015 ಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿ (CBSE) ಮತ್ತು ಭಾರತೀಯ ಪ್ರೌಢಶಿಕ್ಷಣ ಸರ್ಟಿಫಿಕೇಟ್ನ (ICSE) ನೋಂದಾಯಿತ ಶಾಲೆಗಳಿಗೂ ಅನ್ವಯಿಸುವುದನ್ನು ಪ್ರಶ್ನಿಸಿ ವಿದ್ಯಾರ್ಥಿ ಕೀರ್ತನ್ ಸುರೇಶ್ ಎಂಬ ವಿದ್ಯಾರ್ಥಿ ಸಲ್ಲಿಸಿದ ಮನವಿಯನ್ನು ಕೈಗೆತ್ತುಕೊಂಡ ನ್ಯಾಯಮೂರ್ತಿ ಆರ್ ದೇವದಾಸ್ ನೇತೃತ್ವದ ಏಕಸದಸ್ಯ ಪೀಠವು ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿ. ವಿಚಾರಣೆಯನ್ನು ಮೂರು ವಾರಗಳ ಕಾಲ ಮುಂದೂಡಿದ್ದಾರೆ.

“ರಾಜ್ಯ ಸರ್ಕಾರದ ಕಾಯ್ದೆ ಸಂವಿಧಾನದ 14ನೇ ವಿಧಿಯ ಜೊತೆಗೆ 19 (1) (ಜಿ), 21 ಮತ್ತು 301ನೇ ವಿಧಿಯನ್ನು ಉಲ್ಲಂಘಿಸುತ್ತದೆ. ಅಲ್ಲದೇ, ಇದು ಕಳೆದ ವರ್ಷದ ಜುಲೈ 29ರಂದು ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿರುವ ರಾಷ್ಟ್ರೀಯ ಶಿಕ್ಷಣ ನೀತಿಗೆ 2020ರ ಗುರಿ ಮತ್ತು ಉದ್ದೇಶಗಳಿಗೆ ವಿರುದ್ಧವಾಗಿದೆ” ಎಂದು ಕೀರ್ತನ್ ಸುರೇಶ್ ಪರ   ವಕೀಲ ಸುವಿದತ್ ಎಂ ಎಸ್ ಅವರ ಮೂಲಕ ಸಲ್ಲಿಸಲಾಗಿರುವ ಮನವಿಯಲ್ಲಿ ತಿಳಿಸಲಾಗಿದೆ.

ಕನ್ನಡ ಭಾಷಾ ಕಲಿಕಾ ಕಾಯ್ದೆ 2015 ಅನ್ನು ಅಸಾಂವಿಧಾನಿಕ, ಕಾನೂನುಬಾಹಿರ ಮತ್ತು CBSE / ICSE ನೋಂದಾಯಿತ ಸಂಸ್ಥೆಗಳನ್ನು ಹೊರತಾಗಿಸಿಲ್ಲವಾದ್ದರಿಂದ ಕಾಯ್ದೆಗೆ ಯಾವುದೇ ಅಧಿಕಾರ ಇಲ್ಲ ಎಂದು ಘೋಷಿಸಬೇಕು ಎಂದು ಕೋರಲಾಗಿದೆ.

