ಕಾರೊಂದು ರಸ್ತೆಯಿಂದ ಸ್ಕಿಡ್ ಆಗಿ ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಎಂಟು ಮಂದಿ ಮೃತಪಟ್ಟಿರುವ ಘಟನೆ ಜಮ್ಮು-ಕಾಶ್ಮೀರದ ಕಿಶ್ತವಾರ್ ಜಿಲ್ಲೆಯಲ್ಲಿ ನಡೆದಿದೆ.
ಮಂಗಳವಾರ ಸಂಭವಿಸಿದ ಅಪಘಾತದಲ್ಲಿ ಬಾಲಕಿ ಸೇರಿದಂತೆ ಎಂಟು ಮಂದಿ ದಾರುಣ ಅಂತ್ಯ ಕಂಡಿದ್ದಾರೆ. ಕಾರಿನಲ್ಲಿ ಸಂಚರಿಸುತ್ತಿದ್ದ ಮೂವರಿಗೆ ಗಂಭೀರ ಗಾಯಗಳಾಗಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
Saddened by the accident in Kishtwar. My thoughts are with the bereaved families. May the injured recover at earliest. Rs. 2 lakh from PMNRF would be given to the next of kin of each deceased. The injured would be given Rs. 50,000: PM @narendramodi
— PMO India (@PMOIndia) August 31, 2022
ಘಟನೆ ಸಂಬಂಧ ಟ್ವೀಟ್ ಮಾಡಿ ಸಂತಾಪ ಸೂಚಿಸಿರುವ ಪ್ರಧಾನಿ ಮೋದಿ ಮೃತರಿಗೆ ತಲಾ ಎರಡು ಲಕ್ಷ ರೂಪಾಯಿ, ಗಾಯಾಳುಗಳಿಗೆ 50 ಸಾವಿರ ರೂಪಾಯಿಗಳ ಪರಿಹಾರವನ್ನ ಘೋಷಿಸಿದ್ದಾರೆ.
ಕಾರು ಚಿಂಗಮ್ನಿಂದ ಚತ್ರೂಗೆ ಚಲಿಸುತ್ತಿದ್ದ ವೇಳೆ ಬುಂದಾ ಗ್ರಾಮದ ಬಳಿ ಸ್ಕಿಡ್ ಆಗಿ ಸುಮಾರು 300 ಅಡಿ ಆಳದ ಕಂದಕಕ್ಕೆ ಉರುಳಿದೆ.
#UPDATE | J&K: Total of 8 people have died till now while 3 are injured in a road accident in Kishtwar: Devansh Yadav, DC, Kishtwar
— ANI (@ANI) August 30, 2022