ನೈಋತ್ಯ ಮುಂಗಾರು ಪ್ರಬಲವಾಗಿರುವುದರಿಂದ ರಾಜ್ಯದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಭಾರೀ ಮಳೆಯಾಗಲಿದ್ದು, 7 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ರಾಜ್ಯ ಹವಾಮಾನ ಇಲಾಖೆ ಶನಿವಾರ ಮುನ್ಸೂಚನೆ ನೀಡಿದ್ದು, ರಾಜ್ಯದ ಕರಾವಳಿ ಹಾಗೂ ಮಲೆನಾಡು ಪ್ರದೇಶಗಳಲ್ಲಿ ಭಾರೀ ಮಳೆಯಾಗಲಿದ್ದು, ಉತ್ತರ ಕರ್ನಾಟಕದಲ್ಲಿ ಕೂಡ ಮಳೆಯಾಗಲಿದೆ ಎಂದು ಹೇಳಿದೆ.
ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ ಕೊಡಗು ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇದೇ ರೀತಿ ಉತ್ತರ ಕರ್ನಾಟಕದ ಕಲಬುರಗಿ, ಯಾದಗಿರಿ, ವಿಜಯಪುರ, ಬಾಗಲಕೋಟೆ, ಕೊಪ್ಪಳ, ಬೆಳಗಾವಿ, ಹುಕ್ಕೇರಿ ಹಾಗೂ ಧಾರವಾಡ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.