ಮಹಾರಾಷ್ಟ್ರದ ಮುಂಬೈನ ತಾಡ್‌ದೇವ್ ಪ್ರದೇಶದ ಭಾಟಿಯಾ ಆಸ್ಪತ್ರೆ ಸಮೀಪವಿರುವ 20 ಮಹಡಿಯ ಬಹುಅಂತಸ್ತಿನ ಕಟ್ಟಡದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು ಘಟನೆಯಲ್ಲಿ 7 ಮಂದಿ ಮೃತಪಟ್ಟಿದ್ದಾರೆ.
ಗಾಯಾಳುಗಳನ್ನು ತಕ್ಷಣವೇ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದ್ದು ಅಗ್ನಿ ಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ನಿರತವಾಗಿವೆ ಎಂದು ಮುನ್ಸಿಪಾಲ್ ಕೌನ್ಸಿಲ್ ಅಧಿಕಾರಿಗಳು(ಬಿಎಂಸಿ) ತಿಳಿಸಿದ್ದಾರೆ.