• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 17, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಭಾರತದ 8 ನಿವೃತ್ತ ನೌಕಾಪಡೆ ಅಧಿಕಾರಿಗಳಿಗೆ ಖತರ್‌ನಲ್ಲಿ ಮರಣದಂಡನೆ ಶಿಕ್ಷೆ!

Any Mind by Any Mind
October 26, 2023
in ದೇಶ, ವಿದೇಶ
0
ಭಾರತದ 8 ನಿವೃತ್ತ ನೌಕಾಪಡೆ ಅಧಿಕಾರಿಗಳಿಗೆ ಖತರ್‌ನಲ್ಲಿ ಮರಣದಂಡನೆ ಶಿಕ್ಷೆ!
Share on WhatsAppShare on FacebookShare on Telegram

ADVERTISEMENT

ಇಸ್ರೇಲ್ ದೇಶಕ್ಕಾಗಿ ಗೂಢಚಾರಿಕೆ ನಡೆಸಿದ್ದಾರೆಂಬ ಆರೋಪಗಳನ್ನು ಹೊತ್ತ 8 ಭಾರತೀಯ ನೌಕಾಪಡೆಯ ಮಾಜಿ ಅಧಿಕಾರಿಗಳಿಗೆ ಖತರ್‌ ನಲ್ಲಿ ಮರಣದಂಡನೆ ಶಿಕ್ಷೆ ವಿಧಿಸಿದೆ.

ಹೌದು, ಶಿಕ್ಷೆ ವಿಧಿಸಲ್ಪಟ್ಟಿರುವ ಮಾಜಿ ನೌಕಾಪಡೆಯ ಅಧಿಕಾರಿಗಳು ಉನ್ನತ ಹುದ್ದೆಯನ್ನು ಹಿಂದೆ ಹೊಂದಿದ್ದರು ಹಾಗೂ ಪ್ರಸ್ತುತ ದಹ್ರಾ ಗ್ಲೋಬಲ್ ಟೆಕ್ನಾಲಜೀಸ್ ಎಂಡ್ ಕನ್ಸಲ್ವೆನ್ಸಿ ಸರ್ವಿಸ್‌ಗೆ ಸೇವೆ ಸಲ್ಲಿಸುತ್ತಿದ್ದರು. ಖತರ್ ಸೇನಾ ಪಡೆಗಳಿಗೆ ತರಬೇತಿ ಮತ್ತಿತರ ಸೇವೆಗಳನ್ನು ಈ ಖಾಸಗಿ ಸಂಸ್ಥೆ ಒದಗಿಸುತ್ತಿದೆ. ಈ ಎಂಟು ಮಂದಿಯಲ್ಲಿ ಕೆಲವರು ಅತಿ ಸೂಕ್ಷ್ಮವೆಂದು ತಿಳಿಯಲಾದ ಖತರ್ ಸಬ್‌ಮರೈನ್ ಯೋಜನೆಯಲ್ಲಿ ಕೆಲಸ ಮಾಡುತ್ತಿದ್ದರು.

ಎಂಟು ಮಂದಿಯೂ ಆಗಸ್ಟ್ 2022ರಿಂದ ಜೈಲಿನಲ್ಲಿದ್ದು, ಅವರ ಬಿಡುಗಡೆಗಾಗಿ ಭಾರತ ಸರ್ಕಾರ ಶ್ರಮಿಸುತ್ತಿತ್ತು. ಅವರ ಜಾಮೀನು ಅರ್ಜಿಗಳು ಹಲವು ಬಾರಿ ತಿರಸ್ಕೃತಗೊಂಡಿದ್ದವು ಹಾಗೂ ಅವರ ಬಂಧನ ಅವಧಿ ವಿಸ್ತರಣೆಗೊಂಡಿತ್ತು. ಇಂದು ಖತರ್ ನ ಕೋರ್ಟ್ ಆಫ್ ಫಸ್ಟ್ ಇನ್ಸೆನ್ಸ್ ತೀರ್ಪು ಪ್ರಕಟಿಸಿ ಮರಣದಂಡನೆ ಘೋಷಿಸಿದೆ.

ದೋಷಿಗಳೆಂದು ಘೋಷಿತರಾದವರು ಕ್ಯಾಪ್ಟನ್ ನವತೇಜ್ ಸಿಂಗ್ ಗಿಲ್, ಕ್ಯಾಪ್ಟನ್ ಬಿರೇಂದ್ರ ಕುಮಾರ್ ವರ್ಮ, ಕ್ಯಾಪ್ಟನ್ ಸೌರಭ್ ವಸಿಷ್ಠೆ ಕಮಾಂಡರ್ ಅಮಿತ್ ನಾಗ್ವಾಲ್, ಕಮಾಂಡರ್ ಪೂರ್ಣೇಂದು ತಿವಾರಿ, ಕಮಾಂಡರ್ ಸುಗುಣಕ‌ ಪಕಲ, ಕಮಾಂಡರ್ ಸಂಜೀವ್ ಗುಪ್ತಾ ಮತ್ತು ಸೈಲರ್ ರಾಗೇಶ್.

ತೀರ್ಪಿನಿಂದ ಆಘಾತವಾಗಿದೆ ಹಾಗೂ ತೀರ್ಪಿನ ವಿಸ್ಕೃತ ಪ್ರತಿಗಾಗಿ ಕಾಯಲಾಗುತ್ತಿದೆ. ಶಿಕ್ಷೆ ವಿಧಿಸಲ್ಪಟ್ಟವರ ಕುಟುಂಬಗಳೊಂದಿಗೆ ಸಂಪರ್ಕದಲ್ಲಿದ್ದೇವೆ ಹಾಗೂ ಕಾನೂನು ಹೋರಾಟದ ಎಲ್ಲಾ ಆಯ್ಕೆಗಳನ್ನು ಪರಿಗಣಿಸುತ್ತಿದ್ದೇವೆ. ಈ ಪ್ರಕರಣದ ವಿಚಾರಣೆಯ ಗೌಪ್ಯತೆಗೆ ಸಂಬಂಧಿಸಿದಂತೆ ತಾನು ಈ ಕುರಿತು ಹೆಚ್ಚಿನ ಪ್ರತಿಕ್ರಿಯೆ ನೀಡುವುದಿಲ್ಲವೆಂದು ಹೇಳಿದರೂ ಈ ಪ್ರಕರಣವನ್ನು ಗಂಭೀರವಾಗಿ ಪರಾಮರ್ಶಿಸಲಾಗುತ್ತಿದೆ ಎಂದು ವಿದೇಶಾಂಗ ಸಚಿವಾಲಯ ಹೇಳಿದೆ.

Tags: BJPCongress PartyCovid 19ಎಚ್ ಡಿ ಕುಮಾರಸ್ವಾಮಿಕರೋನಾಕೋವಿಡ್-19ನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಲಕ್ಷ್ಮೀ ಹೆಬ್ಬಾಳ್ಕರ್‌ ಪುತ್ರ, ಅಳಿಯನ ಕತ್ತಲ್ಲಿ ಹುಲಿ ಉಗುರು: ಬಂಧನಕ್ಕೆ ನೆಟ್ಟಿಗರ ಆಗ್ರಹ

Next Post

“ಯುವ” ಚಿತ್ರದ ರಿಲೀಸ್ ಡೇಟ್ ಫಿಕ್ಸ್ : ದೊಡ್ಡ ಮನೆ ಅಭಿಮಾನಿಗಳಿಗೆ ಹಬ್ಬ!

Related Posts

ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..
Top Story

ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

by ಪ್ರತಿಧ್ವನಿ
April 16, 2026
0

ನವದೆಹಲಿ :  ಕೇಂದ್ರ ಸರ್ಕಾರ ಕರೆದಿರುವ ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಇಂದು ಮೂರು ಪ್ರಮುಖ ಮಸೂದೆಗಳನ್ನು ಮಂಡಿಸಲಾಗಿದೆ. ವಿಪಕ್ಷಗಳ ಗದ್ದಲ ಹಾಗೂ ಕೋಲಾಹಲದ ನಡುವೆಯೇ ಕೇಂದ್ರ ಸಚಿವ ಅರ್ಜುನ್‌...

Read moreDetails
ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

April 16, 2026
ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

April 16, 2026
ಚೀನಾದ ಕ್ಸಿ ಜಿನ್‌ಪಿಂಗ್‌ಗೆ ಹಗ್‌ ಮಾಡಲು ಎದುರು ನೋಡುತ್ತಿದ್ದೇನೆ : ಇರಾನ್‌ ಎದುರು ಸೋತ ಟ್ರಂಪ್‌ ಹೊಸ ವರಸೆ..

ಚೀನಾದ ಕ್ಸಿ ಜಿನ್‌ಪಿಂಗ್‌ಗೆ ಹಗ್‌ ಮಾಡಲು ಎದುರು ನೋಡುತ್ತಿದ್ದೇನೆ : ಇರಾನ್‌ ಎದುರು ಸೋತ ಟ್ರಂಪ್‌ ಹೊಸ ವರಸೆ..

April 16, 2026
ಅಮೆರಿಕ–ಇರಾನ್ ಸಂಘರ್ಷಕ್ಕೆ ತಾತ್ಕಾಲಿಕ ವಿರಾಮ?

ಅಮೆರಿಕ–ಇರಾನ್ ಸಂಘರ್ಷಕ್ಕೆ ತಾತ್ಕಾಲಿಕ ವಿರಾಮ?

April 15, 2026
Next Post
“ಯುವ” ಚಿತ್ರದ ರಿಲೀಸ್ ಡೇಟ್ ಫಿಕ್ಸ್ : ದೊಡ್ಡ ಮನೆ ಅಭಿಮಾನಿಗಳಿಗೆ ಹಬ್ಬ!

"ಯುವ" ಚಿತ್ರದ ರಿಲೀಸ್ ಡೇಟ್ ಫಿಕ್ಸ್ : ದೊಡ್ಡ ಮನೆ ಅಭಿಮಾನಿಗಳಿಗೆ ಹಬ್ಬ!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada