ಬೆಂಗಳೂರು : ಕಾಂಗ್ರೆಸ್ ನಾಯಕರು ಐದು ಗ್ಯಾರಂಟಿಗಳನ್ನು ಘೋಷಿಸಿ 135 ಸ್ಥಾನಗಳನ್ನ ಗೆಲುವಿನೊಂದಿಗೆ ಸರ್ಕಾರ ರಚನೆಗೆ ಮುಂದಾಗಿದ್ದಾರೆ. ಆದ್ರೆ, ಚುನಾವಣಾ ಪೂರ್ವದಲ್ಲಿ ರಾಜ್ಯದ ಜನರಿಗೆ ನೀಡಿದ್ದ5 ಗ್ಯಾರಂಟಿಗಳನ್ನು ಯಾವುದೇ ಷರತ್ತು ಇಲ್ಲದೆ ಈಡೇರಿಸಬೇಕೆಂದು ರಾಜ್ಯಾದ್ಯಂತ ಜನಸಾಮಾನ್ಯರು ಅಭಿಯಾನ ನಡೆಸುತ್ತಿದ್ದಾರೆ.
ಇದ್ರ ಬೆನ್ನಲ್ಲೆ ಇವತ್ತು ಮಾಧ್ಯಮಗಳ ಜೊತೆ ಮಾತನಾಡಿದ್ದ ಕೆಪಿಸಿಸಿ ಪ್ರಣಾಳಿಕೆ ಸಮಿತಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್, ಗ್ಯಾರಂಟಿಗಳನ್ನು ಜಾರಿಗೆ ತರುತ್ತೇವೆ, ಆದರೆ ಕೆಲವು ಷರತ್ತುಗಳೊಂದಿಗೆ ಎಂದು ಹೇಳಿದ್ದರು. ಪ್ರತಿ ಇಲಾಖೆಯ ಸಚಿವರು ಹಲವು ಸುತ್ತಿನ ಸಭೆ, ಸಮಾಲೋಚನೆ ನಡೆಸಿ ಕಾಂಗ್ರೆಸ್ ನ 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಬೇಕಾಗುತ್ತದೆ ಎಂದು ಹೇಳಿದ್ದರು.

ಪರಮೇಶ್ವರ್ ಅವರ ಈ ಹೇಳಿಕೆ ಬೆನ್ನಲ್ಲೇ ಸಾರ್ವಜನಿಕರು ಸೋಷಿಯಲ್ ಮೀಡಿಯಾಗಳಲ್ಲಿ ತರಹೇವಾರಿ ಕಮೆಂಟ್ ಮಾಡುತ್ತಿದ್ದಾರೆ. ಕಾಂಗ್ರೆಸ್ ಪಕ್ಷ ಯಾವುದೇ ಷರತ್ತುಗಳನ್ನು ಹೇರದೆ ಗ್ಯಾರಂಟಿಗಳನ್ನು ಜಾರಿಗೆ ತರಬೇಕು ಎಂದು ಒತ್ತಾಯಿಸಿದ್ದಾರೆ. ಪಕ್ಷ ಚುನಾವಣಾ ಪ್ರಚಾರ ಸಂದರ್ಭದಲ್ಲಿಯೇ ಪಾರದರ್ಶಕವಾಗಿರಬೇಕಿತ್ತು ಎಂದು ಹೇಳಿದೆ. ಚುನಾವಣೆಯಲ್ಲಿ ಗೆದ್ದ ಮೇಲೆ ಕಾಂಗ್ರೆಸ್ ಜನರಿಗೆ ಮೋಸ ಮಾಡುತ್ತಿದೆ ಎಂದು ಕೆಲವರು ಹೇಳುತ್ತಿದ್ದರೆ, ಇನ್ನು ಕೆಲವರು ಇದರ ಪರಿಣಾಮ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಎದುರಿಸಬೇಕಾಗುತ್ತದೆ ಎಂದಿದ್ದಾರೆ.
ಕಾಂಗ್ರೆಸ್ ಪಕ್ಷ ಚುನಾವಣಾ ಪೂರ್ವ ಗೃಹ ಲಕ್ಷ್ಮಿ ಯೋಜನೆ, ಯುವ ನಿಧಿ ಯೋಜನೆ, ಅನ್ನ ಭಾಗ್ಯ, ಸಖಿ ಕಾರ್ಯಕ್ರಮ ಮತ್ತು ಗೃಹ ಜ್ಯೋತಿ ಐದು ಗ್ಯಾರಂಟಿ ಯೋಜನೆಗಳನ್ನು ರಾಜ್ಯದ ಜನತೆ ಮುಂದಿಟ್ಟು ಚುನಾವಣೆಯಲ್ಲಿ 135 ಸ್ಥಾನಗಳನ್ನ ಗೆದ್ದು ಬೀಗಿತ್ತು…