ದೇಶದ ಜನರು ಬಿಸಿಲಿನ ಬೇಗೆಗೆ ತತ್ತರಿಸುತ್ತಿರುವ ನಡುವೆ ಕಲ್ಲಿದ್ದಲು ಕೊರತೆ ಉಂಟಾಗಿದ್ದು, ಸುಮಾರು 8 ಗಂಟೆ ವಿದ್ಯುತ್ ಪೂರೈಕೆ ಕಡಿತ ಆಗುವ ಭೀತಿ ಎದುರಾಗಿದೆ.
ಬೇಸಿಗೆ ಹಿನ್ನೆಲೆಯಲ್ಲಿ ವಿದ್ಯುತ್ ಬೇಡಿಕೆ ಹೆಚ್ಚಾಗುತ್ತಿದೆ. ಇದನ್ನು ಈಡೇರಲು ಸರಕಾರಗಳು ಹರಸಾಹಸ ಪಡುವಂತಾಗಿದೆ. ಉತ್ತರ ಪ್ರದೇಶ, ಪಂಜಾಬ್, ಆಂಧ್ರಪ್ರದೇಶ, ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಕಲ್ಲಿದ್ದಲು ಕೊರತೆ ಎದುರಿಸುವಂತಾಗಿದೆ.

ದೇಶದಲ್ಲಿ ಈಗ ಪರೀಕ್ಷೆ ಸಮಯವೂ ಆಗಿರುವುದರಿಂದ ವಿದ್ಯುತ್ ಪೂರೈಕೆ ವ್ಯತ್ಯಸ ಪರಿಣಾಮ ಬೀರುವ ಸಾಧ್ಯತೆ ಇದೆ. ಇದರ ನಡುವೆಯೂ ಹಲವು ರಾಜ್ಯಗಳಲ್ಲಿ 8 ಗಂಟೆಗಳ ವಿದ್ಯುತ್ ಕಡಿತ ಮಾಡಲಾಗುತ್ತಿದೆ.
ಅಖಿಲ ಭಾರತ ವಿದ್ಯುತ್ ಇಂಜಿನಿಯರ್ ಗಳ ಸಂಘಟನೆ ಅಧ್ಯಕ್ಷ ಶೈಲೇಂದ್ರ ದುಬೆ ಈ ವಿಷಯವನ್ನು ಒಪ್ಪಿಕೊಂಡಿದ್ದು, ದೇಶದಲ್ಲಿ ವಿದ್ಯುತ್ ಪೂರೈಕೆ ಸಮಸ್ಯೆ ಎದುರಾಗಿದೆ ಎಂದಿದ್ದಾರೆ.