• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, August 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Uncategorized

ಪ್ರಧಾನಮಂತ್ರಿ ಸೂರ್ಯ ಘರ್‌‌ಗೆ 5,14 ಲಕ್ಷ ನೋಂದಣಿ: ಮಹಾಂತೇಶ ಬಿಳಗಿ

ಪ್ರತಿಧ್ವನಿ by ಪ್ರತಿಧ್ವನಿ
December 9, 2024
in Uncategorized
0
ಪ್ರಧಾನಮಂತ್ರಿ ಸೂರ್ಯ ಘರ್‌‌ಗೆ 5,14 ಲಕ್ಷ ನೋಂದಣಿ: ಮಹಾಂತೇಶ ಬಿಳಗಿ
Share on WhatsAppShare on FacebookShare on Telegram

ಬೆಂಗಳೂರು, ಡಿಸೆಂಬರ್ 9, 2024: ಪ್ರಧಾನ ಮಂತ್ರಿ ಸೂರ್ಯ ಘರ್ ಯೋಜನೆಗೆ ರಾಜ್ಯಾದ್ಯಂತ 5,14,000 ನೋಂದಣಿಯಾಗಿದ್ದು ಈ ಪೈಕಿ 1,17,000 ಅರ್ಜಿಗಳು ಸ್ವೀಕೃತವಾಗಿವೆ ಎಂದು ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ತಿಳಿಸಿದ್ದಾರೆ.

ADVERTISEMENT

ಪ್ರಧಾನಮಂತ್ರಿ ಸೂರ್ಯ ಘರ್‌ ಮುಫ್ತ್ ಬಿಜ್ಲಿ ಯೋಜನೆಯ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ಹೂಡಿಯಲ್ಲಿರುವ ಕೆಪಿಟಿಸಿಎಲ್‌ನ ಮಾನವ ಸಂಪನ್ಮೂಲ ಕೇಂದ್ರದಲ್ಲಿ ಶನಿವಾರ ಆಯೋಜಿಸಿದ್ದ ಒಂದು ದಿನದ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.

“ಪಿಎಮ್‌ ಸೂರ್ಯ ಘರ್‌ ಯೋಜನೆಗೆ ಈವರೆಗೆ 5.14 ಲಕ್ಷ ನೋಂದಣಿಯಾಗಿದ್ದು, ಈ ಪೈಕಿ ಸುಮಾರು 1,17,000 ಅರ್ಜಿಗಳು ಸ್ವೀಕೃತವಾಗಿವೆ. ಈ ಯೋಜನೆಯನ್ನು ಕಾರ್ಯಗತಗೊಳಿಸಲು, ಎಮ್ಎನ್‌ಆರ್‌ ಇ ಪೋರ್ಟಲ್‌ ನಲ್ಲಿ 353 ಖಾಸಗಿ ಏಜೆನ್ಸಿಗಳು ನೋಂದಾಯಿಸಿಕೊಂಡಿವೆ,” ಎಂದು ಬೆಸ್ಕಾಂ ಎಂಡಿ ವಿವರಿಸಿದರು.

Siddaramaiah in Session: ಯತ್ನಾಳ್ ಮಾಡಿದ ಮನವಿಗೆ ವಿವರಣೆ ನೀಡೋಕೆ ಎದ್ದು ನಿಂತ ಸಿದ್ದಣ್ಣ #pratidhvani

“ರಾಜ್ಯಾದ್ಯಂತ ಮನೆಗಳಲ್ಲಿ ಸೌರಶಕ್ತಿಯ ಬಳಕೆಯನ್ನು ಉತ್ತೇಜಿಸಲು ಇಂಧನ ಸಚಿವ ಕೆ.ಜೆ. ಜಾರ್ಜ್ ಅವರ ಸಮರ್ಥ ನಾಯಕತ್ವದಲ್ಲಿ ಯೋಜನೆಯನ್ನು ಉತ್ತೇಜಿಸುವ ಗುರಿ ಹೊಂದಿದ್ದೇವೆ. ಈ ಮೂಲಕ ಸಾಂಪ್ರದಾಯಿಕ ಇಂಧನ ಮೂಲಗಳ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡಲು ಸಾಧ್ಯವಾಗುತ್ತದೆ ಮತ್ತು ನವೀಕರಿಸಬಹುದಾದ ಇಂಧನದ ರಾಷ್ಟ್ರೀಯ ಗುರಿ ಸಾಧಿಸಲು ಕೊಡುಗೆ ನೀಡುತ್ತೇವೆ,” ಎಂದು‌ ಅವರು ಹೇಳಿದರು.

