• Home
  • About Us
  • ಕರ್ನಾಟಕ
Tuesday, November 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಅಂತಿಮ ಸುತ್ತಿನಲ್ಲಿ 5 ಸ್ಥಳ, ವಾರದಲ್ಲಿ ಆಖೈರು:ಎಂ ಬಿ ಪಾಟೀಲ

ಪ್ರತಿಧ್ವನಿ by ಪ್ರತಿಧ್ವನಿ
October 19, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಬೆಂಗಳೂರು: ಜಾಗತಿಕ ಮಟ್ಟದಲ್ಲಿ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಬೆಂಗಳೂರು ಮಹಾನಗರದ ಸಾರ್ವಜನಿಕರು ಮತ್ತು ಉದ್ಯಮಗಳಿಗೆ ಇನ್ನೊಂದು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಅತ್ಯಗತ್ಯವಾಗಿದೆ. ಇದಕ್ಕಾಗಿ ಸರಕಾರವು ಐದು ಸ್ಥಳಗಳನ್ನು ಗುರುತಿಸಿದೆ. ಆದರೆ ಇವುಗಳ ಪೈಕಿ ಯಾವುದನ್ನೂ ಆಖೈರು ಮಾಡಿಲ್ಲ. ಈ ಸಂಬಂಧ ಇನ್ನೊಂದು ವಾರದಲ್ಲಿ ಸಭೆ ಸೇರಿ, ಅಂತಿಮ ತೀರ್ಮಾನಕ್ಕೆ ಬರಲಾಗುವುದು ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ ಬಿ ಪಾಟೀಲ ತಿಳಿಸಿದ್ದಾರೆ.

ADVERTISEMENT

ಶುಕ್ರವಾರ ಅವರು ತಮ್ಮ ಕಚೇರಿಯಲ್ಲಿ ಕರೆದಿದ್ದ ಮಹತ್ತ್ವದ ಸಭೆಯ ನಂತರ ಈ ವಿಚಾರ ಹೇಳಿದ್ದಾರೆ. ಸಭೆಯಲ್ಲಿ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಭಾಗವಹಿಸಿದ್ದರು.

ಸಭೆಯ ಬಳಿಕ ಮಾತನಾಡಿದ ಪಾಟೀಲ ಅವರು, `ಎರಡನೆಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸ್ಥಳವನ್ನು ಈಗಾಗಲೇ ತೀರ್ಮಾನಿಸಲಾಗಿದೆ ಎನ್ನುವ ವರದಿಗಳಿಗೆ ಆಧಾರವಿಲ್ಲ. ಡಾಬಸಪೇಟೆ, ನೆಲಮಂಗಲ, ಬಿಡದಿ, ಹಾರೋಹಳ್ಳಿ ಸೇರಿದಂತೆ ಒಟ್ಟು ಐದು ಸ್ಥಳಗಳನ್ನು ನಾವು ಮುಕ್ತವಾಗಿ ಇಟ್ಟುಕೊಂಡಿದ್ದೇವೆ. ಇವತ್ತು ಇನ್ನೂ ಒಂದು ಸ್ಥಳದ ಬಗ್ಗೆ ಯೂ ಚರ್ಚೆ ಆಗಿದೆ. ಇವುಗಳ ಬಗ್ಗೆ ವಸ್ತುಸ್ಥಿತಿ ಆಧರಿಸಿ ಮತ್ತು ಸಾಧಕ-ಬಾಧಕಗಳನ್ನು ಗಮನಿಸಿ, ವರದಿ ಕೊಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಇನ್ನೊಂದು ವಾರದಲ್ಲಿ ಮತ್ತೊಂದು ಸುತ್ತು ಸಭೆ ಸೇರಿ, ಸ್ಥಳವನ್ನು ಆಖೈರುಗೊಳಿಸಲಾಗುವುದು’ ಎಂದು ವಿವರಿಸಿದ್ದಾರೆ.

ವಿಮಾನ ನಿಲ್ದಾಣಕ್ಕೆ ಸ್ಥಳ ಆಯ್ಕೆ ಮಾಡುವಲ್ಲಿ ಯಾರಿಗೂ ರಾಜಕೀಯ ಹಿತಾಸಕ್ತಿಗಳೇನಿಲ್ಲ. ಬೆಂಗಳೂರಿನ ಜನತೆಗೆ ಮತ್ತು ಉದ್ಯಮಿಗಳ ಅನುಕೂಲವಷ್ಟೇ ಇಲ್ಲಿ ಮುಖ್ಯ. ಇದರಿಂದ ನಮ್ಮ ಆರ್ಥಿಕ ಬೆಳವಣಿಗೆಗೆ ಒಳ್ಳೆಯ ಕೊಡುಗೆ ಬರಬೇಕು. ಇದರ ಜೊತೆ ನಾವು ರಾಜಿ ಮಾಡಿಕೊಳ್ಳುವುದಿಲ್ಲ. ಅಂತಿಮವಾಗಿ ಬೆಂಗಳೂರು ನಗರವು ಇನ್ನೊಂದು ಸ್ತರಕ್ಕೆ ಏರಬೇಕು ಎನ್ನುವುದಷ್ಟೇ ಸರಕಾರದ ಗುರಿಯಾಗಿದೆ. ಎರಡನೆಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ನಮಗೆ ಸ್ಥಳಾವಕಾಶಕ್ಕೇನೂ ಕೊರತೆ ಇಲ್ಲ. ಬೆಂಗಳೂರಿನ ಸುತ್ತಮುತ್ತಲೂ ಜಾಗವಿದ್ದು, ಇದರಲ್ಲಿ ಸೂಕ್ತವಾದುದನ್ನು ಆಯ್ಕೆ ಮಾಡಲಾಗುವುದು ಎಂದು ಅವರು ವಿವರಿಸಿದ್ದಾರೆ.

ಸಭೆಯಲ್ಲಿ ಸರಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಮುಖ್ಯಮಂತ್ರಿಗಳ ಹೆಚ್ಚುವರಿ ಕಾರ್ಯದರ್ಶಿ ಎಲ್ ಕೆ ಅತೀಕ್, ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಸ್ ಸೆಲ್ವಕುಮಾರ್, ನಮ್ಮ ಮೆಟ್ರೊ ವ್ಯವಸ್ಥಾಪಕ ನಿರ್ದೇಶಕ ಮಹೇಶ್ವರ ರಾವ್, ಮೂಲಸೌಕರ್ಯ ಅಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಡಾ.ಎನ್ ಮಂಜುಳಾ, ಕೆಐಎಡಿಬಿ ಸಿಇಒ ಡಾ.ಮಹೇಶ, ಸೇರಿದಂತೆ ಮತ್ತಿತರರು ಇದ್ದರು.

Tags: Additional Secretary to Chief Minister LK AtiqAnother international airportbengaluruCongress PartyDCM DK ShivakumarKIADB CEO Dr. MaheshManaging Director of Nama Metro Maheshwar RaoMinister MB PatilMinister Priyank KhargePrincipal Secretary Industries Department S SelvakumarSecretary Infrastructure Development Department Dr. N ManjulaShalini Rajneesh
Previous Post

ಉಗುರುನಾ ಸುತ್ತ ಕಪ್ಪು ಕೆಲೆಯಾಗಿದ್ರೆ, ಈ ರೆಮಿಡಿನಾ ಟ್ರೈ ಮಾಡಿ.!

Next Post

ಮಹಾರಾಷ್ಟ್ರ ಚುನಾವಣಾ ವೇಳಾಪಟ್ಟಿ ;ಆಯೋಗದ ಪಾತ್ರ ಪ್ರಶ್ನಿಸಿದ ಕಾಂಗ್ರೆಸ್‌ ನಾಯಕ

Related Posts

Top Story

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

by ಪ್ರತಿಧ್ವನಿ
November 3, 2025
0

ಡಾ.ರಾಜ್ ಪರದೆ ಮೇಲೆ ಮಾತ್ರವಲ್ಲ, ನಿಜ ಜೀವನದಲ್ಲೂ ಅದೇ ಮೌಲ್ಯಗಳನ್ನು ಪಾಲಿಸಿದರು: ಸಿ.ಎಂ ಸಿದ್ದರಾಮಯ್ಯ ಅಪಾರ ಮೆಚ್ಚುಗೆ ಸಿನಿಮಾ ತಾರೆಯರು ಪರದೆ ಮೇಲೆ ಕಾಣುವಷ್ಟೇ ಮೌಲ್ಯಯುತವಾಗಿ ನಿಜ...

Read moreDetails

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

November 3, 2025
ಅಪ್ಪಂದಿರು ಅಧಿಕಾರದಿಂದ ಇಳಿದರೆ ಆ ಪುತ್ರರ ಸ್ಥಿತಿ ತುಂಬಾ ಬದಲಾಗಲಿದೆ- ಲೆಹರ್ ಸಿಂಗ್

ಅಪ್ಪಂದಿರು ಅಧಿಕಾರದಿಂದ ಇಳಿದರೆ ಆ ಪುತ್ರರ ಸ್ಥಿತಿ ತುಂಬಾ ಬದಲಾಗಲಿದೆ- ಲೆಹರ್ ಸಿಂಗ್

November 3, 2025

CM Siddaramaiah: ಬಿಹಾರ ವಿಧಾನಸಭಾ ಚುನಾವಣೆ: ಪ್ರತಿಪಕ್ಷಗಳ ಮಹಾ ಮೈತ್ರಿಕೂಟ ಗೆಲ್ಲುವ ಭರವಸೆಯಿದೆ..

November 3, 2025

Minister KJ George: ಜಾಗ ನೀಡಿದರೆ ಹೆಚ್ಚುವರಿ ವಿದ್ಯುತ್ ಉಪಕೇಂದ್ರ ಸ್ಥಾಪನೆ..!!

November 3, 2025
Next Post

ಮಹಾರಾಷ್ಟ್ರ ಚುನಾವಣಾ ವೇಳಾಪಟ್ಟಿ ;ಆಯೋಗದ ಪಾತ್ರ ಪ್ರಶ್ನಿಸಿದ ಕಾಂಗ್ರೆಸ್‌ ನಾಯಕ

Recent News

Top Story

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

by ಪ್ರತಿಧ್ವನಿ
November 3, 2025
Top Story

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

by ಪ್ರತಿಧ್ವನಿ
November 3, 2025
Top Story

CM Siddaramaiah: ಬಿಹಾರ ವಿಧಾನಸಭಾ ಚುನಾವಣೆ: ಪ್ರತಿಪಕ್ಷಗಳ ಮಹಾ ಮೈತ್ರಿಕೂಟ ಗೆಲ್ಲುವ ಭರವಸೆಯಿದೆ..

by ಪ್ರತಿಧ್ವನಿ
November 3, 2025
Top Story

Minister KJ George: ಜಾಗ ನೀಡಿದರೆ ಹೆಚ್ಚುವರಿ ವಿದ್ಯುತ್ ಉಪಕೇಂದ್ರ ಸ್ಥಾಪನೆ..!!

by ಪ್ರತಿಧ್ವನಿ
November 3, 2025
Top Story

CM Siddaramaiah: ಸಾಮಾಜಿಕ ನ್ಯಾಯದ ಹರಿಕಾರ ದೇವರಾಜ ಅರಸು..!!

by ಪ್ರತಿಧ್ವನಿ
November 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

November 3, 2025

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

November 3, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada