ಅಮೆರಿಕದ ಪೂರ್ವ ಮೆಕ್ಸಿಕೊದಲ್ಲಿ ರಿಕ್ಟರ್ ಮಾಪಕದಲ್ಲಿ 6.8 ಪ್ರಮಾಣದಲ್ಲಿ ಪ್ರಬಲ ಭೂಕಂಪನ ಸಂಭವಿಸಿದ್ದು, ಒಬ್ಬರು ಮೃತಪಟ್ಟಿದ್ದಾರೆ.
ಮೆಕ್ಸಿಕೊದಲ್ಲಿ ಕಳೆದ ಒಂದು ವಾರದಲ್ಲಿ ಸಂಭವಿಸಿದ್ದ ಎರಡನೇ ಭೂಕಂಪನ ಇದಾಗಿದ್ದು, ಗುರುವಾರ ಸಂಭವಿಸಿದ ಭೂಕಂಪನದಲ್ಲಿ ಮಹಿಳೆಯೊಬ್ಬರು ಮೇಲಿಂದ ಬಿದ್ದು ಮೃತಪಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಭೂಕಂಪನ ಸಂಭವಿಸಿದಾಗ ಮನೆಯಲ್ಲಿ ಇದ್ದವರೆಲ್ಲಾ ಹೊರಗೆ ಓಡಿ ಬಂದಿದ್ದಾರೆ. ಈ ವೇಳೆ ಮಹಿಳೆ ಮೆಟ್ಟಿಲು ಇಳಿಯುವಾಗ ಭೂಮಿ ಅಲ್ಲಡಿದ್ದರಿಂದ ನಿಯಂತ್ರಣ ತಪ್ಪಿ ಮೇಲಿಂದ ಬಿದ್ದಿದ್ದಾರೆ ಎಂದು ಅಧಿಕಾರಿಗಳು ವಿವರಿಸಿದ್ದಾರೆ.
ಸೋಮವಾರ ಸಂಭವಿಸಿದ ಭೂಕಂಪನದ ಪ್ರಮಾಣ ರಿಕ್ಟರ್ ಮಾಪಕದಲ್ಲಿ 7.0ರಷ್ಟಿತ್ತು. ನಗರದಿಂದ 20 ಕಿ.ಮೀ. ದೂರದಲ್ಲಿ ಭೂಕಂಪನದ ತೀವ್ರತೆ ಪತ್ತೆಯಾಗಿದೆ.











