ಬೆಂಗಳೂರಿನ ಹೆಣ್ಣೂರು ಸಮೀಪದ ಬಾಬುಸಾಬ್ ಪಾಳ್ಯದಲ್ಲಿ ವ್ಯಾಪಕ ಮಳೆಯಿಂದಾಗಿ 6 ಅಂತಸ್ತಿನ ಕಟ್ಟಡ ಕುಸಿದ ಘಟನೆಯ (Bengaluru building collapse) ಬಗ್ಗೆ ಒಂದಷ್ಟು ಮಾಹಿತಿಗಳು ಇದೀಗ ಲಭ್ಯವಾಗುತ್ತಿದೆ.

ಈ ಬಗ್ಗೆ ಹೆಣ್ಣೂರು ಠಾಣೆಯಲ್ಲಿ ಎಫ್ ಐಆರ್ (FIR) ದಾಖಲಲಾಗಿದ್ದು, ಕಟ್ಟಡ ಮಾಲೀಕ ಮುನಿರಾಜು ರೆಡ್ಡಿ ಹಾಗೂ ಆತನ ಮಗನ ವಿರುದ್ಧ ಎಫ್ಐಆರ್ ದಾಖಲು ಮಾಡಲಾಗಿದೆ. ಒಟ್ಟು ಮೂರು ಜನರ ಹೆಸರನ್ನು ಪೊಲೀಸರು ಈ FIR ನಲ್ಲಿ ಉಲ್ಲೇಖ ಮಾಡಿದ್ದಾರೆ.
ಅಕ್ರಮ ಕಟ್ಟಡ ನಿರ್ಮಾಣ ಮತ್ತು ಕಳಪೆ ಕಾಮಗಾರಿಯೇ ಈ ಘಟನೆಗೆ ಪ್ರಮುಖ ಕಾರಣ ಎನ್ನಲಾಗಿದ್ದು, ಮುನಿರಾಜು ರೆಡ್ಡಿ ಆತನ ಮಗ ಹಾಗೂ ಕಾಂಟ್ರ್ಯಾಕ್ಟರ್ ಸೇರಿ ಇತರರು ಎಂದು ಎಫ್ ಐಆರ್ ನಲ್ಲಿ ಪೊಲೀಸರು ಉಲ್ಲೇಖಿಸಿದ್ದಾರೆ. ಈ ಬಗ್ಗೆ ನಿರ್ಲಕ್ಷ್ಯ ಕಾಯ್ದೆಯಡಿ ಪೊಲೀಸರು ಪ್ರಕರಣ ದಾಕಲಿಸಿಕೊಂಡಿದ್ದಾರೆ.
 
			
 
                                 
                                 
                                