ಉದ್ಯೋಗದ ನಿಮಿತ್ತ ಮೇಲಿಂದ ಮೇಲೆ ವರ್ಗಾವಣೆಯಾಗುವವರು ತಮ್ಮ ಮಕ್ಕಳನ್ನು ಸಾಮಾನ್ಯವಾಗಿ CBSE / ICSE ನೋಂದಾಯಿತ ಶಾಲೆಗೆ ಸೇರಿಸುತ್ತಾರೆ. ಒಂದೊಮ್ಮೆ ಮಧ್ಯಂತರದಲ್ಲಿ ವರ್ಗಾವಣೆಯಾದರೂ ಬೇರೆ ಸ್ಥಳದಲ್ಲಿ ಅವರ ಕಲಿಕೆಗೆ ಯಾವುದೇ ತೊಂದರೆಯಾಗದಿರಲಿ ಎಂಬುದಕ್ಕಾಗಿ ಹೀಗೆ ಮಾಡಲಾಗುತ್ತದೆ ಎಂದು ಅರ್ಜಿದಾರರು ಹೇಳಿದ್ದಾರೆ. “ಎರಡನೇ ಭಾಷೆಯನ್ನಾಗಿ ಮಗು ಕನ್ನಡ ಕಲಿಯುವುದು ಕಡ್ಡಾಯವಾದರೆ ಒಂದೊಮ್ಮೆ ಅವರು ಮುಂದಿನ ವರ್ಷ ಬೇರೆ ರಾಜ್ಯಕ್ಕೆ ವರ್ಗಾವಣೆಯಾದರೆ ಅವರಿಗೆ ಅತಂತ್ರ ಸ್ಥಿತಿ ಎದುರಾಗಲಿದೆ” ಎಂದು ಮನವಿಯಲ್ಲಿ ಹೇಳಲಾಗಿದೆ.

ಕಾಯ್ದೆಯ ಅನ್ವಯ ಕನ್ನಡವನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯನ್ನಾಗಿ ಕಲಿಯುವುದು ಕಡ್ಡಾಯವಾದರೆ ಮಕ್ಕಳು ತಾವು ಮಾಡದ ತಪ್ಪಿಗೆ ಭಾರಿ ಸಮಸ್ಯೆ ಎದುರಿಸಬೇಕಾಗುತ್ತದೆ. ಚಿಕ್ಕಂದಿನಿಂದಲೂ ಕನ್ನಡದ ಕಲಿಯದಿರುವುದು ಮತ್ತು ಮಕ್ಕಳ ಪೋಷಕರು ಭಾಷಾ ಅಲ್ಪಸಂಖ್ಯಾತರಾಗಿರುವವರಿಗೆ ಪ್ರಾದೇಶಿಕ ಭಾಷೆ ಬರೆಯುವುದು, ಮಾತನಾಡುವುದು ಮತ್ತು ಓದುವುದು ಕಷ್ಟಸಾಧ್ಯವಾಗಲಿದೆ ಎಂದು ಹೇಳಲಾಗಿದೆ.

“ಭಾಷಾ ಅಲ್ಪಸಂಖ್ಯಾತ ಗುಂಪುಗಳಿಗೆ ಸೇರಿದ ಮಕ್ಕಳಿಗೆ ಶಿಕ್ಷಣದ ಪ್ರಾಥಮಿಕ ಹಂತದಲ್ಲಿ ಮಾತೃಭಾಷೆಯಲ್ಲಿ ಬೋಧನೆಗಾಗಿ ಸಾಕಷ್ಟು ಸೌಲಭ್ಯಗಳನ್ನು ಒದಗಿಸುವುದು ಪ್ರತಿ ರಾಜ್ಯ ಮತ್ತು ಸ್ಥಳೀಯ ಪ್ರಾಧಿಕಾರದ ಕರ್ತವ್ಯವಾಗಿದೆ” ಎಂದು ಸಂವಿಧಾನದ 350ಎ ವಿಧಿಯಲ್ಲಿ ಉಲ್ಲೇಖಿಸಿರುವುದನ್ನು ಒತ್ತಿ ಹೇಳಲಾಗಿದೆ. ಆದರೆ, ಸಂವಿಧಾನದ 350ಎ ವಿಧಿಯ ಪ್ರಕಾರ, ಯಾವುದೇ ಶಿಕ್ಷಣ ಸಂಸ್ಥೆಯು ಮಾತೃ ಭಾಷೆಯನ್ನು ಬೋಧನಾ ಮಾಧ್ಯಮವಾಗಿ ಅಳವಡಿಸಿಕೊಳ್ಳುವಂತೆ ಒತ್ತಾಯಿಸಲು ರಾಜ್ಯ ಸರ್ಕಾರಕ್ಕೆ ಅಧಿಕಾರವಿಲ್ಲ ಎಂದು ವಾದಿಸಲಾಗಿದೆ.

