ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದಕ್ಕಿಂತ ಮೊದಲಿನಿಂದಲೂ ಕೋವಿಡ್ ಹಗರಣ ಹಾಗು 40 ಪರ್ಸೆಂಟ್ ಸರ್ಕಾರ ಎಂದು ವಾಗ್ದಾಳಿ ಮಾಡಿತ್ತು. ಅಂದಿನ ಬಿಜೆಪಿ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಚಾರ್ಜ್‌ಶೀಟ್ ಸಲ್ಲಿಸಿತ್ತು. ಭಾರತೀಯ ಜನತಾ ಪಾರ್ಟಿಯ ಸರ್ಕಾರ ಅಕ್ರಮಗಳ ಕೂಪ ಎನ್ನುವುದನ್ನು ರಾಜ್ಯದ ಜನರಿಗೆ ಮನವರಿಕೆ ಮಾಡುವಲ್ಲಿ ಯಶಸ್ವಿಯಾಗಿತ್ತು. ಆದರೆ ಸರ್ಕಾರ ಅಧಿಕಾರಕ್ಕೆ ಬಂದು ಒಂದೂವರೆ ವರ್ಷ ಕಳೆದರೂ ಕೋವಿಡ್ ವಿಚಾರದಲ್ಲಿ ಗಟ್ಟಿ ನಿರ್ಧಾರ ತೆಗೆದುಕೊಂಡಿರಲಿಲ್ಲ. ಇದೀಗ ಸರ್ಕಾರ ಮೊದಲ ಹೆಜ್ಜೆ ಇಟ್ಟಿದೆ. ಕೋವಿಡ್ ಹಗರಣದಲ್ಲಿ ಬಿಜೆಪಿ ನಾಯಕರಿಗೆ ಸಂಕಷ್ಟ ಎದುರಾಗುವ ಸಾಧ್ಯತೆಗಳು ಹೆಚ್ಚಾಗಿದೆ.
ಕೊವೀಡ್ ಅಕ್ರಮದ ತನಿಖೆಗೆ ಮುಂದಾಗಿರುವ ರಾಜ್ಯ ಸರ್ಕಾರ, ಕೋವಿಡ್ ಅಕ್ರಮಗಳ ಬಗ್ಗೆ ತನಿಖೆ ನಡೆಸುವಂತೆ ದೂರು ಸಲ್ಲಿಸಲಾಗಿದೆ. ಸರ್ಕಾರಿ ಅಧಿಕಾರಿ ವಿಧಾನಸೌಧ ಪೊಲೀಸ್ ಠಾಣೆಗೆ ದೂರು ಸಲ್ಲಿಕೆ ಮಾಡಲಾಗಿದೆ. ಅಧಿಕಾರಿ ದೂರಿನ ಮೇರೆಗೆ ಎಫ್ಐಆರ್ ದಾಖಲು ಮಾಡಲಾಗಿದೆ. ಎಫ್ಐಆರ್‌ನಲ್ಲಿ ಹಲವರನ್ನು ನೇರವಾಗಿ ಹೆಸರಿಸಿದ್ದು, ಕರ್ನಾಟಕ ಪೊಲಿಟಿಷಿಯನ್ಸ್, ಉದ್ಯಮಿಗಳು ಎಂದು ದೂರಿನಲ್ಲಿ ಉಲ್ಲೇಖ ಮಾಡಲಾಗಿದೆ. ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.