ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ 1 ಸಾವಿರ ದಿನಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ಹಾವೇರಿ ಜಿಲ್ಲೆ ಶಿಗ್ಗಾಂವಿ ಸಮೀಪದ ಗೊಟಗೋಡಿಯ ಉತ್ಸವ ರಾಕ್ ಗಾರ್ಡನ್‌ನವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ 6.5 ಅಡಿಯ ಮೂರ್ತಿಯನ್ನು ತಯಾರಿಸಿದ್ದಾರೆ.

ವಿಧಾನಸೌಧದ ಮುಂಭಾಗದಲ್ಲಿ ಸಿಎಂ ಸಿದ್ದರಾಮಯ್ಯ ನಿಂತಂತೆ ಮೂರ್ತಿ ರಚನೆಯಾಗಿದೆ. ಗೊಟಗೋಡಿ ರಾಕ್ ಗಾರ್ಡನ್ ಮುಖ್ಯಸ್ಥ ದಾಸನೂರ್ ಅವರು ಇದನ್ನು ಕೊಡುಗೆಯಾಗಿ ನೀಡಿದ್ದಾರೆ. ಈ ಮೂರ್ತಿಯನ್ನು ರಾಕ್ ಗಾರ್ಡನ್‌ನಲ್ಲಿ ಪ್ರತಿಷ್ಠಾಪಿಸಲಾಗುತ್ತಿದೆ.

ಸಿದ್ದರಾಮಯ್ಯ ಅವರ ಮೂರ್ತಿಯನ್ನು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಅನಾವರಣಗೊಳಿಸಿದರು.ಸಿದ್ದರಾಮಯ್ಯ ಅವರ 6.5 ಅಡಿ ಎತ್ತರದ ಮೂರ್ತಿಯನ್ನು ಅನಾವರಣಗೊಳಿಸಿದ ಡಿಕೆಶಿ, ಸಿದ್ದರಾಮಯ್ಯರನ್ನು ಅಭಿನಂದಿಸಿದರು. ಮೂರ್ತಿಯನ್ನು ನೋಡಿದ ಸಿದ್ದರಾಮಯ್ಯ ಸಂತಸದಿಂದ, ಬಹಳ ಉತ್ತಮವಾಗಿ ಮೂರ್ತಿ ರಚಿಸಿದ್ದಾರೆ.ನಾನೇ ನಿಂತಂತೆ ಕಾಣುತ್ತದೆ ಎಂದು ಖುಷಿ ಪಟ್ಟರು.