“ಗ್ರಿಡ್ ಸಂಪರ್ಕಿತ ಮೇಲ್ಛಾವಣಿ ಸ್ಥಾವರಗಳಿಗೆ ಕೇಂದ್ರ ಸರ್ಕಾರವು 30,000 ರೂ. ರಿಂದ 78,000ರೂ. ವರೆಗೆ ಸಹಾಯಧನ ನೀಡುತ್ತದೆ ಮತ್ತು ಈ ಯೋಜನೆ ಅನುಷ್ಠಾನಕ್ಕೆ ಬ್ಯಾಂಕ್‌ ಗಳಿಂದ ಸಾಲ ಸೌಲಭ್ಯ ಸಹ ಇರುತ್ತದೆ ಎಂದು ಬೆಸ್ಕಾಂ ಎಂಡಿ ತಿಳಿಸಿದರು.

ಪ್ರಧಾನ ಮಂತ್ರಿ ಸೂರ್ಯ ಘರ್ ಯೋಜನೆ ಪಡೆಯಲು ಅಪಾರ್ಟ್‌ಮೆಂಟ್ ಫೆಡರೇಶನ್‌ಗಳಿಗೆ ಬ್ಯಾಂಕ್‌ಗಳಿಂದ ಸಾಲ ಪಡೆಯಲು ಇರುವ ಸಮಸ್ಯೆಗಳ ಕುರಿತು ಕಾರ್ಯಾಗಾರದಲ್ಲಿ ಅಪಾರ್ಟ್‌ಮೆಂಟ್‌ ಫೆಡರೇಷನ್‌ ಪ್ರತಿನಿಧಿಗಳು ಕಳವಳ ವ್ಯಕ್ತಪಡಿಸಿದರು. ಅದಕ್ಕೆ ಪ್ರತಿಕ್ರಿಯಿಸಿದ ಬೆಸ್ಕಾಂ ಎಂಡಿ, ಈ ಯೋಜನೆಯ ಸಾಲ ಸೌಲಭ್ಯದ ಬಗ್ಗೆ ಗ್ರಾಹಕರಿಗೆ ಸ್ಪಷ್ಟ ಮಾಹಿತಿ ನೀಡುವಂತೆ , ರಾಜ್ಯ ಮಟ್ಟದ ಬ್ಯಾಂಕರ್‌ಗಳ ಸಮಿತಿ (ಎಸ್‌ಎಲ್‌ಬಿಸಿ) ಪ್ರತಿನಿಧಿಗೆ ಸೂಚಿಸಿದರು.

ಪ್ರಸ್ತುತ ಬ್ಯಾಂಕ್‌ ಗಳಿಂದ ಸಾಲ ಸೌಲಭ್ಯವು 65 ವರ್ಷ ವಯೋಮಿತಿಗೆ ಸೀಮಿತವಾಗಿರುತ್ತದೆ. 65 ವರ್ಷ ಮೇಲ್ಪಟ್ಟ ಗ್ರಾಹಕರು, ಸಾಲ ಸೌಲಭ್ಯವನ್ನು ಪಡೆಯಲು ಇಚ್ಛಿಸಿದಲ್ಲಿ ತಮ್ಮ ಕುಟುಂಬ ಸದಸ್ಯರನ್ನು ಜಂಟಿ ಅರ್ಜಿದಾರರನ್ನಾಗಿ ಸೇರಿಸಿ ಸಾಲವನ್ನು ಪಡೆಯಬಹುದು ಎಂದು ಎಸ್‌ಎಲ್‌ಬಿಸಿ ಪ್ರತಿನಿಧಿ ಮಾಹಿತಿ ನೀಡಿದರು.

ಪಿಎಮ್ ಸೂರ್ಯ ಘರ್‌ ಯೋಜನೆಯಡಿಯಲ್ಲಿ ಸಾಲ ಪಡೆಯಲು ಬ್ಯಾಂಕ್‌ಗಳಿಗೆ ಮೇಲಾಧಾರ ಭದ್ರತೆಯ ಅಗತ್ಯವಿರುವುದಿಲ್ಲ ಎಂದು ಬ್ಯಾಂಕರ್‌ಗಳ ಪ್ರತಿನಿಧಿ‌ ಗ್ರಾಹಕರ ಪ್ರಶ್ನೆಗಳಿಗೆ ಉತ್ತರಿಸಿದರು.

