ಪ್ರಧಾನಿ ನರೇಂದ್ರ ಮೋದಿ ಅಕ್ಟೋಬರ್ 1ರಂದು ದೇಶದ ಮಹತ್ವದ 5ಜಿ ತರಂಗಾಂತರ ಸೇವೆಯನ್ನು ಉದ್ಘಾಟಿಸಲಿದ್ದಾರೆ.
ದೆಹಲಿಯಲ್ಲಿ ನಡೆಯಲಿರುವ ಮೊಬೈಲ್ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ೫ಜಿ ತರಂಗಾಂತರ ಸೇವೆಯನ್ನು ಉದ್ಘಾಟಿಸಲಿದ್ದಾರೆ.

ಕೇಂದ್ರ ಸರಕಾರದ ಬ್ರಾಡ್ ಬ್ಯಾಂಡ್ ಮಿಷನ್ ಶನಿವಾರ ಟ್ವೀಟರ್ ನಲ್ಲಿ ಈ ವಿಷಯ ತಿಳಿಸಿದ್ದು, ಏಷ್ಯಾದ ಅತೀ ದೊಡ್ಡ ತಾಂತ್ರಿಕ ಸಮ್ಮೇಳನದಲ್ಲಿ ಪ್ರಧಾನಿ ನರೇಂದ್ರ ಮೋದಿ ೫ಜಿ ಸೇವೆಯನ್ನು ಉದ್ಘಾಟಿಸಲಿದ್ದಾರೆ ಎಂದು ತಿಳಿಸಿದೆ.