ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 659 ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, ಇಬ್ಬರು ಮೃತಪಟ್ಟಿದ್ದಾರೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೋಮವಾರ ಬಿಡುಗಡೆ ಮಾಡಿದ ಪ್ರಕಟಣೆ ಪ್ರಕಾರ ರಾಜ್ಯದಲ್ಲಿ ನಿನ್ನೆಗೆ ಹೋಲಿಸಿದರೆ ಕಡಿಮೆ ಸೋಂಕು ಪ್ರಕರಣಗಳು ವರದಿಯಾಗಿದೆ.
ರಾಜ್ಯದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 40,50.070ಕ್ಕೆ ಏರಿಕೆಯಾದರೆ, ಸಾವಿನ ಸಂಖ್ಯೆ 40,194ಕ್ಕೆ ಜಿಗಿತ ಕಂಡಿದೆ.

ಬೆಂಗಳೂರಿನಲ್ಲಿ ಇಂದು 450 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 18,63,660ಕ್ಕೆ ಜಿಗಿತ ಕಂಡಿದೆ. ಬೆಂಗಳೂರಿನಲ್ಲಿ ಕೊರೊನಾಗೆ ಒಬ್ಬರು ಮೃತಪಟ್ಟಿದ್ದಾರೆ.
ರಾಜ್ಯದಲ್ಲಿ ಇಂದು 1192 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 40,02,5510ಕ್ಕೆ ಏರಿಕೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ7324ಕ್ಕೆ ಇಳಿಕೆಯಾಗಿದೆ.






