• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಜನಧನ್ ಖಾತೆಗಳಿಂದ ತಲಾ 2 ರೂ.ನಂತೆ 6,000 ಕೋಟಿ ರೂ. ಅಕ್ರಮ ವರ್ಗಾವಣೆ ಶಂಕೆ: ಮಾಜಿ ಸಿಎಂ ಹೆಚ್.ಡಿ.ಕೆ

Any Mind by Any Mind
November 11, 2021
in ಕರ್ನಾಟಕ, ರಾಜಕೀಯ
0
ಜನಧನ್ ಖಾತೆಗಳಿಂದ ತಲಾ 2 ರೂ.ನಂತೆ 6,000 ಕೋಟಿ ರೂ. ಅಕ್ರಮ ವರ್ಗಾವಣೆ ಶಂಕೆ: ಮಾಜಿ ಸಿಎಂ ಹೆಚ್.ಡಿ.ಕೆ
Share on WhatsAppShare on FacebookShare on Telegram

ಜನಧನ್ ಖಾತೆಗಳಿಂದ ತಲಾ 2 ರೂಪಾಯಿ ಲೆಕ್ಕದಲ್ಲಿ ಸುಮಾರು 6,000 ಕೋಟಿ ರೂಪಾಯಿಯಷ್ಟು ಹಣವನ್ನು ಅಕ್ರಮವಾಗಿ ವರ್ಗಾವಣೆ ಮಾಡಿಕೊಂಡಿರುವ ಮಾಹಿತಿ ಇದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ADVERTISEMENT

ಜನತಾ ಪರ್ವ ಎರಡನೇ ಹಂತದ ಕಾರ್ಯಗಾರ ‘ ಜನತಾ ಸಂಗಮʼದ ನಾಲ್ಕನೇ ದಿನ ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಹೆಚ್‌ಡಿಕೆ, ಇಷ್ಟು ಹಣದ ಅಕ್ರಮ ವರ್ಗಾವಣೆ ಹಿಂದೆ ಯಾರು ಇದ್ದಾರೆ ಎನ್ನುವ ಮಾಹಿತಿ ಜನರಿಗೆ ಗೊತ್ತಾಗಬೇಕಿದೆ ಎಂದು ಆಗ್ರಹಿಸಿದ್ದಾರೆ.

ಬಹುಶಃ ಈ ಎಲ್ಲ ಮಾಹಿತಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಗೊತ್ತಾಗಿದೆ. ಅವರ ಬಳಿ ಎಲ್ಲ ಮಾಹಿತಿ ಇದ್ದು, ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿರಬಹುದು ಎಂದು ಹೇಳಿದ್ದಾರೆ.

ಬಿಟ್ ಕಾಯಿನ್ ಆರೋಪಿಗೆ ಜಾಮೀನು ಸಿಕ್ಕಿದ್ದು ಹೇಗೆ?

ಬಿಟ್ ಕಾಯಿನ್ ಹಗರಣದ ಮುಖ್ಯ ಆರೋಪಿಗೆ ಜಾಮೀನು ಕೊಡಲು ಖಾತರಿ ಕೊಟ್ಟಿದ್ದು ಯಾರು? ಆತನ ಪರ ವಾದ ಮಂಡಿಸಿದ ವಕೀಲರು ಯಾರು? ಎಂದು ಪ್ರಶ್ನಿಸಿದ್ದಾರೆ.

ಆರೋಪಿ ಜೈಲಿನಿಂದ ಹೊರಬಂದ ನಂತರ ಮಾಧ್ಯಮದವರ ಮುಂದೆ ಕಾಣಿಸಿಕೊಂಡಿದ್ದಾನೆ. ಮಾಧ್ಯದವರ ಜತೆ ಆ ವ್ಯಕ್ತಿ ಮಾತನಾಡುತ್ತಾನೆ, ನಂತರ ಆಟೋ ಹತ್ತಿ ಹೋಗುತ್ತಾನೆ. ಇದೆಲ್ಲ ನೋಡಿದರೆ ಅದರ ಹಿಂದೆ ಯಾರೋ ಇರುವುದು ಸ್ಪಷ್ಟ ಎಂದು ಹೇಳಿದ್ದಾರೆ.

ಬಿಟ್ ಕಾಯಿನ್ ಹಗರಣವನ್ನು ಮುಚ್ಚಿಹಾಕುವ ಪ್ರಯತ್ನ ನಡೆಯುತ್ತಿದೆ ಎಂಬ ಅನುಮಾನ ದಟ್ಟವಾಗಿದೆ. ಸರ್ಕಾರದ ಪರ ವಕೀಲರು ಎಷ್ಟರ ಮಟ್ಟಿಗೆ ವಾದ ಮಂಡಿಸಿದ್ದಾರೆ ಎನ್ನುವುದೂ ಮುಖ್ಯ. ಇಲ್ಲಿ ಯಾರಿಂದ  ಯಾರ ರಕ್ಷಣೆ ಆಗಿದೆ? ಕಾಂಗ್ರೆಸ್ ಸರ್ಕಾರ ಇದ್ದಾಗಲೇ ಕಠಿಣ ಕ್ರಮ ಕೈಗೊಂಡಿದ್ದರೆ ಹೀಗಾಗುತ್ತಿರಲಿಲ್ಲ ಎಂದು ಹೇಳಿದ್ದಾರೆ.

ಹಗರಣ ತನಿಖೆಗೆ ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್ ಅವರು ಪತ್ರ ಬರೆದಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು; ಸೂಕ್ತ ತನಿಖೆ ಆಗಲಿ ಅಂತ ಅವರು ಪತ್ರ ಬರೆದಿರಬಹುದು. ಹಗರಣದಲ್ಲಿ ಪೊಲೀಸ್ ಅಧಿಕಾರಿಗಳು, ರಾಜಕಾರಣಿಗಳು ಒಳಗೊಂಡಿದ್ದಾರೆ ಎನ್ನುವ ಮಾತು ಇದೆ. ಪದೇ ಪದೆ ಹೀಗಾದರೆ ಜನ ಯಾರನ್ನು ನಂಬಬೇಕು. ಒಬ್ಬರಿಂದ ಜನರು ಎಲ್ಲಾ ರಾಜಕಾರಣಿಗಳ ಕಡೆ ಕೈ ತೋರಿಸುವಂತಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಭಾರತದ ಮಾನ ಹರಾಜು ಆಗಬಾರದು ಅಂತ ಒಂದಿಷ್ಟು ಜನರ ಮಾಹಿತಿಯನ್ನು ಹೊರಬಿಟ್ಟಿಲ್ಲ ಅಂತ ಕಾಣುತ್ತೆ. ಆದಷ್ಟು ಬೇಗ ಜನತೆಗೆ ಸತ್ಯ ತಿಳಿಯಲಿ. ಪ್ರಧಾನ ಮಂತ್ರಿಯವರು ಅಮೆರಿಕಕ್ಕೆ ಭೇಟಿ ನೀಡಿದ್ದಾಗ ಈ ಬಗ್ಗೆ ಮಾಹಿತಿ ಸಿಕ್ಕಿದೆ. ಅವರಿಗೆ ಮುಜುಗರ ಅಗಿರುವ ಕಾರಣಕ್ಕೆ ಇಡೀ ಪ್ರಕರಣವನ್ನು ಅವರು ಗಂಭೀರವಾಗಿ ಪರಿಗಣಿಸಿದಂತೆ ಕಾಣುತ್ತಿದೆ ಎಂದು ಮಾಜಿ ಮುಖ್ಯಮಂತ್ರಿಗಳು ಹೇಳಿದ್ದಾರೆ.

ಗಾಜಿನ ಮನೆಯಲ್ಲಿ ಕೂತು ಕಾಂಗ್ರೆಸ್ ಕಲ್ಲು ಹೊಡೆಯುತ್ತಿದೆ!

ಬಿಟ್ ಕಾಯಿನ್ ವಿಚಾರದಲ್ಲಿ ಕಾಂಗ್ರೆಸ್ ಪಕ್ಷ ಗಾಜಿನ‌ ಮನೆಯಲ್ಲಿ ಕೂತು ಕಲ್ಲು ಹೊಡೆಯುತ್ತಿದೆ. ಆ ಕಲ್ಲು ಯಾರಿಗೆ ಬೀಳುತ್ತದೆ? ಈಗಾಗಲೇ ಕಾಂಗ್ರೆಸ್ ನಾಯಕರಿಗೆ ಸಂಬಂಧಿಸಿದ ಕೆಲ ಹೆಸರುಗಳು ಮಾಧ್ಯಮಗಳಲ್ಲಿ ಪ್ರಕಟವಾಗಿವೆ. ಆದರೆ, ಕಾಂಗ್ರೆಸ್ ನಾಯಕರು ಬಿಜೆಪಿ ನಾಯಕರ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಮಾರ್ಮಿಕವಾಗಿ ನುಡಿದಿದ್ದಾರೆ.

ರಾಜ್ಯದಲ್ಲಿ ಭ್ರಷ್ಟಾಚಾರದ ವಿರುದ್ಧ ಸಾಕ್ಷಿ ಸಮೇತ ಹೋರಾಟ ಮಾಡಿದ್ದು ಜೆಡಿಎಸ್ ಮಾತ್ರ. ನಮ್ಮ ಹೋರಾಟದ ಫಲವಾಗಿ ಯಾರೆಲ್ಲ ಜೈಲಿಗೆ ಹೋದರು ಎನ್ನುವುದು ಜನತೆಗೆ ಗೊತ್ತಿದೆ ಎಂದು ಹೇಳಿದ್ದಾರೆ.

ಸರ್ಕಾರ ಏನು ಮಾಡುತ್ತಿದೆ?

ರಾಜ್ಯದಲ್ಲಿ ನಿರಂತರವಾಗಿ ಮಳೆ ಆಗುತ್ತಿದೆ. ರೈತರು, ಸಾಮಾನ್ಯ ಜನರು ಸಂಕಷ್ಟಕ್ಕೆ ಗುರಿಯಾಗಿದ್ದಾರೆ. ಮಂತ್ರಿಗಳು, ಅಧಿಕಾರಿಗಳು ಏನು ಮಾಡುತ್ತಿದ್ದಾರೋ ಗೊತ್ತಿಲ್ಲ. ಅವರಿಗೆಲ್ಲ ಯಾರು ಕೆಲಸ ಹೇಳುತ್ತಿದ್ದರೋ ತಿಳಿಯುತ್ತಿಲ್ಲ. ರಾಜ್ಯದಲ್ಲಿ ಸರ್ಕಾರ ಇದೆಯೋ ಇಲ್ಲವೋ ಎನ್ನುವಂತ ಪರಿಸ್ಥಿತಿ ಇದೆ. ಯಾರೂ ಜನರ ಸಮಸ್ಯೆ ಆಲಿಸುತ್ತಿಲ್ಲ. ಆಡಳಿತ ಯಂತ್ರ ಕುಸಿಯುವ ಹಂತಕ್ಕೆ ಹೋಗುವುದರೊಳಗೆ ಅತ್ತ ಸರ್ಕಾರ ಗಮನ ಹರಿಸಬೇಕು ಎಂದು ಕುಮಾರಸ್ವಾಮಿ ಅವರು ಒತ್ತಾಯ ಮಾಡಿದ್ದಾರೆ.

ಬಿಬಿಎಂಪಿ ಕಾರ್ಯವೈಖರಿ ಬಗ್ಗೆ ಹೈಕೋರ್ಟ್ ವ್ಯಕ್ತ ಮಾಡಿರುವ ಅಭಿಪ್ರಾಯವನ್ನು ಎಲ್ಲರೂ ಗಮನಿಸಬೇಕು. ಮುಖ್ಯ ಆಯುಕ್ತರನ್ನು ಜೈಲಿಗೆ ಕಲಿಸುವ ಎಚ್ಚರಿಕೆಯನ್ನು ನ್ಯಾಯಾಲಯ ಸರ್ಕಾರಕ್ಕೆ ನೀಡಿದೆ. ಇದೆಲ್ಲವನ್ನು ಸರಕಾರ ಕೂಡಲೇ ಸರಿ ಮಾಡಿಕೊಳ್ಳಬೇಕು ಎಂದು ಕಿವಿಮಾತನ್ನು ಹೇಳಿದ್ದಾರೆ.

Tags: BitcoinBJPCongress PartyJDSಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿಜೆಪಿಸಿದ್ದರಾಮಯ್ಯ
Previous Post

ಪ್ರಧಾನಿ ಮೋದಿ ಅವರೊಂದಿಗೆ ಬಿಟ್ ಕಾಯಿನ್ ಪ್ರಕರಣದ ಕುರಿತು ಮಾತನಾಡಿಲ್ಲ – ಸಿಎಂ ಬೊಮ್ಮಾಯಿ

Next Post

ಬೈ ಎಲೆಕ್ಷನ್ನಲ್ಲಿ ಕಾಂಗ್ರೆಸ್ ಗೆಲುವು; ಕ್ರೆಡಿಟ್ ಪಾಲಿಟಿಕ್ಸ್ ವಿಚಾರದಲ್ಲಿ ಡಿಕೆಶಿ ತೋರಿದ್ದು ಜಾಣ ನಡೆ; ಹೇಗೆ?

Related Posts

ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ
ಕರ್ನಾಟಕ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

by ಪ್ರತಿಧ್ವನಿ
April 10, 2026
0

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ಸಾಲಿನಿಂದ ಮುದ್ರಿತ ಅಂಕಪಟ್ಟಿ ನೀಡುವ ಪದ್ಧತಿಗೆ ಸರ್ಕಾರ ತೆರೆ ಎಳೆಯಲು ನಿರ್ಧರಿಸಿದೆ. ಬದಲಿಗೆ ಡಿಜಿಟಲ್ ಅಂಕಪಟ್ಟಿಯನ್ನೇ ಅಧಿಕೃತವಾಗಿ...

Read moreDetails
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
Next Post
ಬೈ ಎಲೆಕ್ಷನ್ನಲ್ಲಿ ಕಾಂಗ್ರೆಸ್ ಗೆಲುವು; ಕ್ರೆಡಿಟ್ ಪಾಲಿಟಿಕ್ಸ್ ವಿಚಾರದಲ್ಲಿ ಡಿಕೆಶಿ ತೋರಿದ್ದು ಜಾಣ ನಡೆ; ಹೇಗೆ?

ಬೈ ಎಲೆಕ್ಷನ್ನಲ್ಲಿ ಕಾಂಗ್ರೆಸ್ ಗೆಲುವು; ಕ್ರೆಡಿಟ್ ಪಾಲಿಟಿಕ್ಸ್ ವಿಚಾರದಲ್ಲಿ ಡಿಕೆಶಿ ತೋರಿದ್ದು ಜಾಣ ನಡೆ; ಹೇಗೆ?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada