ಬೆಂಗಳೂರು : ಆರ್ಥಿಕ ಸಂಕಷ್ಟಗಳ ನಡುವೆಯೂ ಸಿಎಂ ಸಿದ್ದರಾಮಯ್ಯ ಇಂದಿರಾ ಕ್ಯಾಂಟೀನ್ ದುರಸ್ತಿ ಕಾರ್ಯದಲ್ಲಿ ನಿರತರಾಗಿದ್ದಾರೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಕಡೆಗಣಿಸಲ್ಪಟ್ಟಿದ್ದ ಇಂದಿರಾ ಕ್ಯಾಂಟೀನ್ ಯೋಜನೆಯ ಪುನಶ್ಚೇತನಕ್ಕೆ ಸಿಎಂ ಸಿದ್ದರಾಮಯ್ಯ ಮುಂದಾಗಿದ್ದಾರೆ.
ಸದ್ಯ ರಾಜ್ಯ ರಾಜಧಾನಿಯಲ್ಲಿ ಹೊಸದಾಗಿ 50 ಇಂದಿರಾ ಕ್ಯಾಂಟೀನ್ ನಿರ್ಮಾಣ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ. ಹಳೆಯ ಇಂದಿರಾ ಕ್ಯಾಂಟೀನ್ಗಳ ದುರಸ್ತಿ ಕಾರ್ಯದ ಜೊತೆ ಜೊತೆಯಲ್ಲಿ ಹೊಸ ಇಂದಿರಾ ಕ್ಯಾಂಟೀನ್ ನಿರ್ಮಾಣ ಕಾರ್ಯ ಕೂಡ ನಡೆಯಲಿದೆ.
ಇಂದಿರಾ ಕ್ಯಾಂಟೀನ್ಗಳಲ್ಲಿ ಹೊಸದಾಗಿ ಫುಡ್ ಮೆನು ಸಿದ್ಧಪಡಿಸಗಿದ್ದು ಕಡಿಮೆ ದರದಲ್ಲಿ ಮತ್ತೆ ರಾಜ್ಯದ ಜನತೆಗೆ ಗುಣಮಟ್ಟದ ಆಹಾರ ಸಿಗುವ ಬಗ್ಗೆ ಸಿದ್ದು ಸರ್ಕಾರ ತಯಾರಿ ನಡೆಸುತ್ತಿದೆ.