Siddaramaiah in Session:ಬಸವಣ್ಣ, ಅಲ್ಲಮಪ್ರಭು ಬಗ್ಗೆ ಸಿದ್ದರಾಮಯ್ಯ ಆಡಿದ ಮಾತಿಗೆ ಎಲ್ಲರೂ ಗಪ್​ಚುಪ್


ಯೋಜನೆಯಡಿಯಲ್ಲಿ ಬ್ಯಾಂಕ್‌ ಸಾಲ ಪಡೆಯಲು ಅರ್ಜಿ ಸಲ್ಲಿಸಿದಾಗ, ಬ್ಯಾಂಕ್‌ಗಳು ತಮ್ಮನ್ನು ಎಂಎಸ್‌ಎಂಇ ಎಂದು ಪರಿಗಣಿಸುತ್ತಿವೆ. ಆದರೆ, ಅಪಾರ್ಟ್‌ಮೆಂಟ್‌ ಫೆಡರೇಷನ್‌ಗಳು ಎಂಎಸ್ಎಂಇ ವ್ಯಾಪ್ತಿಗೆ ಒಳಪಡುವುದಿಲ್ಲ ಎಂದು ಅಪಾರ್ಟ್‌ಮೆಂಟ್‌ ಫೆಡರೇಷನ್‌ ಪ್ರತಿನಿಧಿಗಳು ಬೆಸ್ಕಾಂ ಎಂಡಿ ಅವರ ಗಮನ ಸೆಳೆದರು.

ಇದಕ್ಕೆ ಪ್ರತಿಕ್ರಿಯಿಸಿದ ಎಸ್‌ಎಲ್‌ಬಿಸಿ ಪ್ರತಿನಿಧಿ, ಅಪಾರ್ಟ್‌ ಮೆಂಟ್‌ ಫೆಡರೇಷನ್‌ಗಳಿಗೆ ಸಾಲ ನೀಡುವ ಬಗ್ಗೆ ಎಂಎನ್‌‌ಆರ್‌ಇ ನಿಂದ ಸ್ಪಷ್ಟ ನಿರ್ದೇಶನ ಇಲ್ಲದಿರುವ ಕಾರಣ, ಇದಕ್ಕೆ ಸಂಬಂಧಪಟ್ಟ ಮಾರ್ಗ ಸೂಚಿಗಳನ್ನು ಹೊರಡಿಸುವಂತೆ ಎಂಎನ್‌‌ಆರ್‌ಇಯನ್ನುಕೋರಲಾಗಿದೆ ಎಂದು ಉತ್ತರಿಸಿದರು.

ರಾಜ್ಯದಲ್ಲಿ ಸುಮಾರು 37 ಲಕ್ಷ ಗೃಹ ಜ್ಯೋತಿಯೇತರ ಗ್ರಾಹಕರಿಗೆ ಯೋಜನೆಯನ್ನು ತಲುಪಿಸುವ ಉದ್ದೇಶದೊಂದಿಗೆ ರಾಜ್ಯದ ನೋಡಲ್ ಏಜೆನ್ಸಿಯಾದ ಬೆಸ್ಕಾಂ ಇದರ ತ್ವರಿತ ಅನುಷ್ಠಾನಕ್ಕೆ ಮುಂದಾಗಿದೆ.
ಬೆಂಗಳೂರಿನ ವಿವಿಧ ಅಪಾರ್ಟ್‌ ಮೆಂಟ್‌ ಫೆಡರೇಷನ್‌ ಪ್ರತಿನಿಧಿಗಳು, ನೋಂದಾಯಿತ ಖಾಸಗಿ ಏಜೆನ್ಸಿಗಳ ಪ್ರತಿನಿಧಿಗಳು, ಎಸ್‌ ಎಲ್‌ ಬಿಸಿ ಪ್ರತಿನಿಧಿ, ಬೆಸ್ಕಾಂನ ತಾಂತ್ರಿಕ ನಿರ್ದೇಶಕ ರಮೇಶ್ ಹಾಗೂ ಹಿರಿಯ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ಪ್ರಧಾನಿಮಂತ್ರಿ ಸೂರ್ಯ ಘರ್: ಮುಫ್ತ್ ಬಿಜ್ಲಿ ಯೋಜನೆ
ಕೇಂದ್ರ ಸರ್ಕಾರದ ಮೇಲ್ಛಾವಣಿಯ ಸೌರ ವಿದ್ಯುತ್ ಯೋಜನೆ- ಪ್ರಧಾನಮಂತ್ರಿ ಸೂರ್ಯ್‌ ಘರ್ ಮುಫ್ತ್ ಬಿಜ್ಲಿ ಯೋಜನೆ ಆರಂಭಿಸಿದೆ.2025-26 ರವರೆಗೆ ಒಟ್ಟು 750 ಶತಕೋಟಿ ರೂ. ವೆಚ್ಚದೊಂದಿಗೆ, ಈ ಯೋಜನೆಯು ದೇಶಾದ್ಯಂತ 10 ದಶಲಕ್ಷ ಮನೆಗಳಿಗೆ ಮಾಸಿಕ 300 ಯೂನಿಟ್‌ಗಳವರೆಗೆ ಉಚಿತ ವಿದ್ಯುತ್ ಒದಗಿಸುವ ಗುರಿ ಹೊಂದಿದೆ. ಈ ಯೋಜನೆಯು 2024ರ ಫೆಬ್ರವರಿಯಲ್ಲಿ ಆರಂಭವಾದ ಒಂದು ತಿಂಗಳೊಳಗೆ 10 ದಶಲಕ್ಷಕ್ಕೂ ಹೆಚ್ಚು ನೋಂದಣಿಗಳೊಂದಿಗೆ ಅಪಾರ ಜನಪ್ರಿಯತೆ ಪಡೆದುಕೊಂಡಿದೆ. ಪ್ರಾರಂಭವಾದಾಗಿನಿಂದ, 6.3 ಲಕ್ಷ ಸ್ಥಾಪನೆಗಳು ಕೇವಲ 9 ತಿಂಗಳಲ್ಲಿ ಪೂರ್ಣಗೊಂಡಿವೆ. ಈ ಮೂಲಕ ಮಾಸಿಕ ಸ್ಥಾಪನೆ ದರ 70,000 ಆಗಿದೆ.

ಗ್ರಿಡ್-ಸಂಪರ್ಕಿತ ಛಾವಣಿಯ ಸೌರ ಛಾವಣಿಯ ಪ್ರಯೋಜನಗಳು

  • ಹೆಚ್ಚುವರಿ ಸ್ಥಳಾವಕಾಶದ ಅಗತ್ಯವಿಲ್ಲ.
  • 78,000 ರೂ. ವರೆಗೆ ಸರ್ಕಾರದ ಸಬ್ಸಿಡಿ.
  • ವಿದ್ಯುತ್ ಬಿಲ್‌ ಹೊರೆ ತಪ್ಪುವುದು.
  • ಪರಿಸರ ಸ್ನೇಹಿ ನವೀಕರಿಸಬಹುದಾದ ಇಂಧನದ ಬಳಕೆ
  • ಕನಿಷ್ಠ ನಿರ್ವಹಣೆ ವೆಚ್ಚ.
  • ಇಂಗಾಲದ ಹೊರಸೂಸುವಿಕೆ ತಗ್ಗುವುದು.

ಸಬ್ಸಿಡಿ

  1. 1ಕಿ.ವ್ಯಾ – 2ಕಿ.ವ್ಯಾ ಸಾಮರ್ಥ್ಯದ ಘಟಕ 30,000-60,000 ರೂ.
  2. 2 ಕಿ.ವ್ಯಾ. – 3 ಕಿ.ವ್ಯಾ. ಸಾಮರ್ಥ್ಯ 60,000- 78,000 ರೂ.
  3. 3 ಕಿ.ವ್ಯಾ. ಗಿಂತ ಹೆಚ್ಚಿನ ಸಾಮರ್ಥ್ಯದ ಘಟಕ ಗರಿಷ್ಠ ಸಬ್ಸಿಡಿ 78,000 ರೂ.
Tags: ColorsCongress Partydiy solarloom solaroff grid solarrv solarSolarsolar ballsolar cellsolar eclipsesolar energysolar mpptsolar panelsolar panelssolar panels for homesolar passsolar powersolar regulatorssolar stormsolar storm 2024solar stormssolar systemsolar system for childrensolar system for kidssolar system planetssolar system songsolar system song for kidssolar windsolorthe solar system songಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ದೇವರು ನಮಗೆ ವರನೂ ಕೊಡೋದಿಲ್ಲ ಶಾಪನೂ ಕೊಡೋದಿಲ್ಲ..!

Next Post

ಡಿ.11 ರಂದು ನಟ ದರ್ಶನ್ ಗೆ ಸರ್ಜರಿ ಫಿಕ್ಸ್ : ಹಿರಿಯ ವಕೀಲ ಸಿವಿ ನಾಗೇಶ್ ಮಾಹಿತಿ

Related Posts

Uncategorized

ಮೋದಿ ಭೇಟಿ ಮಾಡಿದ ಮಹಾ ಸಿಎಂ

by ಪ್ರತಿಧ್ವನಿ
August 17, 2026
0

ನವದೆಹಲಿ: ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದಾರೆ. ಈ ಬಗ್ಗೆ ಸ್ವತಃ ಮಹಾ ಸಿಎಂ ಫಡ್ನವೀಸ್ ತಮ್ಮ ಎಕ್ಸ್...

Read moreDetails
ದರ್ಶನ್‌ ಗೆ ಮತ್ತೆ ಹಿನ್ನೆಡೆ: ಖುದ್ದು ಹಾಜರಿ ಕೋರಿದ್ದ ಅರ್ಜಿ ವಜಾ

ದರ್ಶನ್‌ ಗೆ ಮತ್ತೆ ಹಿನ್ನೆಡೆ: ಖುದ್ದು ಹಾಜರಿ ಕೋರಿದ್ದ ಅರ್ಜಿ ವಜಾ

August 17, 2026
ವಾರಾಣಾಸಿ ಏರ್‌ಪೋರ್ಟ್‌ನಲ್ಲಿ ಮೊಳಗಿದ ಗುಂಡಿನ ಸದ್ದು: ಆಗಿದ್ದೇನು..?

ವಾರಾಣಾಸಿ ಏರ್‌ಪೋರ್ಟ್‌ನಲ್ಲಿ ಮೊಳಗಿದ ಗುಂಡಿನ ಸದ್ದು: ಆಗಿದ್ದೇನು..?

August 16, 2026
ಪ್ರಜ್ವಲ್‌ ರೇವಣ್ಣ ಬ್ಯಾರಕ್‌ಗೆ ಮೊಬೈಲ್‌ ಹೇಗೆ ಬಂತು?ಪ್ರಜ್ವಲ್‌ ರೇವಣ್ಣ ಪ್ರಕರಣದಲ್ಲಿ ಹೊರಬಿತ್ತು ಹೊಸ ಸಂಗತಿ

ಪ್ರಜ್ವಲ್‌ ರೇವಣ್ಣ ಬ್ಯಾರಕ್‌ಗೆ ಮೊಬೈಲ್‌ ಹೇಗೆ ಬಂತು?ಪ್ರಜ್ವಲ್‌ ರೇವಣ್ಣ ಪ್ರಕರಣದಲ್ಲಿ ಹೊರಬಿತ್ತು ಹೊಸ ಸಂಗತಿ

August 15, 2026
ಗುಟ್ಕಾ, ಪಾನ್ ಮಸಾಲ ನಿಷೇಧ ವಾಪಸ್​ ಪಡೆದಿಲ್ಲ!

ಗುಟ್ಕಾ, ಪಾನ್ ಮಸಾಲ ನಿಷೇಧ ವಾಪಸ್​ ಪಡೆದಿಲ್ಲ!

August 15, 2026
Next Post
ಡಿ.11 ರಂದು ನಟ ದರ್ಶನ್ ಗೆ ಸರ್ಜರಿ ಫಿಕ್ಸ್ : ಹಿರಿಯ ವಕೀಲ ಸಿವಿ ನಾಗೇಶ್ ಮಾಹಿತಿ

ಡಿ.11 ರಂದು ನಟ ದರ್ಶನ್ ಗೆ ಸರ್ಜರಿ ಫಿಕ್ಸ್ : ಹಿರಿಯ ವಕೀಲ ಸಿವಿ ನಾಗೇಶ್ ಮಾಹಿತಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada