ಬೆಳಗಾವಿ;ಬೊಲೆರೊ ವಾಹನ ಮರಕ್ಕೆ ಢಿಕ್ಕಿಯಾಗಿ ದೇವರ ದರ್ಶನಕ್ಕೆ ಹೊರಟ 6 ಮಂದಿ ಭೀಕರ ಅಪಘಾತದಲ್ಲಿ ಮೃತಪಟ್ಟ ಘಟನೆ ರಾಮದುರ್ಗ ತಾಲೂಕಿನ ಚುಂಚನೂರ ಬಳಿ ನಡೆದಿದೆ.
ಹನುಮವ್ವ, ದೀಪಾ, ಸವಿತಾ, ಸುಪ್ರಿತಾ, ಮಾರುತಿ, ಇಂದಿರವ್ವ ಮೃತರು ಎಂದು ಗುರುತಿಸಲಾಗಿದೆ.
ಸವದತ್ತಿ ಯಲ್ಲಮನ ದರ್ಶನಕ್ಕೆ ತೆರಳುವಾಗ ಅಪಘಾತ ನಡೆದಿದೆ.
ಘಟನೆ ನಡೆದ ಸ್ಥಳಕ್ಕೆ ಎಸ್ ಪಿ ಡಾ ಸಂಜೀವ್ ಪಾಟೀಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.