• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

78 ವರ್ಷದ ಸಿದ್ದರಾಮಯ್ಯ ಅವರು 28 ವರ್ಷದ ಯುವಕನ ರೀತಿಯಲ್ಲಿ ದಿನಕ್ಕೆ 12-14 ಗಂಟೆ ಕೆಲಸ ಮಾಡುತ್ತಿದ್ದಾರೆ:ಸಚಿವ ಸಂತೋಷ್ ಲಾಡ್

ಪ್ರತಿಧ್ವನಿ by ಪ್ರತಿಧ್ವನಿ
November 9, 2024
in Top Story, ಇತರೆ / Others, ಕರ್ನಾಟಕ, ರಾಜಕೀಯ
0
Share on WhatsAppShare on FacebookShare on Telegram

ಸಂಡೂರು: ಬಿಜೆಪಿ ಮುಖ್ಯಮಂತ್ರಿಯಾಗಿದ್ದ ಯಡಿಯೂರಪ್ಪ ಮತ್ತು ಆರೋಗ್ಯ ಮಂತ್ರಿ ಶ್ರೀರಾಮುಲು ಇಬ್ಬರೂ ಕೋವಿಡ್ ಸಂದರ್ಭದಲ್ಲಿ ಚೀನಾದಿಂದ ಪಿಪಿಇ ಕಿಟ್ ತರಿಸಿ ಭ್ರಷ್ಟಾಚಾರ ನಡೆಸಿದ್ದಾರೆ. ಇವರ ವಿರುದ್ಧ ಭ್ರಷ್ಟಾಚಾರ ನಿಗ್ರಹ ಕಾಯ್ದೆ ಅಡಿಯಲ್ಲಿ ಕ್ರಮ ಕೈಗೊಳ್ಳುವ ಅಗತ್ಯವಿದೆ ಎಂದು ನ್ಯಾ.ಮೈಕೆಲ್ ಕುನ್ಹಾ ಅವರ ತನಿಖಾ ಆಯೋಗ ಪತ್ತೆ ಹಚ್ಚಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.

ADVERTISEMENT

ಸಂಡೂರು ವಿಧಾನಸಭಾ ಕ್ಷೇತ್ರದ ಮೆಟ್ರಿಕಿ ಗ್ರಾಮದಲ್ಲಿ ಬೃಹತ್ ಜನಸಮಾವೇಶವದಲ್ಲಿ ಮಾತನಾಡಿದರು.

ಕೋವಿಡ್ ಸಂದರ್ಭದಲ್ಲಿ ಇಡೀ ರಾಜ್ಯದ ಜನತೆ ಭಯ, ಆತಂಕದಲ್ಲಿ ದೇವರ ಪ್ರಾರ್ಥನೆ ಮಾಡುತ್ತಿದ್ದಾಗ ಬಿಜೆಪಿ ಸರ್ಕಾರ ಮತ್ತು ಸಚಿವ ಶ್ರೀರಾಮುಲು ಅವರು ಹಣ ಲೂಟಿ ಮಾಡುವುದರಲ್ಲಿ ಮುಳುಗಿದ್ದರು. ನಮ್ಮ ಜನರ ಮೃತದೇಹಗಳ ಹೆಸರಲ್ಲೂ ಭ್ರಷ್ಟಚಾರ ನಡೆಸಿದ ಬಿಜೆಪಿ ಯವರನ್ನು ಯಾವ ದೇವರೂ ಕ್ಷಮಿಸಲ್ಲ. ನೀವೂ ಕ್ಷಮಿಸಬೇಡಿ ಎಂದು ಜನರಿಗೆ ಕರೆ ನೀಡಿದರು.

ಬಿಜೆಪಿ ಶ್ರೀಮಂತರ ಮತ್ತು ಮೇಲ್ವರ್ಗದವರ ಪಕ್ಷ. ಕಾಂಗ್ರೆಸ್ ಜಾರಿ ಮಾಡುವ ಎಲ್ಲಾ ಬಡವರ ಪರವಾದ ಕಾರ್ಯಕ್ರಮಗಳನ್ನು ವಿರೋಧಿಸುತ್ತದೆ. ಅಪಪ್ರಚಾರ ಮಾಡುತ್ತದೆ ಎಂದರು.ಆಗ ಇಂದಿರಾಗಾಂಧಿಯವರ 20 ಅಂಶಗಳ ಕಾರ್ಯಕ್ರಮಗಳನ್ನು ಬಿಜೆಪಿ ವಿರೋಧಿಸಿ ಅಪಪ್ರಚಾರ ಮಾಡಿತ್ತು.ಈಗ ನಮ್ಮ‌ ಸರ್ಕಾರದ ಐದು ಗ್ಯಾರಂಟಿಗಳನ್ನು ವಿರೋಧಿಸಿ ಅಪಪ್ರಚಾರ ಮಾಡುತ್ತಿದೆ.ಇದೇ ಬಿಜೆಪಿಯ ಜಾಯಮಾನ ಎಂದು ಟೀಕಿಸಿದರು.

ಬಿಜೆಪಿ ರೈತರು, ಕಾರ್ಮಿಕರು, ಮಹಿಳೆಯರು, ಯುವಕರು, ವಿದ್ಯಾರ್ಥಿಗಳು, ದಲಿತರು, ಹಿಂದುಳಿದವರ ಪರವಾಗಿ ಒಂದೇ ಒಂದು ಕಾರ್ಯಕ್ರಮ ಕೊಟ್ಟಿದ್ದರೆ ನೆನಪಿಸಿಕೊಂಡು ಹೇಳಿ ನೋಡೋಣ. ಯಾವ ಕಾರ್ಯಕ್ರಮವನ್ನೂ ಕೊಟ್ಟಿಲ್ಲ. ಅದಕ್ಕೇ ನಿಮಗೆ ನೆನಪಾಗ್ತಿಲ್ಲ.

ಸಂಡೂರಿನಲ್ಲಿರುವ ರಸ್ತೆ, ಶಾಲೆ, ವಸತಿ ಶಾಲೆ, ಅಂಗನವಾಡಿ, ಆಸ್ಪತ್ರೆ, ನೀರು, ನೀರಾವರಿ ಎಲ್ಲವೂ ಆಗಿರುವುದು ಸಂತೋಷ್ ಲಾಡ್ ಮತ್ತು ತುಕಾರಾಮ್ ಅವರ ಅವಧಿಯಲ್ಲಿ. ಬಿಜೆಪಿಯವರು ಕೇವಲ ಸುಳ್ಳು ಹೇಳಿಕೊಂಡು, ಜನರ ನಡುವೆ ದ್ವೇಷ ಬಿತ್ತುತ್ತಾ ರಾಜಕಾರಣ ಮಾಡುತ್ತಿದ್ದಾರೆ ಎಂದರು.

ಬಿಜೆಪಿ ಮುಖ್ಯಮಂತ್ರಿಗಳಾದ ಯಡಿಯೂರಪ್ಪ ಮತ್ತು ಆರೋಗ್ಯ ಮಂತ್ರಿ ಶ್ರೀರಾಮುಲು ಚೀನಾದಿಂದ ಪಿಪಿಇ ಕಿಟ್ ತರಿಸಿ ಭ್ರಷ್ಟಾಚಾರ ನಡೆಸಿದ್ದಾರೆ. ಇವರ ವಿರುದ್ಧ ಭ್ರಷ್ಟಾಚಾರ ನಿಗ್ರಹ ಕಾಯ್ದೆ ಅಡಿಯಲ್ಲಿ ಕ್ರಮ ಕೈಗೊಳ್ಳಿ ಎಂದು ನ್ಯಾ.ಕುನ್ಹಾ ಅವರ ತನಿಖಾ ಆಯೋಗ ಪತ್ತೆ ಹಚ್ಚಿದೆ. ಹಿಂದೆ ಜನಾರ್ದನರೆಡ್ಡಿಯವರ ಟೀಮು ನಡೆಸಿದ್ದ ಭ್ರಷ್ಟಾಚಾರವನ್ನು ಲೋಕಾಯುಕ್ತ ಸಂತೋಷ್ ಹೆಗ್ಡೆಯವರು ಬಯಲಿಗೆ ಎಳೆದಿದ್ದರು. ಇವರು ಅಧಿಕಾರಕ್ಕೆ ಬರೋದೇ ಲೂಟಿ ಮಾಡೋದಕ್ಕೆ ಎಂದರು.

ಆದ್ದರಿಂದ ಸಂಡೂರಿನಲ್ಲಿ ಅನ್ನಪೂರ್ಣ ತುಕಾರಾಮ್ ಅವರನ್ನು ಗೆಲ್ಲಿಸಿ ಅಭಿವೃದ್ಧಿಗೆ ನಿಮ್ಮ ಬೆಂಬಲ ನೀಡಿ ಎಂದರು.

Tags: 78-year-old SiddaramaiahAnnapurna TukaramCM Siddaramaiah‌Congress Partyminister santosh ladSandursandur by electionSriramuluworking 12-14 hours a day
Previous Post

ಜನಾರ್ದನರೆಡ್ಡಿ ಜುಜುಬಿ, ನಾಚಿಕೆ ಮಾನ ಮರ್ಯಾದೆ ಇಲ್ಲ:ನಿಮ್ಮ ಅಟ್ಟಹಾಸ ಮುರಿದದ್ದು ನಾನೇ ಎಂದು ರೆಡ್ಡಿಗೆ ಗುದ್ದು ಕೊಟ್ಟ ಸಿದ್ದು..!

Next Post

ವನಸಿರಿ ನಾಡು ಹ್ಯಾಂಡ್ ಪೋಸ್ಟನಲ್ಲಿ ಕನ್ನಡ ರಾಜ್ಯೋತ್ಸವ ಸಂಭ್ರಮ.

Related Posts

ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!
Top Story

ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

by ಪ್ರತಿಧ್ವನಿ
March 4, 2026
0

ಬೆಂಗಳೂರು : ರೈತರು ತಮ್ಮ ಗಂಗಾ ಕಲ್ಯಾಣ ಯೋಜನೆ ಕುರಿತ ಅರ್ಜಿಯ ಸ್ಥಿತಿಯನ್ನು ಆನ್‌ಲೈನ್‌ನಲ್ಲಿ ಟ್ರ್ಯಾಕ್ ಮಾಡಲು ಗಂಗಾ ಕಲ್ಯಾಣ ಪೋರ್ಟಲ್‌ನಲ್ಲಿ ಬೆಸ್ಕಾಂ ವತಿಯಿಂದ ಹೊಸ ಆಯ್ಕೆ...

Read moreDetails
ಹಣದ ಬದಲಿಗೆ ಪತ್ರಿಕೋದ್ಯಕ್ಕೆ ಸತ್ಯದ ಬಡತನ ಕಾಡುತ್ತಿದೆ : ಕೆ.ವಿ. ಪ್ರಭಾಕರ್‌ ಬೇಸರ..!

ಹಣದ ಬದಲಿಗೆ ಪತ್ರಿಕೋದ್ಯಕ್ಕೆ ಸತ್ಯದ ಬಡತನ ಕಾಡುತ್ತಿದೆ : ಕೆ.ವಿ. ಪ್ರಭಾಕರ್‌ ಬೇಸರ..!

March 4, 2026
ಇಸ್ರೇಲ್-ಇರಾನ್ ಯುದ್ಧ: ವಿನಾಶದ ಹಾದಿ ; ಗಗನಕ್ಕೆ ಡೀಸೆಲ್ ಬೆಲೆ, ಕಾಡುತ್ತೆ ಅಡುಗೆ ಅನಿಲದ ಅಭಾವ..!

ಇಸ್ರೇಲ್-ಇರಾನ್ ಯುದ್ಧ: ವಿನಾಶದ ಹಾದಿ ; ಗಗನಕ್ಕೆ ಡೀಸೆಲ್ ಬೆಲೆ, ಕಾಡುತ್ತೆ ಅಡುಗೆ ಅನಿಲದ ಅಭಾವ..!

March 4, 2026
ಸಾಮ್ರಾಜ್ಯಶಾಹಿ ಕ್ರೌರ್ಯವೂ ಯುದ್ಧಕೋರ ಮನಸ್ಥಿತಿಯೂ..

ಸಾಮ್ರಾಜ್ಯಶಾಹಿ ಕ್ರೌರ್ಯವೂ ಯುದ್ಧಕೋರ ಮನಸ್ಥಿತಿಯೂ..

March 4, 2026
ಕೇಂದ್ರದ ಅಸಮಾನತೆ ನೀತಿ ನಮ್ಮ ಸಂವಿಧಾನ ರಚನಕಾರರ ಹೊಂದಾಣಿಕೆ ನೀತಿಗೆ ಅಡ್ಡಿ : ಸ್ಟಾಲಿನ್‌ಗೆ ಸಿದ್ದರಾಮಯ್ಯ ಪತ್ರ..

ಕೇಂದ್ರದ ಅಸಮಾನತೆ ನೀತಿ ನಮ್ಮ ಸಂವಿಧಾನ ರಚನಕಾರರ ಹೊಂದಾಣಿಕೆ ನೀತಿಗೆ ಅಡ್ಡಿ : ಸ್ಟಾಲಿನ್‌ಗೆ ಸಿದ್ದರಾಮಯ್ಯ ಪತ್ರ..

March 4, 2026
Next Post

ವನಸಿರಿ ನಾಡು ಹ್ಯಾಂಡ್ ಪೋಸ್ಟನಲ್ಲಿ ಕನ್ನಡ ರಾಜ್ಯೋತ್ಸವ ಸಂಭ್ರಮ.

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada