ಚಿಕ್ಕಮಗಳೂರು: ವಿದ್ಯುತ್ ತಗುಲಿ ಬಾಲಕ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಕಡೂರು ತಾಲೂಕಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನಡೆದಿತ್ತು. ಸದ್ಯ ಘಟನೆಗೆ ಸಂಬಂಧಿಸಿದಂತೆ 8 ಜನರನ್ನು ಸಸ್ಪೆಂಡ್ ಮಾಡಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕಾರಿ, ಸಿಬ್ಬಂದಿ ಸೇರಿದಂತೆ 8 ಜನರನ್ನು ಅಮಾನತು ಮಾಡಲಾಗಿದೆ. ಪ್ರಭಾರ ಪ್ರಾಂಶುಪಾಲ, ನಿಲಯ ಪಾಲಕ ಸೇರಿ 8 ಜನ ಅಮಾನತು ಆಗಿದ್ದಾರೆ.
ಶನಿವಾರ ಶಾಲಾ ಆವರಣದಲ್ಲಿ ಇದ್ದ ನೇರಳೆ ಮರದಿಂದ ನೇರಳೆಹಣ್ಣು ಕೀಳಲು ಆಕಾಶ್ ಹಾಗೂ ಸ್ನೇಹಿತರು ಹೋಗಿದ್ದರು. ಈ ಸಂದರ್ಭದಲ್ಲಿ ವಿದ್ಯುತ್ ತಗುಲಿ ಬಾಲಕ ಆಕಾಶ್ ಸಾವನ್ನಪ್ಪಿದ್ದಾನೆ. ಬಾಲಕ ಮರದಿಂದ ಬೀಳುವಾಗ ವಿದ್ಯುತ್ ತಂತಿ ಹಿಡಿದು ಶಾಕ್ ಹೊಡೆದಿತ್ತು. ಸಿಬ್ಬಂದಿ ಬೇಜವಾಬ್ದಾರಿಯಿಂದ ಈ ಸಾವು ಸಂಭವಿಸಿದೆ ಎನ್ನಲಾಗಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಈ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.