79 ನೇ ಸ್ವಾತಂತ್ರ್ಯ ದಿನಾಚರಣೆಯ (independence day) ಹಿನ್ನಲೆಯಲ್ಲಿ ಬೆಂಗಳೂರಿನ ಮಾಣಿಕ್ ಷಾ ಪರೇಡ್ (Manik shah ground) ಮೈದಾನದಲ್ಲಿ ಸಿಎಂ ಸಿದ್ದರಾಮಯ್ಯ (Cm Siddaramaiah) ಧ್ವಜಾರೋಹಣ ನೆರವೇರಿಸಿದ್ದಾರೆ. ಇದಾದ ಬಳಿಕ ತೆರೆದ ಜೀಪಿನಲ್ಲಿ ಪರೇಡ್ ಪರಿವೀಕ್ಷಣೆ ಮಾಡಿ, ಗೌರವ ರಕ್ಷೆಯನ್ನು ಸಿಎಂ ಸಿದ್ದರಾಮಯ್ಯ ಸ್ವೀಕರಿಸಿದ್ದಾರೆ.

ಗೌರವ ರಕ್ಷೆ ಸ್ವೀಕರಿಸಿದ ಬಳಿಕ ನಾಡಿನ ಜನತೆಗೆ 79ನೇ ಸ್ವಾತಂತ್ರೋತ್ಸವ ಶುಭ ಕೋರಿದ್ದಾರೆ. ಇದೇ ವೇಳೆ ರಾಜ್ಯದ ಜನರಿಗೆ ಸ್ವಾತಂತ್ರೋತ್ಸವದ ಸಂದೇಶವನ್ನು ಸಿಎಂ ಸಿದ್ದರಾಮಯ್ಯ ನೀಡಿದ್ದಾರೆ. ಆ ಬಳಿಕ ಭಾಷಣ ಮಾಡಿದ ಅವರು, ಬ್ರಿಟಿಷ್ ಸಾಮ್ರಾಜ್ಯ ಕಿತ್ತೆಸೆದು ತ್ರಿವರ್ಣ ಧ್ವಜವನ್ನು ಸಂಭ್ರಮದಿಂದ ಹಾರಿಸಲಾಯಿತು. ದೇಶದ ಸ್ವಾತಂತ್ರ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ಹಲವರು ಬ್ರಿಟಿಷರನ್ನ ಅಡಗಿಸಿದ್ದರು ಎಂದು ಸ್ವಾತಂತ್ರ್ಯ ಹೋರಾಟಗಾರರ ಪರಂಪರೆಯನ್ನು ನೆನೆಪಿಸಿಕೊಂಡಿದ್ದಾರೆ.

ನಮ್ಮ ಕರ್ನಾಟಕದಲ್ಲಿ ರಾಣಿ ಚೆನ್ನಮ್ಮ, ಸಂಗೊಳ್ಳಿ ರಾಯಣ್ಣ ಸೇರಿದಂತೆ ಹಲವರು ಬ್ರಿಟಿಷರನ್ನ ಅಡಗಿಸಿದ್ದರು. ಇಂದು ಆ ವೀರೋಯೋಧರನ್ನು ಸ್ಮರಿಸುವ ದಿನವಾಗಿದೆ. ನುಡಿದಂತೆ ನಡೆಯಬೇಕು ಎಂಬುದು 12ನೇ ಶತಮಾನದ ಬಸವಣ್ಣರ ನಿಲುವು.ಅದರಂತೆ ನಮ್ಮ ರಾಜ್ಯವು ಕೂಡ ಅಭಿವೃದ್ಧಿ ಮಾದರಿ ಎಂಬ ಹೆಸರಿನಲ್ಲಿ ಮನ್ನಣೆ ದೊರೆತಿದೆ ಎಂದು ಹೇಳಿದ್ದಾರೆ.

ಇನ್ನು ವಿಶ್ವಸಂಸ್ಥೆಯ ಮುಖ್ಯಸ್ಥ ವಿಲೇಮಾನ್ ಯಂಗ್ ಗ್ಯಾರಂಟಿ ಯೋಜನೆಗಳನ್ನು ಶ್ಲಾಘಿಸಿದ್ದಾರೆ. ಕರ್ನಾಟಕಕ್ಕೆ ಬಂದು ಗ್ಯಾರಂಟಿ ಯೋಜನೆಗಳನ್ನು ಮುಕ್ತ ಕಂಠದಿಂದ ಶ್ಲಾಗಿಸಿದ್ದಾರೆ, ಎಲ್ಲರಿಗೂ ಮೂಲಭೂತ ಸೌಕರ್ಯಗಳು ಸಿಗಬೇಕು, ಈ ನಿಟ್ಟಿನಲ್ಲಿ ನಾವು ಜನಕಲ್ಯಾಣ, ಗ್ಯಾರಂಟಿ ಯೋಜನೆಗಳನ್ನ ಜಾರಿಗೆ ತಂದಿದ್ದೇವೆ ಎಂದಿದ್ದಾರೆ.
ಗ್ಯಾರಂಟಿ ಯೋಜನೆಗಳು ರಾಜ್ಯದ ಅಭಿವೃದ್ಧಿಯ ದಿಕ್ಕನ್ನೇ ಬದಲಾಯಿಸುತ್ತಿದೆ. 500 ಕೋಟಿ ಟ್ರಿಪ್ ಗಳಲ್ಲಿ ಮಹಿಳೆಯರು ಉಚಿತವಾಗಿ ಸರ್ಕಾರಿ ಬಸ್ ಗಳಲ್ಲಿ ಪ್ರಯಾಣ ಮಾಡಿದ್ದಾರೆ. ಹೀಗೆ ನೇರವಾಗಿ ಜನರಿಗೆ ತಲುಪಿಸುವ ಯೋಜನೆಗಳು ರಾಜ್ಯದ ಜನರ ತಲಾದಾಯವನ್ನು ಹೆಚ್ಚಿಸುತ್ತಿದೆ ಎಂದು ಸಿಎಂ ಹೇಳಿದ್ದಾರೆ.


