ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಸಂಬಂಧ ಏಳು ಮಂದಿ ಶಂಕಿತರನ್ನು ಸುಳ್ಯ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
ಅಕ್ಷಯ ಚಿಕನ್ ಸೆಂಟರ್ ನಲ್ಲಿ ಕೆಲಸ ಮಾಡುತ್ತಿರುವ ಮಧು ರಾಯನ್ ನೀಡಿದ ದೂರಿನಂತೆ ಕೃತ್ಯವೆಸಗಿದ ಮೂವರು ಅಪರಿಚಿತರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಪ್ರವೀಣ್ ಹತ್ಯೆ ಮಾಡಿದ ಮೂವರು ಕೇರಳ ಮೂಲದವರು ಎಂದು ಪೊಲೀಸರು ಶಂಕಿಸಿದ್ದಾರೆ.
ಮಂಗಳವಾರ ರಾತ್ರಿ ಪ್ರವೀಣ್ ಕೋಳಿ ಅಂಗಡಿ ಬಳಿ ಮೂವರು ಅಪರಿಚಿತರು ಬೈಕ್ ನಲ್ಲಿ ಬಂದು ಪ್ರವೀಣ್ ಮೇಲೆ ಮಾರಾಕಾಸ್ತ್ರಗಳಿಂದ ಹಲ್ಲೆ ಮಾಡಿ ಪರಾರಿಯಾಗಿದ್ದರು. ಗಂಭೀರ ಗಾಯೊಗೊಂಡಿದ್ದ ಪ್ರವೀಣ್ ಅವರನ್ನು ಆಸ್ಪತ್ರೆಗೆ ರವಾನಿಸದರೂ ಅವರು ಮೃತಪಟ್ಟಿದ್ದಾರೆ.