“ಆಕ್ಷೇಪಾರ್ಹವಾದ ಕಾಯಿದೆಯು ಅಸಮಾನತೆಯಿಂದ ಕೂಡಿದ್ದು, ಅರ್ಜಿದಾರರ ಮೇಲೆ ಅನಗತ್ಯ ಹೊರೆ ಮತ್ತು ಸಂಕಷ್ಟವನ್ನು ಹೇರುತ್ತದೆ. ಸಂವಿಧಾನದ 19 ಮತ್ತು 30ನೇ ವಿಧಿಯ ಅಡಿಯಲ್ಲಿ ಅವರ ಹಕ್ಕುಗಳ ಮೇಲೆ ತರ್ಕಹೀನ ನಿರ್ಬಂಧಗಳನ್ನು ವಿಧಿಸುತ್ತದೆ” ಎಂದು ಹೇಳಲಾಗಿದೆ.

Tags: High Court of KarnatakaKannadaKarnatakaKarnataka Government
Previous Post

ವಿಧಾನಸಭೆ ಪ್ರವೇಶಿಸಿದ 2ಎ ಮೀಸಲಾತಿ ಹೋರಾಟ; ಯತ್ನಾಳ್, ಬೆಲ್ಲದ್ ಧರಣಿ

Next Post

ಚುನಾವಣಾ ಲಾಲಸೆಗೆ ಒಬಿಸಿ ಸಮುದಾಯ ದುರ್ಬಳಕೆ: ಬಿಜೆಪಿ ವಿರುದ್ದ ಮಾಯಾವತಿ ವಾಗ್ದಾಳಿ

Related Posts

ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?
Top Story

ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?

by ಪ್ರತಿಧ್ವನಿ
May 15, 2026
0

ಬೆಂಗಳೂರು :  ಪರಿಣತ ಕಾರ್ಮಿಕರ ಕೊರತೆ ಎದುರಿಸುತ್ತಿರುವ ಮಧ್ಯಪ್ರಾಚ್ಯದ ಕೆಲವು ದೇಶಗಳಲ್ಲಿ ಕೆಲಸ ಮಾಡುವ ಕ್ಷಮೆತೆಯಿರುವ ರಾಜ್ಯದ ಕಾರ್ಮಿಕರಿಗೆ ಅವಕಾಶ ಕಲ್ಪಿಸುವ ಸಂಬಂಧ ಕಾರ್ಮಿಕ ಸಚಿವ ಸಂತೋಷ್‌...

Read moreDetails
ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

May 15, 2026
ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

May 15, 2026
ಮೋದಿ ಎಚ್ಚರಿಕೆಯ ಬೆನ್ನಲ್ಲೆ ದಿಢೀರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ

ಮೋದಿ ಎಚ್ಚರಿಕೆಯ ಬೆನ್ನಲ್ಲೆ ದಿಢೀರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ

May 15, 2026
ವಸ್ತ್ರಸಂಹಿತೆ ವಿವಾದಕ್ಕೆ ಹೊಸ ತಿರುವು; ಸರ್ಕಾರದ ಆದೇಶಕ್ಕೆ ಖಾಸಗಿ ಶಾಲೆಗಳ ವಿರೋಧ

ವಸ್ತ್ರಸಂಹಿತೆ ವಿವಾದಕ್ಕೆ ಹೊಸ ತಿರುವು; ಸರ್ಕಾರದ ಆದೇಶಕ್ಕೆ ಖಾಸಗಿ ಶಾಲೆಗಳ ವಿರೋಧ

May 15, 2026
Next Post
ಚುನಾವಣಾ ಲಾಲಸೆಗೆ ಒಬಿಸಿ ಸಮುದಾಯ ದುರ್ಬಳಕೆ: ಬಿಜೆಪಿ ವಿರುದ್ದ ಮಾಯಾವತಿ ವಾಗ್ದಾಳಿ

ಚುನಾವಣಾ ಲಾಲಸೆಗೆ ಒಬಿಸಿ ಸಮುದಾಯ ದುರ್ಬಳಕೆ: ಬಿಜೆಪಿ ವಿರುದ್ದ ಮಾಯಾವತಿ ವಾಗ್ದಾಳಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada