ಎಸ್ಸಿ/ಎಸ್ಟಿ ಬಿಪಿಲ್ ಕುಟುಂಬಗಳಿಗೆ ಉಚಿತ ವಿದ್ಯುತ್ ಪೂರೈಸುವ ಬಗ್ಗೆ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇತ್ತೀಚೆಗಷ್ಟೇ ಎಸ್ಸಿ/ಎಸ್ಟಿ ಸಮುದಾಯದ ಬಿಪಿಎಲ್ ಕಾರ್ಡ್ ಹೊಂದಿರುವ ಕುಟುಂಬಗಳಿಗೆ 75 ಯೂನಿಟ್ ವರೆಗೆ ಉಚಿತ ವಿದ್ಯುತ್ ನೀಡುವುದಾಗಿ ಘೋಷಿಸಿದ್ದರು.
ಬಸವರಾಜ ಬೊಮ್ಮಾಯಿ ದಾವೋಸ್ ಪ್ರವಾಸದಿಂದ ಮರಳುತ್ತಿದ್ದಂತೆ ದಲಿತ ಬಡ ಕುಟುಂಬಗಳಿಗೆ 75 ಯೂನಿಟ್ ವಿದ್ಯುತ್ ಉಚಿತವಾಗಿ ನೀಡುವ ಯೋಜನೆಗೆ ಅನುಮೋದನೆ ನೀಡಿದ್ದು, ಶುಕ್ರವಾರ ಆದೇಶ ಹೊರಬಿದ್ದಿದೆ.
ಮೇ 1ರಿಂದ ಪೂರ್ವಾನ್ವಯ ಆಗುವಂತೆ ಈ ಆದೇಶ ಜಾರಿಗೆ ಬಂದಿದ್ದು, ನಗರ ಪ್ರದೇಶಕ್ಕೂ ಈ ಯೋಜನೆ ವಿಸ್ತರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಲಾಗಿದೆ.
ಬಾಬು ಜಗಜೀವನ್ 115ನೇ ಜಯಂತಿ ಅಂಗವಾಗಿ ಈ ಹಿಂದೆ ಭಾಗ್ಯಜ್ಯೋತಿ ಮತ್ತು ಕುಟಿರಜ್ಯೋತಿ ಯೋಜನೆಯಡಿ ಈ ಹಿಂದೆ ನೀಡಲಾಗುತ್ತಿದ್ದ 40 ಯೂನಿಟ್ ಉಚಿತ ವಿದ್ಯುತ್ ಯೋಜನೆಯನ್ನು 75 ಯೂನಿಟ್ ಗೆ ಹೆಚ್ಚಿಸಲಾಗಿದೆ. ಮತ್ತು ಗ್ರಾಮೀಣ ಪ್ರದೇಶಗಳಿಗೆ ಸೀಮಿತವಾಗಿದ್ದ ಈ ಯೋಜನೆಯನ್ನು ನಗರ ಪ್ರದೇಶಕ್ಕೂ ವಿಸ್ತರಿಸಲಾಗಿದೆ.