ಶಹಜಹಾನ್‌ಪುರ: ಉತ್ತರ ಪ್ರದೇಶದ ಶಹಜಹಾನ್‌ಪುರದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಭಕ್ತರನ್ನು ಹೊತ್ತೊಯ್ಯುತ್ತಿದ್ದ ಖಾಸಗಿ ಬಸ್ ರಸ್ತೆಯಲ್ಲಿ ನಿಂತಿದ್ದ ಬಸ್‌ಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ.
ಅಪಘಾತದಲ್ಲಿ ಗುಜರಾತ್ ಮೂಲದ ಸುಮಾರು 56 ಭಕ್ತರು ಗಾಯಗೊಂಡಿದ್ದಾರೆ. ಅಪಘಾತದಲ್ಲಿ ಗಾಯಗೊಂಡಿರುವ ಐವರು ಭಕ್ತರ ಸ್ಥಿತಿ ಚಿಂತಾಜನಕವಾಗಿದೆ. ಅವರನ್ನು ವೈದ್ಯಕೀಯ ಕಾಲೇಜಿಗೆ ದಾಖಲಿಸಲಾಗಿದೆ. ಭಕ್ತರು ತುಂಬಿದ್ದ ಬಸ್ ಹರಿದ್ವಾರದಿಂದ ಅಯೋಧ್ಯೆಗೆ ಹೋಗುತ್ತಿತ್ತು. ಎದುರಿನಿಂದ ಬರುತ್ತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಚಾಲಕ ಯತ್ನಿಸಿದಾಗ ಈ ಅವಘಡ ಸಂಭವಿಸಿದೆ. ಸದ್ಯ ಗಾಯಗೊಂಡಿರುವ ಎಲ್ಲ ಭಕ್ತರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಠಾಣಾ ಕತ್ರಾ ಪ್ರದೇಶದ ಫರೂಕಾಬಾದ್ ರಾಜ್ಯ ಹೆದ್ದಾರಿಯ ಫೀಲ್‌ನಗರ ಗ್ರಾಮದ ಬಳಿ ಈ ಘಟನೆ ನಡೆದಿದೆ. ಅಪಘಾತದ ವೇಳೆ ಎಲ್ಲಾ ಪ್ರಯಾಣಿಕರು ಮಲಗಿದ್ದರು. ಅಪಘಾತದ ನಂತರ ಸ್ಥಳದಲ್ಲಿ ಗದ್ದಲ ಉಂಟಾಯಿತು. ಪೊಲೀಸರು ಹಾಗೂ ಸ್ಥಳೀಯರ ನೆರವಿನೊಂದಿಗೆ ಎಲ್ಲ ಗಾಯಾಳುಗಳನ್ನು ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಯಿತು.
ಐವರು ಭಕ್ತರ ಸ್ಥಿತಿ ಚಿಂತಾಜನಕವಾಗಿದ್ದು, ಅವರನ್ನು ವೈದ್ಯಕೀಯ ಕಾಲೇಜಿಗೆ ದಾಖಲಿಸಲಾಗಿದೆ. ಉಳಿದ ಭಕ್ತರಿಗೆ ಸಮುದಾಯ ಆರೋಗ್ಯ ಕೇಂದ್ರ ಕತ್ರದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಭಕ್ತರು ಹರಿದ್ವಾರದಿಂದ ವೃಂದಾವನ, ಮಥುರಾ ಮತ್ತು ಅಯೋಧ್ಯೆಗೆ ಧಾರ್ಮಿಕ ಯಾತ್ರೆಗೆ ತೆರಳುತ್ತಿದ್ದ ವೇಳೆ ಶಹಜಹಾನ್‌ಪುರದಲ್ಲಿ ಅಪಘಾತ ಸಂಭವಿಸಿದೆ. ಸದ್ಯ ಎಲ್ಲಾ ಗಾಯಾಳುಗಳಿಗೆ ಚಿಕಿತ್ಸೆ ಆರಂಭಿಸಲಾಗಿದೆ.