• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

OBC ಮೀಸಲಾತಿ: ಸರ್ಕಾರಿ ವಿಶ್ವವಿದ್ಯಾಲಯಗಳಲ್ಲಿ  55% ಮೀಸಲಾತಿ ಹುದ್ದೆಗಳು ಖಾಲಿ!

ಫಾತಿಮಾ by ಫಾತಿಮಾ
August 4, 2021
in ದೇಶ
0
OBC ಮೀಸಲಾತಿ: ಸರ್ಕಾರಿ ವಿಶ್ವವಿದ್ಯಾಲಯಗಳಲ್ಲಿ  55% ಮೀಸಲಾತಿ ಹುದ್ದೆಗಳು ಖಾಲಿ!
Share on WhatsAppShare on FacebookShare on Telegram

ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ವೈದ್ಯಕೀಯ ಸೀಟುಗಳಿಗಾಗಿ ಇತರ ಹಿಂದುಳಿದ ವರ್ಗಗಳಿಗೆ (ಒಬಿಸಿ) ಮೀಸಲಾತಿ ವಿಸ್ತರಿಸುವ ನಿರ್ಧಾರವನ್ನು ಭಾರತ ಸರ್ಕಾರ ಘೋಷಿಸಿದ ಕೆಲವೇ ದಿನಗಳ ನಂತರ‌ ಮಾಹಿತಿಯೊಂದು ಬಹಿರಂಗವಾಗಿದ್ದು ದೇಶದ ಶಿಕ್ಷಣ ಸಂಸ್ಥೆಗಳಲ್ಲಿ ಒಬಿಸಿ ಹುದ್ದೆಗಳಲ್ಲಿ ಭಾರಿ ಸಂಖ್ಯೆಯ ಹುದ್ದೆಗಳು ಖಾಲಿ ಇವೆ ಎನ್ನಲಾಗಿದೆ.

ADVERTISEMENT

ಕೇಂದ್ರೀಯ ವಿಶ್ವವಿದ್ಯಾನಿಲಯಗಳಲ್ಲಿ ಒಬಿಸಿಗಳಿಗೆ ಮಂಜೂರಾದ ಸುಮಾರು 55 ಪ್ರತಿಶತದಷ್ಟು ಹುದ್ದೆಗಳು ದೇಶದಾದ್ಯಂತ ಖಾಲಿಯಿದ್ದರೆ, ಬೆಂಗಳೂರಿನಲ್ಲಿರುವ ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ (ಐಐಎಸ್ಸಿ) ಸುಮಾರು 89 ಪ್ರತಿಶತ ಒಬಿಸಿ ಸೀಟುಗಳು ಖಾಲಿ ಇವೆ.

ಶಿಕ್ಷಣ ಸಚಿವಾಲಯದ ಅಂಕಿಅಂಶಗಳನ್ನು ಆಧಾರವಾಗಿಟ್ಟುಕೊಂಡು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಲೋಕಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಲಿಖಿತ ಉತ್ತರ‌ ನೀಡುತ್ತಾ 45 ಕೇಂದ್ರೀಯ ವಿಶ್ವವಿದ್ಯಾಲಯಗಳಲ್ಲಿ ST ಮತ್ತು SC ವರ್ಗಗಳ ಖಾಲಿ ಹುದ್ದೆಗಳು ಕ್ರಮವಾಗಿ 38.71 ಶೇಕಡಾ ಮತ್ತು 41.64 ಪ್ರತಿಶತದಷ್ಟಿದೆ.  ಅದೇ ರೀತಿ, ಐಐಎಸ್ಸಿಯಲ್ಲಿ 54.7% ಎಸ್ಟಿ ಮತ್ತು 20% ಎಸ್ಸಿ ಕೆಟಗೆರಿಯ ಹುದ್ದೆಗಳು ಖಾಲಿ ಇವೆ ಎಂದಿದ್ದಾರೆ. ಭಾರತೀಯ ವಿಜ್ಞಾನ ಶಿಕ್ಷಣ ಮತ್ತು ಸಂಶೋಧನಾ ಸಂಸ್ಥೆಗಳಲ್ಲಿ (IISERs), SC, ST ಮತ್ತು OBC ಗಳ ಖಾಲಿ ಹುದ್ದೆಗಳು ಕ್ರಮವಾಗಿ 39.4 %, 57.89% ಮತ್ತು 43.7%.

“ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವ ಹೊಣೆಗಾರಿಕೆ ಕೇಂದ್ರೀಯ ವಿಶ್ವವಿದ್ಯಾಲಯಗಳ ಮೇಲಿದೆ.  ವಿಶ್ವವಿದ್ಯಾನಿಲಯವನ್ನು ಒಂದು ಘಟಕವಾಗಿ ಪರಿಗಣಿಸಿ ಕೇಂದ್ರ ಶಿಕ್ಷಣ ಸಂಸ್ಥೆಗಳಲ್ಲಿ ಶಿಕ್ಷಕರ ಕೇಡರ್‌ನಲ್ಲಿ ನೇರ ನೇಮಕಾತಿಯಲ್ಲಿ ಹುದ್ದೆಗಳ ಮೀಸಲಾತಿಯನ್ನು ಒದಗಿಸಲು 2019 ರ ಜುಲೈ 12 ರಂದು ಸೂಚಿಸಲಾಗಿದೆ. ಎಲ್ಲಾ ಸಂದರ್ಭಗಳನ್ನು ಗಣನೆಗೆ ತೆಗೆದುಕೊಂಡು ಎಸ್‌ಸಿ, ಎಸ್‌ಟಿ ಮತ್ತು ಒಬಿಸಿಗಳ ನೇಮಕಾತಿ, ಕೇಂದ್ರೀಯ ಶಿಕ್ಷಣ ಸಂಸ್ಥೆಗಳಲ್ಲಿ (ಶಿಕ್ಷಕರ ಕೇಡರಿನಲ್ಲಿ ಮೀಸಲಾತಿ) ಹಕ್ಕುಗಳ ರಕ್ಷಣೆಯನ್ನು ಖಚಿತಪಡಿಸಿಕೊಳ್ಳಬೇಕು” ಎಂದು ಸಚಿವರು ಹೇಳಿದ್ದಾರೆ.

“ಈಗ, ಕಾಯಿದೆಯ ಅನುಷ್ಠಾನದ ನಂತರ, ಎಲ್ಲಾ ಹಂತಗಳಲ್ಲಿ ಒಬಿಸಿ ಮೀಸಲಾತಿಯನ್ನು ಜಾರಿಗೆ ತರಲಾಗಿದೆ. ಅಲ್ಲದೆ ಜೂನ್ 2019 ರಲ್ಲಿ, ಯುಜಿಸಿಯು ವಿಶ್ವವಿದ್ಯಾಲಯಗಳು, ಕಾಲೇಜುಗಳು ಮತ್ತು ವಿಶ್ವವಿದ್ಯಾನಿಲಯಗಳ ಅಧ್ಯಾಪಕರ ನೇಮಕಾತಿಗೆ ಮಾರ್ಗಸೂಚಿಗಳನ್ನು ಸಿದ್ಧಪಡಿಸಿದೆ ಮತ್ತು ಎಲ್ಲಾ ವಿಶ್ವವಿದ್ಯಾಲಯಗಳಿಗೆ ಈ ಮಾರ್ಗಸೂಚಿಗಳನ್ನು ಪಾಲಿಸಲು ನಿರ್ದೇಶನ‌ ನೀಡಲಾಗಿದೆ” ಎಂದು ಪ್ರಧಾನ್ ಹೇಳಿದ್ದಾರೆ.

ಜುಲೈ 31, 2019, ಆಗಸ್ಟ್ 7, 2019, ಸೆಪ್ಟೆಂಬರ್ 5, 2019 ಮತ್ತು ಅಕ್ಟೋಬರ್ 22, 2019 ರಂದು ಯುಜಿಸಿಯು  ಖಾಲಿ ಇರುವ ಹುದ್ದೆಗಳನ್ನು ಬೇಗನೆ ಭರ್ತಿ ಮಾಡುವಂತೆ ಮತ್ತೊಮ್ಮೆ ಮನವಿ ಮಾಡಿದೆ ಎಂದು ಸಚಿವರು ಹೇಳಿಕೆ ನೀಡಿದ್ದಾರೆ.

Tags: jobslokasabhaOBCReservationUniversities
Previous Post

ಸಚಿವ ಸಂಪುಟ ವಿಸ್ತರಣೆ; ಬಿ.ಎಸ್ ಯಡಿಯೂರಪ್ಪ ತವರು ಜಿಲ್ಲೆ ಶಿವಮೊಗ್ಗದಿಂದ ಯಾರಾಗಲಿದ್ದಾರೆ ಮಂತ್ರಿ?

Next Post

ಭಾರತದ ಜತೆ 600 ಕೋಟಿ ಮೊತ್ತದ ಹರ್ಪೂನ್ ಕ್ಷಿಪಣಿ ಒಪ್ಪಂದ; ಅಮೆರಿಕ ಅನುಮೋದನೆ

Related Posts

ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌
Top Story

ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌

by ಪ್ರತಿಧ್ವನಿ
May 20, 2026
0

ಬೆಂಗಳೂರು : ಕರ್ನಾಟಕ ಸರ್ಕಾರ ಹಾಗೂ ರಾಜ್ಯ ಚುನಾವಣಾ ಆಯೋಗಕ್ಕೆ (SEC) ಬೆಂಗಳೂರಿನ ಐದು ನಗರ ಪಾಲಿಕೆಗಳ ಚುನಾವಣೆಯನ್ನು ಪೂರ್ಣಗೊಳಿಸಲು ಅಂತಿಮ ಅವಕಾಶವಾಗಿ ಆಗಸ್ಟ್ 31ರವರೆಗೆ ಹೆಚ್ಚುವರಿ ಕಾಲಾವಕಾಶ...

Read moreDetails
ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

May 20, 2026
ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

May 20, 2026
“Welcome to Rome, My Friend ಎಂದ ಮೆಲೋನಿ : ಮೋದಿಗೆ ಇಟಲಿ ಪ್ರಧಾನಿ ಮಾಡಿದ ಪಾಠವೇನು..?

“Welcome to Rome, My Friend ಎಂದ ಮೆಲೋನಿ : ಮೋದಿಗೆ ಇಟಲಿ ಪ್ರಧಾನಿ ಮಾಡಿದ ಪಾಠವೇನು..?

May 20, 2026
“ರಸ್ತೆ ಗುಂಡಿ ಮುಚ್ಚಿಲ್ಲ, ರೈತರ ಕಷ್ಟಕ್ಕೆ ಸ್ಪಂದಿಸಿಲ್ಲ, ಕೇವಲ ಜಾಹೀರಾತಿನಿಂದಷ್ಟೇ ಯಶಸ್ಸನ್ನು ಬಿಚ್ಚಿಡುವ ಕೆಲಸ”

“ರಸ್ತೆ ಗುಂಡಿ ಮುಚ್ಚಿಲ್ಲ, ರೈತರ ಕಷ್ಟಕ್ಕೆ ಸ್ಪಂದಿಸಿಲ್ಲ, ಕೇವಲ ಜಾಹೀರಾತಿನಿಂದಷ್ಟೇ ಯಶಸ್ಸನ್ನು ಬಿಚ್ಚಿಡುವ ಕೆಲಸ”

May 19, 2026
Next Post
ಭಾರತದ ಜತೆ 600 ಕೋಟಿ ಮೊತ್ತದ ಹರ್ಪೂನ್ ಕ್ಷಿಪಣಿ ಒಪ್ಪಂದ; ಅಮೆರಿಕ ಅನುಮೋದನೆ

ಭಾರತದ ಜತೆ 600 ಕೋಟಿ ಮೊತ್ತದ ಹರ್ಪೂನ್ ಕ್ಷಿಪಣಿ ಒಪ್ಪಂದ; ಅಮೆರಿಕ ಅನುಮೋದನೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada