• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, February 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ರಾಜ್ಯದಲ್ಲಿ 5 ಲಕ್ಷ ಕೋಟಿ ಬಂಡವಾಳ ಹೂಡಿಕೆ ನಿರೀಕ್ಷೆ : ಸಚಿವ ಮುರುಗೇಶ್ ನಿರಾಣಿ

Any Mind by Any Mind
May 27, 2022
in ಕರ್ನಾಟಕ
0
ರಾಜ್ಯದಲ್ಲಿ 5 ಲಕ್ಷ ಕೋಟಿ ಬಂಡವಾಳ ಹೂಡಿಕೆ ನಿರೀಕ್ಷೆ : ಸಚಿವ ಮುರುಗೇಶ್ ನಿರಾಣಿ
Share on WhatsAppShare on FacebookShare on Telegram

ಮುಂಬರುವ ನವೆಂಬರ್ ತಿಂಗಳಿನಲ್ಲಿ ನಡೆಯಲಿರುವ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ₹ 5 ಲಕ್ಷ ಕೋಟಿ ಬಂಡವಾಳ ಹೂಡಿಕೆಯಾಗುವ ನಿರೀಕ್ಷೆಯಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿಯವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ADVERTISEMENT

ದಾವೋಸ್‍ನಲ್ಲಿ ನಡೆದ ವಿಶ್ವ ಆರ್ಥಿಕ ಶೃಂಗ ಸಭೆಯಲ್ಲಿ ಪಾಲ್ಗೊಂಡು ಬೆಂಗಳೂರಿಗೆ ಆಗಮಿಸಿದ ಅವರು, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.

ಈಗಾಗಲೇ ನಿಗಧಿಯಾಗಿರುಂತೆ ನವೆಂಬರ್ 2ರಿಂದ 4ರವರೆಗೆ ಮೂರು ದಿನಗಳ ಕಾಲ ಬೆಂಗಳೂರಿನಲ್ಲಿ ಜಾಗತಿಕ ಹೂಡಿಕೆದಾರರ ಸಮಾವೇಶ ನಡೆಯಲಿದೆ. ವಿಶ್ವದ ಮುಂಚೂಣಿಯಲ್ಲಿರುವ ಅನೇಕ ಉದ್ಯಮಿಗಳು ರಾಜ್ಯದಲ್ಲಿ ಬಂಡವಾಳ ಹೂಡಲು ಆಸಕ್ತಿ ತೋರಿದ್ದಾರೆ. ಅಂದಾಜು 5 ಲಕ್ಷ ಕೋಟಿ ಹೂಡಿಕೆಯಾಗುವ ನಿರೀಕ್ಷೆಯಿದೆ ಎಂದು ಹೇಳಿದರು.

ದಾವೋಸ್‍ನಲ್ಲಿ ನಡೆದ ವಿಶ್ವ ಆರ್ಥಿಕ ಶೃಂಗಸಭೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ನಾನು ವಿಶ್ವದ ಪ್ರಮುಖ ಉದ್ಯಮಿಗಳನ್ನು ಭೇಟಿಯಾಗಿ ಬಂಡವಾಳ ಹೂಡಿಕೆ ಸಂಬಂಧ ಮಾತುಕತೆ ನಡೆಸಿದ್ದೇವೆ ಇದೊಂದು ಯಶಸ್ವಿ ಪ್ರವಾಸ ಎಂದು ಅವರು ಬಣ್ಣಿಸಿದರು.

ಕರ್ನಾಟಕದಲ್ಲಿ ಬಂಡವಾಳ ಹೂಡಿಕೆ ಮಾಡಲು ಮುಂಚೂಣಿಯಲ್ಲಿರುವ ಉದ್ಯಮಿಗಳು ಆಸಕ್ತಿ ತೋರಿದ್ದಾರೆ. ಇಲ್ಲಿನ ಆಹ್ಲಾದಕರ ವಾತಾವರಣ, ಉದ್ಯಮಿಗಳ ಪರವಾಗಿರುವ ಸರ್ಕಾರ, ಕೈಗಾರಿಕಾ ಸ್ನೇಹಿ ನೀತಿಗಳು, ಉದ್ಯಮಿಗಳಿಗೆ ಬೇಕಾಗಿರುವ ರಸ್ತೆಘಿ, ನೀರು, ವಿದ್ಯುತ್ ಸೇರಿದಂತೆ ವಿಶ್ವದರ್ಜೆಯ ಮೂಲಭೂತ ಸೌಕರ್ಯಗಳು ರಾಜ್ಯದಲ್ಲಿ ಸಿಗುವುದರಿಂದ ಉದ್ಯಮಿಗಳು ಮುಂದೆ ಬಂದಿದ್ದಾರೆ ಎಂದು ತಿಳಿಸಿದರು.

ದೊಡ್ಡ ಮಟ್ಟದ ಬಂಡವಾಳ ಹೂಡಿಕೆಯಾದರೆ ಕೈಗಾರಿಕೆಗಳು ಹೆಚ್ಚು ಹೆಚ್ಚು ಸ್ಥಾಪನೆಯಾಗಲಿವೆ. ಇದರಿಂದ ಸ್ಥಳೀಯರಿಗೆ ಉದ್ಯೋಗ ಅವಕಾಶಗಳು ಲಭಿಸಲಿವೆ. ಜೊತೆಗೆ ನಿರುದ್ಯೋಗವು ನಿವಾರಣೆಯಾಗಲಿದೆ ಎಂದು ನಿರಾಣಿ ಅಭಿಪ್ರಾಯಪಟ್ಟರು.

ನಾಲ್ಕು ದಿನ ನಾವು ವಿವಿಧ ಕೈಗಾರಿಕೋದ್ಯಮಿಗಳನ್ನು ಭೇಟಿಯಾಗಿದ್ದೇವೆ. ಬಂಡವಾಳ ಹೂಡಿಕೆ ಮಾಡುವಂತೆ ನಾವು ಮುಂದಿಟ್ಟ ಪ್ರಸ್ತಾವನೆಗೆ ಅನೇಕ ಉದ್ಯಮಿಗಳು ಒಪ್ಪಿಗೆ ಸೂಚಿಸಿದ್ದಾರೆ. ಅಂದಾಜು ಒಂದು ಲಕ್ಷ ಕೋಟಿ ಬಂಡವಾಳ ರಾಜ್ಯದಲ್ಲಿ ಹೂಡಿಕೆಯಾಗಲಿದೆ. ಬಂಡವಾಳ ಹೂಡಿಕೆಯಾಗುವುದರಿಂದ ರಾಜ್ಯದ ಜಿಡಿಪಿ ದರವು ಏರಿಕೆಯಾಗಲಿದೆ ಎಂದರು.

ನವೆಂಬರ್ ನಲ್ಲಿ ನಡೆಯಲಿರುವ ಹೂಡಿಕೆದಾರರ ಸಮಾವೇಶಕ್ಕೆ ಖ್ಯಾತ ಉದ್ಯಮಿಗಳು ಆಗಮಿಸುತ್ತೇವೆ ಎಂದು ಭರವಸೆ ಕೊಟ್ಟಿದ್ದಾರೆ. ಕರ್ನಾಟಕ ಕೈಗಾರಿಕಾ ವಲಯದಲ್ಲಿ ಸಾಧಿಸಿರುವ ಪ್ರಗತಿಯ ಚಿತ್ರಣವನ್ನು ತೆರೆದಿಟ್ಟಿದ್ದೇವೆ. ಬಹುತೇಕರು ನಮ್ಮ ರಾಜ್ಯದ ಬಗ್ಗೆ ವಿಶೇಷವಾದ ಆಸಕ್ತಿಯನ್ನು ತೋರಿದ್ದಾರೆ. ಇನ್ನು ಕೆಲವೇ ವರ್ಷಗಳಲ್ಲಿ ರಾಜ್ಯದ ಚಿತ್ರಣವೇ ಬದಲಾಗಿದೆ ಎಂಬು ವಿಶ್ವಾಸ ವ್ಯಕ್ತಪಡಿಸಿದರು.

Tags: BJPCongress PartyCovid 19ಕೋವಿಡ್-19ಬಿಜೆಪಿಸಚಿವ ಮುರುಗೇಶ್ ನಿರಾಣಿ
Previous Post

ಕೋಡಿಹಳ್ಳಿ ವಿರುದ ಕ್ರಮಕ್ಕೆ ಆಗ್ರಹಿಸಿ ಸಾರಿಗೆ ನೌಕರರ ಪಟ್ಟು

Next Post

ಬೆಂಗಾಲಿಯ ಮತ್ತೊಬ್ಬ ರೂಪದರ್ಶಿಯ ಶವ ಪತ್ತೆ: 3 ದಿನದಲ್ಲಿ 2ನೇ ಪ್ರಕರಣ

Related Posts

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ
Top Story

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ

by ಪ್ರತಿಧ್ವನಿ
February 10, 2026
0

  ಬೆಂಗಳೂರು, ಫೆ. 10, 2026: ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದ ಕೆ.ಜಿ. ಹಳ್ಳಿಯ ಕೇಳಚಂದ್ರ ಕೌಶಲ್ಯ ಅಭಿವೃದ್ಧಿ ಕೇಂದ್ರದಲ್ಲಿ ವಿವಿಧ ಕೌಶಲಗಳ ತರಬೇತಿ ಪೂರ್ಣಗೊಳಿಸಿದ ಮಹಿಳೆಯರಿಗೆ ಕೇಳಚಂದ್ರ...

Read moreDetails
RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

February 8, 2026
ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

February 8, 2026
ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

February 8, 2026
KOPPALA: ಸಾರಾಯಿ ಎಂದು ಸ್ಪಿರಿಟ್ ಸೇವನೆ: ಇಬ್ಬರು ಯುವಕರ ಸಾ**

KOPPALA: ಸಾರಾಯಿ ಎಂದು ಸ್ಪಿರಿಟ್ ಸೇವನೆ: ಇಬ್ಬರು ಯುವಕರ ಸಾ**

February 8, 2026
Next Post
ಬೆಂಗಾಲಿಯ ಮತ್ತೊಬ್ಬ ರೂಪದರ್ಶಿಯ ಶವ ಪತ್ತೆ: 3 ದಿನದಲ್ಲಿ 2ನೇ ಪ್ರಕರಣ

ಬೆಂಗಾಲಿಯ ಮತ್ತೊಬ್ಬ ರೂಪದರ್ಶಿಯ ಶವ ಪತ್ತೆ: 3 ದಿನದಲ್ಲಿ 2ನೇ ಪ್ರಕರಣ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada