ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಮುಂದಿನ 5 ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹವಾಮಾನ ತಜ್ಞ ಸದಾನಂದ ಅಡಿಗ ಶುಕ್ರವಾರ ಈ ವಿಷಯ ತಿಳಿಸಿದ್ದು, ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಕರಾವಳಿ, ಉತ್ತರ ಒಳನಾಡಿನಲ್ಲಿ ಮುಂದಿನ 5 ದಿನ ಮಳೆಯಾಗಲಿದೆ ಎಂದರು.
ಕರಾವಳಿ, ಉತ್ತರ ಒಳನಾಡಿದಲ್ಲಿ ಭಾರೀ ಮಳೆಯಾಗಲಿದ್ದು, ಆ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ದಕ್ಷಿಣ ಒಳನಾಡು ಹಾಗೂ ಪಶ್ಚಿಮ ಘಟ್ಟಗಳಲ್ಲಿ ಕೂಡ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇದೇ ವೇಳೆ ರಾಜಧಾನಿ ಬೆಂಗಳೂರಿನಲ್ಲಿ ಕೂಡ ಭಾರೀ ಮಳೆ ಮುಂದುವರಿಯಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.