ಕರ್ನಾಟಕದಲ್ಲಿ ಕೋವಿಡ್‌ಗೆ 69 ವೈದ್ಯರು ಬಲಿ

ರಾಜ್ಯದಲ್ಲಿ ಕೋವಿಡ್ ಎರಡನೇ ಅಲೆಗೆ  8 ವೈದ್ಯರು ಸಾವನ್ನಪ್ಪಿದ್ದಾರೆ. ದೇಶಾದ್ಯಂತ ಒಟ್ಟು 329 ವೈದ್ಯರು ಸಾವನ್ನಪ್ಪಿದ್ದಾರೆಂದು ಭಾರತೀಯ ವೈದ್ಯಕೀಯ ಸಂಸ್ಥೆ(ಐಎಂಎ) ತಿಳಿಸಿದೆ. 

ಕರ್ನಾಟಕದಲ್ಲಿ 61 ವೈದ್ಯರು ಕೋವಿಡ್‌ ಮೊದಲ ಅಲೆಯಲ್ಲಿ  ಪ್ರಾಣ ಕಳೆದುಕೊಂಡರು.  ಎರಡನೇ ಅಲೆಯಲ್ಲಿ ಸಮಯಕ್ಕೆ ಸರಿಯಾಗಿ ಬೆಡ್ ಮತ್ತು‌ ಸೂಕ್ತ ಚಿಕಿತ್ಸೆಯನ್ನು ಪಡೆಯಲು ಸಾಧ್ಯವಾಗದ ಕಾರಣ ಸಾವನ್ನಪ್ಪಿದ್ದು, ಅವರೆಲ್ಲಾ ಕರೋನಾ ವಾರಿಯರ್ಸ್ ಐಎಂಎ ಹೇಳಿದೆ.

ದಕ್ಷಿಣ ಕನ್ನಡದ ಒಬ್ಬ  ಸ್ನಾತಕೋತ್ತರ ವೈದ್ಯ ವಿದ್ಯಾರ್ಥಿ  ಎರಡನೇ ಅಲೆಗೆ ಬಲಿಯಾದರೆ, ಹುಬ್ಬಳ್ಳಿಯ ಇಬ್ಬರು ವೈದ್ಯರು ಸಹ ಸಾವನ್ನಪ್ಪಿದ್ದಾರೆ. ಚನ್ನಪಟ್ಟಣ, ಚಾಮರಾಜನಗರ, ವಿಜಯಪುರ, ಕಲಬುರಗಿ ಮತ್ತು ಮೈಸೂರಲ್ಲಿ ತಲಾ ಒಬ್ಬ ವೈದ್ಯರೂ ಸಾವನ್ನಪ್ಪಿದ್ದಾರೆಂದು ಐಎಂಎ ತಿಳಿಸಿದೆ.

ಆರೋಗ್ಯ ಕಾರ್ಯಕರ್ತರಿಗೆ ಹಾಸಿಗೆಗಳನ್ನು ಕಾಯ್ದಿರಿಸುವಂತೆ ಕೋರಿ ಐಎಂಎ ರಾಜ್ಯ ಶಾಖೆ ಸರ್ಕಾರಕ್ಕೆ ಪತ್ರ ಬರೆದ ನಂತರ, ಪ್ರತಿ ಜಿಲ್ಲೆಯಲ್ಲಿ 10% ಹಾಸಿಗೆಗಳನ್ನು ಅವರಿಗೆ ಮೀಸಲಿಡಲಾಗಿದೆ ಎಂದು  ಐಎಂಎ ಬೆಂಗಳೂರು ಅಧ್ಯಕ್ಷ ಡಾ.ಶ್ರೀನಿವಾಸ್ ಹೇಳಿದ್ದಾರೆ.

ಮೂಲ: ದಿ ನ್ಯೂ ಇಂಡಿಯನ್‌ ಎಕ್ಸ್‌ಪ್ರೆಸ್

Related posts

Latest posts

ಕುಂಭ ಮೇಳ ಸಂದರ್ಭದಲ್ಲಿ ಮಾಡಿದ 1 ಲಕ್ಷ ಕೋವಿಡ್-19 ಪರೀಕ್ಷೆಗಳು ನಕಲಿ: ತನಿಖಾ ವರದಿ

ಹರಿದ್ವಾರದ ಕುಂಭ ಮೇಳ ಸಂದರ್ಭದಲ್ಲಿ ಮಾಡಲಾಗಿದ ನಾಲ್ಕು ಲಕ್ಷ ಕೋವಿಡ್ ಟೆಸ್ಟ್ ಫಲಿತಾಂಶಗಳಲ್ಲಿ ಹಲವು ನಕಲಿ ಎಂದು ಉತ್ತರಾಖಂಡ ಆರೋಗ್ಯ ಇಲಾಖೆ ನಡೆಸಿದ ಪ್ರಾಥಮಿಕ ತನಿಖೆಯಲ್ಲಿ ಬಯಲಾಗಿದೆ. ವಿವರವಾದ ತನಿಖೆಯ 1,600 ಪುಟಗಳಲ್ಲಿ...

ನನ್ನ ಹೇಳಿಕೆಯಿಂದ ನಾನು ಹಿಂದೆ ಸರಿಯಲ್ಲ : ನಟ ಚೇತನ್ ಸ್ಪಷ್ಟನೆ

ಬ್ರಾಹ್ಮಣ್ಯ ವಿರೋಧಿ ಹೇಳಿಕೆ ಎಂಬ ಆರೋಪದ ಅಡಿ ಇಂದು ಬಸವನಗುಡಿ ಪೊಲೀಸರ ಮುಂದೆ ಹಾಜರಾದ ನಟ ಚೇತನ್ ತನ್ನ ಹೇಳಿಕೆಯ ಬಗ್ಗೆ ಪೊಲೀಸರ ಮುಂದೆ ಸ್ಪಷ್ಟನೆ ದಾಖಲಿಸಿದ್ದಾರೆ. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ...

ಚಿಕ್ಕಬಳ್ಳಾಪುರ: ಅರ್ಹ ಫಲಾನುಭವಿಗಳನ್ನು ಗುರುತಿಸುವಲ್ಲಿ ವಿಫಲ: ರೈತರಿಗೆ ಸಿಗುತ್ತಿಲ್ಲ ಪರಿಹಾರ ಧನ

ಕೊರೋನಾ ಲಾಕ್ಡೌನ್ ಸಮಯದಲ್ಲಿ ಸಂಕಷ್ಟಕ್ಕೊಳಗಾದ ರೈತರಿಗೆ ಸರ್ಕಾರ ಪರಿಹಾರದ ಅಭಯ ಕೊಟ್ಟಿತು. ಆದರೆ ಅರ್ಹ ಫಲಾನುಭವಿಗಳನ್ನ ಗುರುತಿಸುವಲ್ಲಿ ವಿಫಲವಾದ ಪರಿಣಾಮ ನಿಜವಾದ ರೈತರಿಗೆ ಪರಿಹಾರ ಸಿಗದಂತಾಗಿದೆ. ಈ ಕುರಿತು ಚಿಕ್ಕಬಳ್ಳಾಪುರದಲ್ಲಿ ರೈತರು ತಮ್ಮ...