• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಕೈಗಾರಿಕಾ ಉದ್ದೇಶಕ್ಕಾಗಿ ಹೆಚ್ಚುವರಿ 50 ಸಾವಿರ ಎಕರೆ ಜಮೀನು ಭೂ ಸ್ವಾಧೀನ: ಸಚಿವ ನಿರಾಣಿ ಹೇಳಿಕೆ

Any Mind by Any Mind
September 23, 2022
in ಕರ್ನಾಟಕ
0
ಕನ್ನಡ ರಾಜ್ಯಭಾಷೆ, ಹಿಂದಿ ರಾಷ್ಟ್ರಭಾಷೆ : ಮುರಗೇಶ್‌ ನಿರಾಣಿ
Share on WhatsAppShare on FacebookShare on Telegram

ರಾಜ್ಯದಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಹೆಚ್ಚುವರಿಯಾಗಿ 50 ಸಾವಿರ ಎಕರೆ ಭೂ ಸ್ವಾಧೀನ ಪಡಿಸಿಕೊಳ್ಳಲಾಗುತ್ತಿದೆ. ಬೆಂಗಳೂರಿನಲ್ಲಿ 20 ಸಾವಿರ ಮತ್ತು ಇತರ ಜಿಲ್ಲೆಗಳಲ್ಲಿ 30 ಸಾವಿರ ಎಕರೆ ಭೂಮಿ ಸೇರಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ.

ADVERTISEMENT

ವಿಧಾನ ಪರಿಷತ್‍ನ ಪ್ರಶ್ನೋತ್ತರದಲ್ಲಿ ಸದಸ್ಯರಾದ ಸಲೀಂ ಅಹಮ್ಮದ್, ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯಿಂದ ಮಂಜೂರಾದ ನಿವೇಶನ ಅಥವಾ ಭೂಮಿಯಲ್ಲಿ ಎಷ್ಟು ಸಮಯದಲ್ಲಿ ಕೈಗಾರಿಕೆ ಸ್ಥಾಪನೆ ಮಾಡಬೇಕು. ಒಂದು ವೇಳೆ ಉದ್ಯಮ ಸ್ಥಾಪನೆಯಾಗದೆ ಇದ್ದರೆ ಯಾವ ಕ್ರಮ ಕೈಗೊಳ್ಳಲಾಗುತ್ತ್ತದೆ ಎಂದು ಪ್ರಶ್ನಿಸಿದರು.

ಕೈಗಾರಿಕೆ ಇಲಾಖೆಯಿಂದ 188 ಕೈಗಾರಿಕಾ ಪ್ರದೇಶ ಸ್ಥಾಪಿಸಲಾಗಿದೆ. ಅದಕ್ಕಾಗಿ 1.60 ಲಕ್ಷ ಎಕರೆ ಭೂಮಿಯನ್ನು ಸ್ವಾಧೀನ ಪಡಿಸಿಕೊಳ್ಳಲಾಗಿತ್ತು. ಅದರಲ್ಲಿ 52,008 ಎಕರೆಯನ್ನು ಅಭಿವೃದ್ಧಿ ಪಡಿಸಲಾಗಿದೆ. ಉಳಿದ ಭೂಮಿಯನ್ನು ಅಭಿವೃದ್ಧಿ ಪಡಿಸಲಾಗುತ್ತಿದೆ  ಎಂದು ನಿರಾಣಿ ಹೇಳಿದರು.

ಯೋಜನೆಯ ಅಂದಾಜು ಗಾತ್ರ ಆಧರಿಸಿ ಉದ್ಯಮ ಆರಂಭಿಸಲು ಕಾಲಮಿತಿ ನಿಗದಿ ಪಡಿಸಲಾಗುತ್ತದೆ. ಉಕ್ಕು ಉದ್ಯಮಗಳಿಗೆ ಐದು ವರ್ಷಗಳವರೆಗೂ ಸಮಯ ಬೇಕಾಗುತ್ತದೆ. ಒಟ್ಟಾರೆ ಉದ್ಯಮ ಆರಂಭಕ್ಕೆ ಗರಿಷ್ಠ 10 ವರ್ಷಗಳ ಕಾಲಾವ ನೀಡಲಾಗುತ್ತದೆ. ಅದರ ಒಳಗೆ ಉದ್ಯಮ ಆರಂಭವಾಗದಿದ್ದರೆ ನೋಟಿಸ್ ನೀಡಿ ಭೂಮಿ ಹಿಂಪಡೆಯುವ ಪ್ರಕ್ರಿಯೆ ನಡೆಸಲಾಗುವುದು.

ಈವರೆಗೂ 117 ಉದ್ದಿಮೆದಾರರಿಗೆ ನೋಟಿಸ್ ನೀಡಲಾಗಿದೆ. ಕೆಲವರು ನ್ಯಾಯಾಲಯಕ್ಕೆ ಹೋಗಿ ತಡೆಯಾಜ್ಞೆ ತಂದಿದ್ದಾರೆ ಇನ್ನೂ ಮುಂದೆ ಕೆವಿಯಟ್ ಹಾಕಿ ಭೂಮಿ ಹಿಂಪಡೆಯಲು ಮುಂದಿನ ಕ್ರಮ ಜರುಗಿಸಲಾಗುವುದು ಎಂದು ನಿರಾಣಿ ಉತ್ತರಿಸಿದರು.

ನವೆಂಬರ್ ಮೊದಲ ವಾರದಲ್ಲಿ ರಾಜ್ಯದಲ್ಲಿ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ನಡೆಯುತ್ತಿದೆ. ವಿದೇಶ ಬಂಡವಾಳ ಹೂಡಿಕೆಯಲ್ಲಿ ನಮ್ಮ ರಾಜ್ಯ ಸತತ ನಾಲ್ಕನೆ ತ್ರೈಮಾಸಿಕದಲ್ಲೂ  ಮೊದಲ ಸ್ಥಾನದಲ್ಲಿದೆ. ದೇಶದ ಹೂಡಿಕೆಯಲ್ಲಿ ಶೇ.38ರಷ್ಟು ಪಾಲನ್ನು ನಾವು ಹೊಂದಿದ್ದೇವೆ ಎಂದು ನಿರಾಣಿ ಹೇಳಿದರು.

Tags: Industriesmurugesh niraniPratidhvani
Previous Post

ಡಾಲರ್‌ ಎದುರು ಸಾರ್ವಕಾಲಿಕ ದಾಖಲೆ ಕುಸಿತ ಕಂಡ ರೂಪಾಯಿ!

Next Post

ದುಲೀಪ್‌ ಟ್ರೋಫಿ ಫೈನಲ್:‌ ಪಶ್ಚಿಮಕ್ಕೆ ಜೈಸ್ವಾಲ್‌ ದ್ವಿಶತಕದ ಆಸರೆ

Related Posts

ಸಿಎಂ ನಿವಾಸದಲ್ಲಿ ಉಪಹಾರ ರಾಜಕೀಯ: ಡಿಕೆಶಿ-ಸಿದ್ದರಾಮಯ್ಯ ಭೇಟಿ ಕುತೂಹಲ
ಕರ್ನಾಟಕ

ಸಿಎಂ ನಿವಾಸದಲ್ಲಿ ಉಪಹಾರ ರಾಜಕೀಯ: ಡಿಕೆಶಿ-ಸಿದ್ದರಾಮಯ್ಯ ಭೇಟಿ ಕುತೂಹಲ

by ಪ್ರತಿಧ್ವನಿ
May 28, 2026
0

ಕರ್ನಾಟಕ ರಾಜಕೀಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಚರ್ಚೆಗಳು ತೀವ್ರಗೊಂಡಿರುವ ನಡುವೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಬೆಳಿಗ್ಗೆ ಸಚಿವರಿಗಾಗಿ ವಿಶೇಷ ಉಪಹಾರ ಕೂಟ ಏರ್ಪಡಿಸಿದ್ದು, ರಾಜಕೀಯ ವಲಯದಲ್ಲಿ ಹೊಸ...

Read moreDetails
ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

May 27, 2026
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ದೆಹಲಿ ಹೈಕಮಾಂಡ್ ಫಾರ್ಮುಲಾ ಫೈನಲ್? ಸಿಎಂ ಬದಲಾವಣೆ ಒಪ್ಪಲು ಇಲ್ಲಿದೆ ಮುಖ್ಯ ಕಾರಣ 

May 27, 2026
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

May 27, 2026
ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

May 26, 2026
Next Post
ದುಲೀಪ್‌ ಟ್ರೋಫಿ ಫೈನಲ್:‌ ಪಶ್ಚಿಮಕ್ಕೆ ಜೈಸ್ವಾಲ್‌ ದ್ವಿಶತಕದ ಆಸರೆ

ದುಲೀಪ್‌ ಟ್ರೋಫಿ ಫೈನಲ್:‌ ಪಶ್ಚಿಮಕ್ಕೆ ಜೈಸ್ವಾಲ್‌ ದ್ವಿಶತಕದ ಆಸರೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada